ಔರಾದ್: ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ ಜಿದ್ದಾಜಿದ್ದಿ
ಬೀದರ್: ಔರಾದ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಭೀಮಸೇನರಾವ್ ಶಿಂಧೆ ಅವರಿಗೆ ಪಕ್ಷ ಟಿಕೆಟ್ ನೀಡಲಿದೆ ಎಂಬ ಸುದ್ದಿ ರಾಜಕೀಯ ಸಂಚಲನ ಮೂಡಿಸಿದೆ. ಇದು ಕಾಂಗ್ರೆಸ್‌ನಲ್ಲಿನ ಮುಸುಕಿನ ಗುದ್ದಾಟವನ್ನು ಮತ್ತಷ್ಟು ಹೆಚ್ಚಿಸಿದೆ.
ಶಿಂಧೆ ಅವರಿಗೆ ಟಿಕೆಟ್ ಸಿಕ್ಕಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರ ಬೆನ್ನಲ್ಲೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಇದು ಇತರೆ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಮೂಡಿಸಿದೆ.
ತಮಗೇ ಟಿಕೆಟ್ ನೀಡುವುದಾಗಿ ಪಕ್ಷದ ಮುಖಂಡರು ಭರವಸೆ ನೀಡಿದ್ದಾರೆ. ಹೀಗಾಗಿ ಈಗಾಗಲೇ ಜನರ ಬಳಿ ತೆರಳಿ ಮತಯಾಚನೆ ಮಾಡುತ್ತಿರುವುದಾಗಿ ಶಿಂಧೆ ಹೇಳಿದ್ದಾರೆ. ಶಿಂಧೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಆಗಿದ್ದರಿಂದ ಅವರಿಗೆ ಟಿಕೆಟ್ ಸಿಗುವುದು ಖಚಿತ ಎನ್ನಲಾಗುತ್ತಿದೆ.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸುಧಾಕರ ಕೊಳ್ಳೂರ್ ಸಹ ಕಾಂಗ್ರೆಸ್‌ನ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಹೈಕಮಾಂಡ್ ತಮಗೆ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ಉದ್ದೇಶಿಸಿದ್ದಾರೆ.

'ಹತ್ತು ವರ್ಷದಿಂದ ಕೆಲಸ ಮಾಡುತ್ತಿರುವ ನನಗೆ ಅಪಾರ ಅನುಭವ ಇದೆ. ಶಾಸಕ ಪ್ರಭು ಚವಾಣ್ ವಿರುದ್ಧ ಕಾರ್ಯಕರ್ತರ ಜತೆಗೆ ಸಾಕಷ್ಟು ಹೋರಾಟಗಳನ್ನು ನಡೆಸಿದ್ದೇನೆ. ದಶಕಗಳಿಂದ ಪಕ್ಷಕ್ಕೆ ದುಡಿಯುತ್ತಿರುವ ನನ್ನನ್ನು ಬಿಟ್ಟು ಇತ್ತೀಚೆಗೆ ಪಕ್ಷಕ್ಕೆ ಸೇರಿರುವವರಿಗೆ ಟಿಕೆಟ್ ನೀಡುವುದು ಒಪ್ಪುವುದಿಲ್ಲ. ಒಂದು ವೇಳೆ ಶಿಂಧೆ ಅವರಿಗೆ ಟಿಕೆಟ್ ನೀಡಿದರೆ ಸುಮ್ಮನಿರುವುದಿಲ್ಲ' ಎಂದು ಸುಧಾಕರ ಎಚ್ಚರಿಕೆ ನೀಡಿದ್ದಾರೆ.
ಇದರಿಂದ ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಇದು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ. ಅದಕ್ಕೂ ಮೊದಲೇ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿಬಿಡುತ್ತಿದ್ದಾರೆ.

ಪ್ರಭು ಚವಾಣ್‌ಗೆ ಲಾಭ?
ಸುಧಾಕರ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರಭು ಚವಾಣ್ ಅವರಿಗೆ ಹೆಚ್ಚು ಲಾಭವಾಗಲಿದೆ ಎನ್ನುವ ಲೆಕ್ಕಾಚಾರ ನಡೆದಿದೆ.
ಈಗಾಗಲೇ ಎರಡು ಬಾರಿ ಗೆದ್ದಿರುವ ಪ್ರಭು ಚವಾಣ್ ಅವರನ್ನು ಮತ್ತೆ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸನ್ನು ಅವರು ಕಾಣುತ್ತಿದ್ದಾರೆ.
ಒಂದು ವೇಳೆ ಶಿಂಧೆ ಅವರಿಗೆ ಟಿಕೆಟ್ ದೊರೆತು, ಸುಧಾಕರ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್‌ನ ಮತಗಳು ಛಿದ್ರವಾಗಲಿದೆ. ಇದರಿಂದ ಬಿಜೆಪಿಯ ಗೆಲುವು ಅನಾಯಾಸವಾಗಲಿದೆ ಎಂಬ ಲೆಕ್ಕಾಚಾರವಿದೆ.
2008 ಮತ್ತು 2013ರ ವಿಧಾನಸಭೆ ಚುನಾವಣೆಗಳಲ್ಲಿ ಪ್ರಭು ಚವಾಣ್ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಟಿಕೆಟ್ ಸಿಗುವುದು ಖಚಿತವಾಗಿದ್ದರಿಂದ ಅವರು ಹಲವು ತಿಂಗಳ ಹಿಂದಿನಿಂದಲೇ ಪ್ರಚಾರ ಕಾರ್ಯ ಆರಂಭಿಸಿದ್ದರು. ಟಿಕೆಟ್ ಘೋಷಣೆ ಬಳಿಕ ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.
ರಸ್ತೆ, ಕುಡಿಯುವ ನೀರು ಮುಂತಾದ ಮೂಲಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಅವರು ಸ್ಪಂದಿಸಿದ್ದಾರೆ ಎನ್ನುತ್ತಾರೆ ನಿಡೋದಾ ಗ್ರಾಮದ ಅನಿಲ್‌ಕುಮಾರ್ ಪಾಟೀಲ್.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications