ವಕ್ಪ್ ಆಸ್ತಿ ವಿವಾದ: ತಕ್ಷಣ ಎಸ್ ಐಟಿ ಅಥವಾ ಸಿಬಿಐ ತನಿಖೆಗೆ ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ, ನವೆಂಬರ್‌ 04: ವಕ್ಪ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿಗಳು ತಕ್ಷಣ ಎಸ್ ಐಟಿ ಅಥವಾ ಸಿಬಿಐ ತನಿಖೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಕ್ಪ್ ಸಚಿವರಾದ ಜಮೀರದ ಅಹಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೊ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ.

Encroachment Of Wakf Properties Former Karnataka CM Basavaraj Bommai Seeks SIT Probe

ನಾನು ಯಾವುದೇ ವಕ್ಪ್ ಬೋರ್ಡ್ ಸಭೆ ಮಾಡಿಲ್ಲ. ವಕ್ಪ್ ಬೋರ್ಡ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅನ್ವರ್ ಮಾನಿಪ್ಪಾಡಿ ವರದಿಯಲ್ಲಿರುವಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಪಡಿಸಿಕೊಳ್ಳಬೇಕೆಂದು ಹೇಳಿರುವುದನ್ನು ತಿರುಚಿದ್ದಾರೆ. ಆ ಸಂದರ್ಭದಲ್ಲಿ ರೈತರ ಜಮೀನಿಗೆ ನೊಟೀಸ್ ಕೊಡುವುದಾಗಲಿ, ಪಹಣಿ ತಿದ್ದುಪಡಿ ಮಾಡುವುದಾಗಲಿ ಯಾವೂದೂ ವಿಷಯ ನಮ್ಮ ಮುಂದೆ ಪ್ರಸ್ತಾಪವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿರುವಂತೆ ಕಾಂಗ್ರೆಸ್ ನ್ ಕೆಲವು ದೊಡ್ಡ ನಾಯಕರು ಮೋಸದಿಂದ ಎಷ್ಡೆಷ್ಟು ವಕ್ಪ್ ಆಸ್ತಿ ನುಂಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು.
ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ. ಸಚಿವ ಜನೀರ್ ಅವರು ರೈತರಿಗೆ ನೋಟಿಸ್ ಕೊಡುವ ಮೊದಲು ಕಾಂಗ್ರೆಸ್ ನಾಯಕರು ಎಲ್ಲೆಲ್ಲಿ ವಕ್ಪ್ ಆಸ್ತಿ ಹಡಪ್ ಮಾಡಿದ್ದಾರೆ‌ ಅದನ್ನು ಕೂಡಲೇ ರಿಕವರಿ ಮಾಡಲಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟೀಸ್ ಕೊಡುವುದಿಲ್ಲ ಅನ್ನುವುದು ಏನು ಗ್ಯಾರೆಂಟಿ. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನಿಜವಾಗಲೂ ಕಾಳಜಿ, ಗೌರವ ಇದ್ದರೆ, ರೈತರ ಆಸ್ತಿ ಉಳಿಸಬೇಕೆಂಬ ಮನಸ್ಸಿದ್ದರೆ ಕೂಡಲೆ ವಕ್ಪ್ ಗೆಜೆಟ್ ನೊಟಿಫಿಕೇಶ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ. ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯ ದೊಡ್ಡದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸವಣೂರಿನಲ್ಲಿ ತಾವು ಯಾವ ಪರಿಸ್ಥಿತಿಯಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದೀರಾ ಎಂದು ನಮಗೆ ಅರಿವಿದೆ. ಆದರೂ, ನೀವು ಎದೆಗುಂದದೆ ಮುನ್ನಡೆಯುತ್ತಿದ್ದೀರಿ ನಮ್ಮನ್ನೂ ಮುನ್ನಡೆಸುತ್ತಿದ್ದೀರಿ, ನಾಲ್ಕು ಚುನಾವಣೆಯಿಂದಲೂ ನನ್ನನ್ನು ಗೆಲ್ಕಿಸುತ್ತ ಬಂದಿದ್ದೀರಿ, ನನ್ನ ಮೇಲೆ ಅಷ್ಟೊಂದು ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದೀರಿ, ನಾನೇನಾದರೂ ಅಭಿವೃದ್ಧಿ ಕೆಲಸ ಮಾಡಿದ್ದರೆ ನಿಮ್ಮ‌ ಪ್ರೀತಿ ವಿಶ್ವಾಸದ ಮುಂದೆ ಅದು ದೊಡ್ಡ ಕೆಲಸವಲ್ಲ ಎಂದರು.

ಒಂದು ಬಾರಿ ಕೃಷ್ಣನ ಮೇಲೆ ಯಾರ ಪ್ರೀತಿ ದೊಡ್ಡದಿದೆ ಅಂತ ಪರೀಕ್ಷೆ ಮಾಡಲು ಸುಭದ್ರಾ ರುಕ್ಮಿಣಿ ನಡುವೆ ಸ್ಪರ್ಧೆ ಏರ್ಪಟ್ಟಿತು. ಒಂದು ತಕ್ಕಡಿಯಲ್ಲಿ ಕೃಷ್ಣನನ್ನು ಕೂಡಿಸಿ ಇನ್ನೊಂದು ತಕ್ಕಡಿಯಲ್ಲಿ ಸುಭದ್ರಾ ತನ್ನ ಮೈಮೇಲೆ ಇರುವ ಎಲ್ಲ ಆಭರಣಗಳನ್ನು ಹಾಕಿದರೂ ಕೃಷ್ಣನ ತಕ್ಕಡಿ ಮೇಲೆ ಏರಲಿಲ್ಲ. ಆದರೆ, ರುಕ್ಮಿಣಿ ಮೂರು ಪತ್ತರಿ ಎಲೆಗಳನ್ನು ಪೂಜಿಸಿ ತಕ್ಕಡಿಯ ಮೇಲೆ ಇಟ್ಟಲು ಕೃಷ್ಣನ ತಕ್ಕಡಿ ಮೇಲೆ ಏರಿತು. ಭಕ್ತಿ, ಅಭಿಮಾನದ ಪ್ರೀತಿಯ ಮುಂದೆ ಯಾವ ಪ್ರೀತಿಯೂ ದೊಡ್ಡದಲ್ಲ ಎಂದು ಹೇಳಿದರು.

ಶಿಗ್ಗಾವಿ ಸವಣೂರಿನಲ್ಲಿ ಯಾರಾದರೂ ಶಾಸಕಾಗುತ್ತಾರೆ ಎನ್ನುವಂತಿಲ್ಲ. ಈ ಕ್ಷೇತ್ರದಲ್ಲಿ ಶಾಂತಿಯುತ ವಾತಾವರಣ ಬೇಕಾ, ಅಥವಾ ಪೊಲಿಸ್ ಸ್ಟೇಷನ್ ಗೆ ಅಲೆದಾಡುವ ವಾತಾವರಣ ಬೇಕಾ ಎನ್ನುವುದನ್ನು ಈ ಚುನಾವಣೆಯಲ್ಲಿ ನಿರ್ಧರಿಸಬೇಕು ಎಂದರು.

ಸವಣೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕರ ಇತ್ತು. ದೊಡ್ಡ ಮಟ್ಟದ ಹೋರಾಟ ನಡೆಯುತ್ತಿತ್ತು. ಈಗ ಅದೆಲ್ಲ ಹೋಗಿ ಜನರಿಗೆ ಕುಡಿಯುವ ನೀರು ಲಭ್ಯವಾಗುತ್ತಿದೆ. ನಾನು 2018 ರಲ್ಲಿ ಗೆದ್ದಾಗ ಒಂದು ಗಲ್ಲಿಲಿ ಗುದ್ದಲಿ ಪೂಜೆ ಮಾಡಿದಾಗ ಒಬ್ಬ ಅಲ್ಪಸಂಖ್ಯಾತ ವಯಸ್ಸಾದ ಅಜ್ಜಿ ಮರೆಯಲ್ಲಿ ನಿಂತು ನೋಡುತ್ತಿದ್ದರು. ಏನು ನೋಡುತ್ತಿರುವೆ ಎಂದು ಅಜ್ಜಿಯನ್ನು ಕೇಳಿದೆ. ಅವರು ನಾನು ನಿಮ್ಮನ್ನು ನೋಡಲು ಬಂದಿದ್ದೇನೆ. ನಾನು ಐವತ್ತು ವರ್ಷದ ಹಿಂದೆ ಸೊಸೆಯಾಗಿ ಇಲ್ಲಿಗೆ ಬಂದಿದ್ದೇನೆ, ಬಾವಿ ನೀರು ಸೇದುವುದು ತಪ್ಪಿರಲಿಲ್ಲ. ನೀವು ಮನೆಗಳಿಗೆ ನೀರು ಬರುವಂತೆ ಮಾಡಿದ್ದೀರಿ, ನಿಮ್ಮ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಾನು ಯಾವುದೇ ಭೇದ ಭಾವ ಇಟ್ಟುಕೊಳ್ಳದೇ ಅಭಿವೃದ್ಧಿ ಕೆಲಸ ಮಾಡುತ್ತ ಬಂದಿದ್ದೇನೆ. ಸವಣೂರಿನಲ್ಲಿ ಅಭಿವೃದ್ಧಿ ಕಾರ್ಯ ನಿರಂತರ ಮುಂದುವರೆಯಬೇಕು. ಈ ಬಾರಿ ಪಕ್ಷ ಭರತ್ ಬೊಮ್ಮಾಯಿಯನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅವನನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಥ ಮುಂದುವರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+