ಸಿಪಿವೈ ಬೇನಾಮಿ ಆಸ್ತಿ ಆರೋಪಕ್ಕೆ ಎಚ್ಡಿಕೆ ತಿರುಗೇಟು
ರಾಮನಗರ, ಏಪ್ರಿಲ್ 08: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಮೇಲೆ ಅಕ್ರಮ ಅಸ್ತಿ ಗಳಿಕೆ ಆರೋಪ ಮಾಡಿದ್ದ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅವರಿಗೆ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ಆರೋಪ ಸಾಬೀತು ಮಾಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಕಳೆದ ವಾರ ಚನ್ನಪಟ್ಟಣದಲ್ಲಿ ಜೆಡಿಎಸ್ ಸಮಾವೇಶ ನಡೆದ ನಂತರ ಪತ್ರಿಕಾಗೋಷ್ಠಿ ನಡೆಸಿದ್ದ ಸಿ.ಪಿ ಯೋಗೀಶ್ವರ್ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ, ಸಿಂಗಪೂರ್, ಮಲೇಷ್ಯಾದಲ್ಲಿ ಬೇನಾಮಿ ಆಸ್ತಿಗಳಿವೆ ಅದರ ದಾಖಲೆಗಳು ನನ್ನ ಬಳಿ ಇವೆ ಎಂದು ಮಾಧ್ಯಮಗಳ ಎದುರೇ ಕುಮಾರಸ್ವಾಮಿ ವಿರುದ್ಧ ಆರೋಪಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ತಮ್ಮ ವಕೀಲರ ಮೂಲಕ ನೋಟಿಸ್ ನೀಡಿದ್ದಾರೆ.

ಒಂದು ವಾರದಲ್ಲಿ ಆರೋಪಕ್ಕೆ ತಕ್ಕ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಬಹಿರಂಗ ಕ್ಷಮೆಯಾಚಿಸಬೇಕೆಂದು ಕುಮಾರಸ್ವಾಮಿ ಅವರ ಲೀಗಲ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ವಕೀಲ ಕೆ.ಎಂ.ಲೋಕೇಶ್ ಮೂಲಕ ಲೀಗಲ್ ನೋಟಿಸ್ ನೀಡಿದ್ದಾರೆ.












Click it and Unblock the Notifications