"ಮೀಟರ್" ಮ್ಯಾಟರ್ ಇದು.. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ..!, ಎಷ್ಟು ಮತ್ತು ಯಾವಾಗಿನಿಂದ? - ಮಾಹಿತಿ
ಬೆಂಗಳೂರು, ನವೆಂಬರ್, 15: ಈಗಾಗಲೇ ಕಾಂಗ್ರೆಸ್ ಸರ್ಕಾರ "ಗೃಹಜ್ಯೋತಿ" ಯೋಜನೆಯಡಿ ಪ್ರತಿ ಮನೆಗೂ ಉಚಿತವಾಗಿ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದು, ಇದರ ಮೇಲೆ ಬಳಸುವವರು ವಿದ್ಯುತ್ ಬಿಲ್ ಕಟ್ಟಬೇಕು ಎಂದು ತಿಳಿಸಿತ್ತು. ಇದೀಗ ವಿದ್ಯುತ್ ದರ ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದೆ.
ರಾಜ್ಯದ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ಜನರ ಹೊಟ್ಟೆ ಮೇಳೆ ಬರೆ ಎಳೆದಿದೆ. ಡಿಸೆಂಬರ್ ವಿದ್ಯುತ್ ಬಿಲ್ನಲ್ಲಿ ಯೂನಿಟ್ಗೆ 85 ಪೈಸೆ ಹೆಚ್ಚುವರಿ ಶುಲ್ಕ, ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಿದೆ.
ಕಳೆದ ಜೂನ್ ತಿಂಗಳಿನಲ್ಲಿ ಅಕ್ಟೋಬರ್ ತಿಂಗಳಿನಿಂದ ಡಿಸೆಂಬರ್ವರೆಗೆ ಅನ್ವಯವಾಗುವಂತೆ ಪ್ರತಿ ಯೂನಿಟ್ಗೆ ದರ ಹೆಚ್ಚಳ ಮಾಡಲಾಗಿದ್ದ, 50 ಪೈಸೆ ಶುಲ್ಕದೊಂದಿಗೆ ನವೆಂಬರ್ ತಿಂಗಳಿಗೆ ಸೀಮಿತವಾಗಿ 35 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ಕನ್ನಡ ದುನಿಯಾ ವರದಿ ಮಾಡಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಶುಲ್ಕದ ಜೊತೆಗೆ ಡಿಸೆಂಬರ್ ಬಿಲ್ನಲ್ಲಿ ಬರುವಂತೆ ನವೆಂಬರ್ ತಿಂಗಳ ಬಳಕೆಯ ವಿದ್ಯುತ್ ಮೇಲೆ ಪ್ರತಿ ಯೂನಿಟ್ಗೆ 85 ಪೈಸೆ ಹೆಚ್ಚುವರಿ ಆಗಿ ಇಂಧನ ಹೊಂದಾಣಿಕೆ ವೆಚ್ಚ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.
ಆದ್ದರಿಂದ ಪ್ರತಿ ಯೂನಿಟ್ಗೆ ಹೆಚ್ಚುವರಿಯಾಗಿ 85 ಪೈಸೆ ಶುಲ್ಕ ನವೆಂಬರ್ ತಿಂಗಳ ವಿದ್ಯುತ್ ಬಳಕೆಗೆ ವಸೂಲಿ ಮಾಡಲಾಗುವುದು. ಅಕ್ಟೋಬರ್ ತಿಂಗಳ ಬಳಕೆಗೆ 1.01 ರೂಪಾಯಿ ನಿಗದಿ ಮಾಡಲಾಗಿತ್ತು. ವಿದ್ಯುತ್ ಕೊರತೆಯ ಕಾರಣ ಖರೀದಿ ಪ್ರಮಾಣ ಹೆಚ್ಚಾಗಿದ್ದರಿಂದ ಇಂಧನ ಹೊಂದಾಣಿಕೆ ವೆಚ್ಚ ಹೆಚ್ಚಾಗುವ ಆತಂಕ ಉಂಟಾಗಿತ್ತು. ಆದರೆ, ಕಳೆದ ತಿಂಗಳು ಎಫ್ಎಸಿಗಿಂತ 0.16 ಪೈಸೆ ಕಡಿಮೆಯಾಗಿದೆ. ನವೆಂಬರ್ ತಿಂಗಳ ವಿದ್ಯುತ್ ಬಳಕೆಯ ಮೇಲೆ ಪ್ರತಿ ಯೂನಿಟ್ಗೆ 85 ಪೈಸೆ ಹೆಚ್ಚುವರಿಯಾಗಿ ಶುಲ್ಕ ವಸೂಲಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications