ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್‌ನಿಂದ ಸರ್ಕಾರದ ವಿರುದ್ಧ ಆಕ್ರೋಶ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ ತಲುಪಿದೆ.

ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ಹೇಳಿದರು.
ಲೋಡ್ ಶೆಡ್ಡಿಂಗ್ ವಿಚಾರವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ.
ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ.
— CM of Karnataka (@CMofKarnataka) October 13, 2023
ಮಳೆ ಇಲ್ಲದೆ ಬರಗಾಲ ಬಂದಿದ್ದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಬೇಡಿಕೆ ಹೆಚ್ಚಿರುವುದರಿಂದ 7 ಗಂಟೆಗಳು ಮೂರು ಫೇಸ್ ನಲ್ಲಿ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು…
ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.












Click it and Unblock the Notifications