ಕರ್ನಾಟಕದಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂದ ಟಿಡಿಪಿ
ಬೆಂಗಳೂರು, ಏಪ್ರಿಲ್ 10: ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಎನ್ಡಿಎ- ಟಿಡಿಪಿ ಜಗಳದ ಪರಿಣಾಮ ಬೀರುತ್ತಿದೆ. ಯಾವ ಪಕ್ಷಕ್ಕೆ ಬೇಕಾದರೂ ಮತ ಹಾಕಿ, ಆದರೆ, ಬಿಜೆಪಿಗೆ ಮತ ಹಾಕಬೇಡಿ ಎಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಕೆ.ಇ ಕೃಷ್ಣಮೂರ್ತಿ ಕರೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಮೂರ್ತಿ, ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರಪ್ರದೇಶದ ಜನತೆ, ಬಿಜೆಪಿ ವಿರುದ್ಧ ಮತ ಹಾಕಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿ, ಮಾತಿಗೆ ತಪ್ಪಿದ್ದಾರೆ.ಮೋದಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಉತ್ತರ ಹಾಗೂ ದಕ್ಷಿಣ ಭಾರತ ನಡುವೆ ಕದಂಕ ಏರ್ಪಟ್ಟಿದೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ತೆರಳದಿರಲು ಟಿಡಿಪಿ ನಿರ್ಧರಿಸಿದೆ. ಬಿಜೆಪಿ ವಿರುದ್ಧ ಪ್ರಚಾರ ಮಾಡಲು ತಂಡವೊಂದು ಈಗಾಗಲೇ ಕರ್ನಾಟಕದಲ್ಲಿ ಬೀಡು ಬಿಟ್ಟಿದೆ ಎಂಬ ಸುದ್ದಿ ಬಂದಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ಕೃಷ್ಣಮೂರ್ತಿ ನಿರಾಕರಿಸಿದರು.
ಕರ್ನಾಟಕದ ಅವಿಭಜಿತ ಕೋಲಾರ, ಬಳ್ಳಾರಿ, ಬೆಂಗಳೂರು, ಹೈದರಾಬಾದ್ ಕರ್ನಾಟಕ ಗಡಿಭಾಗ ಸೇರಿದಂತೆ ಬಹುತೇಕ ಎಲ್ಲೆಡೆ ತೆಲುಗು ಭಾಷಿಗರಿದ್ದು, ಮತ ಹಂಚಿಕೆ ವಿಷಯದಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ












Click it and Unblock the Notifications