ಬಿಎಸ್ಪಿ ನಂತರ ಎನ್ ಸಿಪಿ ಜತೆ ಜೆಡಿಎಸ್ ಮೈತ್ರಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 15: ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಜತೆ ಚುನಾವಣಾ ಪೂರ್ವ ಮೈತ್ರಿ ಸಾಧಿಸಿರುವ ಜಾತ್ಯಾತೀಯ ಜನತಾ ದಳ(ಜೆಡಿಎಸ್) ಇಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ) ಜತೆ ಮೈತ್ರಿ ಸಾಧಿಸಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಅವರು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಮನೆಗೆ ಗುರುವಾರ ಬೆಳಗ್ಗೆ ತೆರಳಿ, ಒಪ್ಪಂದ ಮಾಡಿಕೊಂಡಿದ್ದಾರೆ.

Elections 2018 : JD (S) announced alliance with NCP

ಉಪಹಾರ ಕೂಟದ ನಂತರ ಟಿಕೆಟ್ ಹಂಚಿಕೆಯ ಬಗ್ಗೆ ಕೂಡಾ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಹಿರಿಯ ರಾಜಕಾರಣಿ, ಇತ್ತೀಚೆಗೆ ಜೆಡಿಎಸ್ ಗೆ ಮರಳಿರುವ ಪಿಜಿಆರ್ ಸಿಂಧ್ಯಾ ಅವರಿದ್ದರು. ಈ ಸೀಟು ಹಂಚಿಕೆ ಮತ್ತು ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಸಮ್ಮತಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಒಕ್ಕಲಿಗ-ದಲಿತ ಜಾತಿ ಸಮೀಕರಣ : ದೇವೇಗೌಡರ ಚಾಣಾಕ್ಷ ನಡೆ!

ಎನ್ ಸಿಪಿ ಹಾಗೂ ಜೆಡಿಎಸ್ ಜತೆ ಜತೆಯಾಗಿ ವಿಧಾನಸಭಾ ಚುನಾವಣೆ ಎದುರಿಸಲಿವೆ. ಎನ್ ಸಿಪಿ ಸುಮಾರು 5 ರಿಂದ 7 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮಾಹಿತಿ ಸಿಕ್ಕಿದೆ.

ಬಹುಜನ ಸಮಾಜವಾದಿ ಪಕ್ಷವು 14 ಜಿಲ್ಲೆಗಳಲ್ಲಿ 20 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಮುಂದಾಗಿದೆ. ಕರ್ನಾಟಕದ ಚುನಾವಣೆ ಮಟ್ಟಿಗೆ ಬಿಎಸ್ಪಿ ಜತೆಗಿನ ಮೈತ್ರಿ ನಂತರ ಎನ್ಸಿಪಿ ಜತೆಗಿನ ಜೆಡಿಎಸ್ ಮೈತ್ರಿ ಪ್ರಮುಖ ಬದಲಾವಣೆ ತರಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
After BSP, JD (S) announced alliance with NCP.JDS state president HD Kumaraswamy had breakfast meeting with Sharad Pawar this morning to seal deal. NCP to contest 5-7 seats says JDS.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ