ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮೇ 27ರಂದು ವಿಧಾನಸೌಧ ಬಂದ್‌ಗೆ ನೌಕರರ ಕರೆ

|
Google Oneindia Kannada News

ಬೆಂಗಳೂರು, ಮೇ 26; ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ.

ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್‌ಗೆ ಕರೆ ನೀಡಲಾಗಿದೆ.

KSRTC: ಕರ್ನಾಟಕದಲ್ಲಿ ಸಾರಿಗೆ ನೌಕರರು ಲೈನ್‌ಮನ್‌ಗಳಿಗಿಂತ ಕಡೆ ! KSRTC: ಕರ್ನಾಟಕದಲ್ಲಿ ಸಾರಿಗೆ ನೌಕರರು ಲೈನ್‌ಮನ್‌ಗಳಿಗಿಂತ ಕಡೆ !

ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ, "ಆಡಳಿತ ಸುಧಾರಣೆ ನೆಪದಲ್ಲಿ ಸಚಿವಾಲಯದ ಹಲವು ಶಾಖೆಗಳನ್ನು ವಿಲೀನ ಅಥವ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ" ಎಂದು ಹೇಳಿದ್ದಾರೆ.

ಕರ್ನಾಟಕದ ಸರ್ಕಾರಿ ಶಾಲಾ ಶಿಕ್ಷಕರಿಗೆ TESOL ತರಬೇತಿ ಕರ್ನಾಟಕದ ಸರ್ಕಾರಿ ಶಾಲಾ ಶಿಕ್ಷಕರಿಗೆ TESOL ತರಬೇತಿ

Employees Calls For Band Of Vidhana Soudha Secretariat On May 27

ನೌಕರರ ಬೇಡಿಕೆಗಳು

* ನಿವೃತ್ತಿಯಾದ ಅಧಿಕಾರಿ, ನೌಕರರ ಮರು ನೇಮಕಾತಿ ರದ್ದು ಮಾಡಬೇಕು
* 542 ಕಿರಿಯ ಸಹಾಯಕರ ಹುದ್ದೆಗಳ ಕಡಿತ ಪ್ರಸ್ತಾವನೆ ಕೈಬಿಡಬೇಕು
* ಸಚಿವಾಲಯದ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರ ಇಲಾಖೆಗೆ ಹೋಗುವ ಅವಕಾಶ ನೀಡಬೇಕು
* ಯಾವುದೇ ಹುದ್ದೆಗಳ ಕಡಿತ ಪ್ರಸ್ತಾವನೆಗಳನ್ನು ಕೈಬಿಡಬೇಕು

ಸರ್ಕಾರಿ ವೆಬ್‌ಸೈಟ್‌ಗಳ ಟೆಂಪ್ಲೇಟ್‌ಗಳನ್ನು ಕನ್ನಡದಲ್ಲಿಯೇ ಸಿದ್ಧಪಡಿಸಲು ಸಿಎಂ ಆದೇಶಸರ್ಕಾರಿ ವೆಬ್‌ಸೈಟ್‌ಗಳ ಟೆಂಪ್ಲೇಟ್‌ಗಳನ್ನು ಕನ್ನಡದಲ್ಲಿಯೇ ಸಿದ್ಧಪಡಿಸಲು ಸಿಎಂ ಆದೇಶ

"ಈ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಸ್ಪಂದಿಸದ ಹಿನ್ನಲೆಯಲ್ಲಿ ಸಚಿವಾಲಯ ಬಂದ್ ಮಾಡಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ" ಎಂದು ಪಿ. ಗುರುಸ್ವಾಮಿ ಹೇಳಿದ್ದಾರೆ.

ವಿಧಾನಸೌಧ ರಾಜ್ಯದ ಆಡಳಿತದ ಶಕ್ತಿಕೇಂದ್ರ ಪ್ರತಿದಿನ ಇಲ್ಲಿಗೆ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ರಾಜ್ಯದ ಮೂಲೆಮೂಲೆಯಿಂದ ಜನರು ಆಗಮಿಸುತ್ತಾರೆ. ಶುಕ್ರವಾರ ನೌಕರರು ಬಂದ್‌ ಕರೆ ನೀಡಿರುವುದರಿಂದ ವಿಧಾನಸೌಧದ ಕೆಲಸಗಳು ಒಂದು ದಿನದ ಮಟ್ಟಿಗೆ ಸ್ಥಗಿತಗೊಳ್ಳುವ ನಿರೀಕ್ಷೆ ಇದೆ.

ಸರ್ಕಾರ ನೌಕರರ ಜೊತೆ ಮಾತುಕತೆ ನಡೆಸಿ ಬಂದ್ ಕರೆ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.

Recommended Video

Rohith Chakrathirta ಅವರನ್ನು ಸಮರ್ಥಿಸುವ ಬರದಲ್ಲಿ BC Nagesh ಎಡವಟ್ಟು | #karnataka | Oneindia Kannada

English summary
Karnataka government secretariat employees called for band of Vidhana Soudha on May 27th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X