ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೇಮ್ ಆಡುತ್ತಿದ್ದವರನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ: ಕುಮಾರಸ್ವಾಮಿ

By Mahesh
|
Google Oneindia Kannada News

Recommended Video

ಎ ಐ ಸಿ ಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನ ಪಾಪ ಪಾಂಡು ಎಂದು ಕರೆದ ಎಚ್ ಡಿ ಕೆ | Oneindia Kannada

ಬೆಂಗಳೂರು, ಏಪ್ರಿಲ್, 04: ಲೋಕಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೆ ಅತ್ತ ಮೊಬೈಲ್ ಹಿಡಿದು ಪಾಪಾ ಪಾಂಡುವಿನಂತೆ ಗೇಮ್‌ ಆಡುತ್ತಿದ್ದ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಕೊಳ್ಳೇಗಾಲ ಕ್ಷೇತ್ರದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಅಭ್ಯರ್ಥಿ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎನ್. ಮಹೇಶ್‌ ಪರ ಎಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಿದರು.

ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

ಕೊಳ್ಳೇಗಾಲದ ಎಂಜಿಎಸ್ವಿ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಹಿಂದೆ ಜೆಡಿಎಸ್ ಮುಖಂಡ ಎಚ್. ವಿಶ್ವನಾಥ್ ಕೂಡ ರಾಹುಲ್ ಗಾಂಧಿ ಅವರನ್ನು ಪಾಪಾ ಪಾಂಡು ಎಂದು ವ್ಯಂಗ್ಯ ಮಾಡಿದ್ದರು.

Elections 2018 : HD Kumaraswamy fleer at AICC president Rahul Gandhi

ಮುಷ್ಟಿ ಧಾನ್ಯಸ್ ಅಭಿಯಾನ ಆರಂಭಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧವೂ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು. ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ತೆರಳಿ ಮುಷ್ಟಿ ಅಕ್ಕಿ ಕೇಳುತ್ತಿದ್ದಾರೆ. ಅವರು ಸತ್ತಿದ್ದಾರಾ, ಬದುಕಿದ್ದಾರಾ ಎಂದು ತಿಳಿದುಕೊಳ್ಳಲು ಅಲ್ಲಿಗೆ ಹೋಗುತ್ತಿದ್ದಾರೆ ಎಂದೆನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರದ ರಾಜಕೀಯ ಚಿತ್ರಣಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರದ ರಾಜಕೀಯ ಚಿತ್ರಣ

ಜೆಡಿಎಸ್, ಬಿಜೆಪಿ ಜತೆ ಕೈ ಜೋಡಿಸಿದೆ ಎಂಬ ಆರೋಪ ಸತ್ಯಕ್ಕೆ ದೂರ. ಹಾಗೆ ಹೇಳುವವರು ಹುಚ್ಚರು. ನಾವು ಕೈ ಜೋಡಿಸಿರುವುದು ಬಿಎಸ್ಪಿ ಜೊತೆಗೆ. ಅಧಿಕಾರಕ್ಕಾಗಿ ಒಳ ಒಪ್ಪಂದ ಮಾಡಿಕೊಳ್ಳುವ ಮನಸ್ಥಿತಿ ತಮ್ಮದಲ್ಲ ಎಂದರು.

ಕೊಳ್ಳೇಗಾಲ ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಾದ ಕ್ಷೇತ್ರವಾಗಿದೆ. ಕಾಂಗ್ರೆಸ್‌ನ ಹಾಲಿ ಶಾಸಕ ಎಸ್‌. ಜಯಣ್ಣ ಪ್ರಬಲ ಆಕಾಂಕ್ಷಿಯಾಗಿದ್ದರೂ, ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಕೊಂಡ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ.

ಭಾರೀ ಕುತೂಹಲ ಹುಟ್ಟಿಸಿರುವ ಕುಮಾರಸ್ವಾಮಿ, ಕಿಚ್ಚ ಸುದೀಪ್ ಭೇಟಿ!ಭಾರೀ ಕುತೂಹಲ ಹುಟ್ಟಿಸಿರುವ ಕುಮಾರಸ್ವಾಮಿ, ಕಿಚ್ಚ ಸುದೀಪ್ ಭೇಟಿ!

ಆದರೆ, ಎ.ಆರ್.ಕೃಷ್ಣಮೂರ್ತಿಗೆ ಟಿಕೆಟ್ ನೀಡುವುದಕ್ಕೆ ಪಕ್ಷದಲ್ಲಿ ತೀವ್ರ ವಿರೋಧವಿದೆ. ಬಿಜೆಪಿಯಲ್ಲಿಯೂ ಅಭ್ಯರ್ಥಿಗಳ ಆಯ್ಕೆಯಲ್ಲಿ ತೀವ್ರ ಗೊಂದಲಗಳಿವೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಜಯಣ್ಣ ಅವರಿಗೆ ನೇರ ಎದುರಾಳಿಯಾಗಿದ್ದ ಎನ್. ಮಹೇಶ್‌ ಅವರ ಸ್ಪರ್ಧೆ ಮಾತ್ರ ಖಚಿತವಾಗಿದೆ.

ರಾಜ್ಯದಲ್ಲಿ ಜೆಡಿಎಸ್, ಬಿಎಸ್ಪಿಯೊಂದಿಗೆ 20 ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ನಾಲ್ಕು ಕ್ಷೇತ್ರಗಳಿರುವ ಚಾಮರಾಜನಗರ ಜಿಲ್ಲೆಯಲ್ಲಿಯೇ ಮೂರು ಕ್ಷೇತ್ರಗಳನ್ನು ಬಿಎಸ್ಪಿಗೆ ಬಿಟ್ಟುಕೊಡಲು ಜೆಡಿಎಸ್ ತೀರ್ಮಾನಿಸಿದೆ.

English summary
Former chief minister H.D. Kumaraswamy Fleer congress president rahul gandhi as "Paapa Pandu". Rahul was playing mobile game while serious discussions were going on in Loksabha, Kumaraswamy said. Kumaraswamy was campaigning for BSP candidate N. Mahesh in Kollegal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X