ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ
ಬೆಂಗಳೂರು, ಮೇ 29: ಕರ್ನಾಟಕದಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಅಪಾರ್ಟ್‌ಮೆಂಟ್‌ಗಳಲ್ಲಿ ವಾಹನ ಚಾರ್ಜಿಂಗ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಕೆಇಆರ್‌ಸಿ ನಿಯಮ ರೂಪಿಸಲು ಮುಂದಾಗಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅಪಾರ್ಟ್‌ಮೆಂಟ್‌ಗಳಲ್ಲಿ ಇವಿ ವಾಹನ ಚಾರ್ಜ್ ಮಾಡಲು ನಿಯಮ ರೂಪಿಸುತ್ತಿದೆ. ಖಾಸಗಿ ಕಂಪನಿಗಳು ಚಾರ್ಜಿಂಗ್ ಪಾಯಿಂಟ್ ಸ್ಥಾಪಿಸಿ, ಉದ್ಯಮ ನಡೆಸಲು ಅನುಕೂಲವಾಗುವಂತೆ ನೀತಿ ಇರಲಿದೆ.

ಪ್ರಸ್ತುತ ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ಬೇರೆ ಬೇರೆ ನಿಯಮಗಳಿವೆ. ಕೆಲವು ಜನರು ಪಾರ್ಕಿಂಗ್ ಜಾಗದಲ್ಲಿ ಸ್ವಂತ ಹಣದಲ್ಲಿ ಸ್ಟೇಷನ್ ನಿರ್ಮಿಸಿಕೊಂಡಿದ್ದಾರೆ. ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ಎಲ್ಲರಿಗೂ ಅನುಕೂಲವಾಗುವಂತೆ ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳಿವೆ.
ಕೆಇಆರ್‌ಸಿ ಈಗ ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಾಣಕ್ಕೆ ನಿಯಮಗಳೇನು?. ಮಾರ್ಗಸೂಚಿ ಏನು?, ಬಿಲ್ಲಿಂಗ್ ಸೌಲಭ್ಯಗಳೇನು? ಎಂದು ಏಕರೂಪ ನಿಯಮ ಜಾರಿಗೊಳಿಸಲಿದೆ. ಇದರಿಂದಾಗಿ ಅಪಾರ್ಟ್‌ಮೆಂಟ್‌ನಲ್ಲಿರುವ ಎಲ್ಲಾ ವಿದ್ಯುತ್ ವಾಹನ ಬಳಕೆದಾರರಿಗೆ ಅನುಕೂಲವಾಗಲಿದೆ.
ಖಾಸಗಿ ಅವರಿಗೂ ಅವಕಾಶ: ಏಪ್ರಿಲ್‌ನಲ್ಲಿ ಕೆಇಆರ್‌ಸಿ ಸಾರ್ವಜನಿಕ ಕುಂದುಕೊರತೆ ಸಭೆಗಳನ್ನು ನಡೆಸಿತ್ತು. ಆಗ ಹಲವು ಸಭೆಗಳಲ್ಲಿ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳು, ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಷನ್ ಅಪಾರ್ಟ್‌ಮೆಂಟ್‌ಗಳಲ್ಲಿ ಏಕರೂಪದ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದವು.
ಅಲ್ಲದೇ ಕೆಇಆರ್‌ಸಿ ಖಾಸಗಿ ಕಂಪನಿಗಳು ಅಪಾರ್ಟ್‌ಮೆಂಟ್‌ಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ ಮಾಡಿ, ಉದ್ಯಮ ನಡೆಸಲು ಸಹ ಅನುಕೂಲ ಮಾಡಿಕೊಡಲಿದೆ. 2019ರಲ್ಲಿಯೇ ರಾಜ್ಯದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡುವಾಗ ಚಾರ್ಜಿಂಗ್ ಪಾಯಿಂಟ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ ವಿಚಾರದಲ್ಲಿ ಅಪಾರ್ಟ್‌ಮೆಂಟ್ ನಿವಾಸಿಗಳು, ಮಾಲೀಕರ ನಡುವೆ ಆಗಾಗ ಜಟಾಪಟಿ ನಡೆಯುತ್ತಿದೆ. ಬೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿತ್ತು.
ಈಗ ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ಮಾತ್ರ ವಾಹನ ಚಾರ್ಜ್ ಮಾಡಲು ಅನುಕೂಲವಾಗುವಂತೆ ನೀತಿ ರೂಪಿಸಲಾಗಿದೆ. ಸೌರಶಕ್ತಿಯನ್ನು ಉಪಯೋಗಿಸಿಕೊಂಡು ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ ಮಾಡಲು ಅನುಕೂಲವನ್ನು ಹೊಸ ನಿಯಮ ಮಾಡಿಕೊಡಲಿದೆ.
ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದೆ. ರಾಜ್ಯದಲ್ಲಿರುವ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸ ಮಾಡುವ ಜನರು ಹೆಚ್ಚಿದ್ದಾರೆ. ಕೆಇಆರ್‌ಸಿ ಹೊಸ ನೀತಿಯಿಂದಾಗಿ ಅವರಿಗೆ ಅನುಕೂಲವಾಗಲಿದೆ.
ಪ್ರಸ್ತುತ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ವಿದ್ಯುತ್ ಚಾಲಿನ ವಾಹನಗಳ ಖರೀದಿಗೆ (25 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ವಾಹನ ಹೊರತುಪಡಿಸಿ) ತೆರಿಗೆ ವಿನಾಯಿತಿ ಇದೆ.
ರಾಜ್ಯದಲ್ಲಿ 2023-24ರ ಮಾರ್ಚ್ ಅಂತ್ಯಕ್ಕೆ ರಾಜ್ಯದಲ್ಲಿ ಒಂದೇ ವರ್ಷ 1,59,428 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ. ರಾಜ್ಯದಲ್ಲಿರುವ ಎಲೆಕ್ಟ್ರಿಕ್ ವಾಹನಗಳಲ್ಲಿ ಬೈಕ್‌ಗಳ ಸಂಖ್ಯೆಯೇ ಅಧಿಕ. ಈಗ ರಾಜ್ಯದಲ್ಲಿ ಸುಮಾರು 2.98 ಲಕ್ಷ ಬೈಕ್, 23,516 4 ಚಕ್ರದ ವಾಹನಗಳು, 18,246 ತ್ರಿ-ಚಕ್ರವಾಹನಗಳಿವೆ.
ಬೆಂಗಳೂರು ನಗರದಲ್ಲಿ ಬೆಸ್ಕಾಂ ವಾಹನ ಸವಾರರಿಗೆ ಅನುಕೂಲವಾಗಲು ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪನೆ ಮಾಡಿದೆ. ಅಲ್ಲದೇ ಅಪಾರ್ಟ್‌ಮೆಂಟ್‌ಗಳಲ್ಲಿ ಸಹ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದೆ.
ತೀರಾ ಇತ್ತೀಚೆಗೆ ಟಾಟಾ ಪವರ್ ತನ್ನ ಇವಿ ಚಾರ್ಜಿಂಗ್ ನೆಟ್‌ವರ್ಕ್ ಅಡಿಯಲ್ಲಿ ರಾಜ್ಯದಲ್ಲಿ 220 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್ ಸ್ಥಾಪಿಸಿದೆ. ಇವು ರಾಷ್ಟ್ರೀಯ ಹೆದ್ದಾರಿ, ಪ್ರವಾಸಿ ತಾಣಗಳಲ್ಲಿಯೂ ಲಭ್ಯವಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್‌ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು










Click it and Unblock the Notifications