ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಬೃಹತ್ ಭ್ರಷ್ಟಾಚಾರ ಆರೋಪ: ಸ್ಪಷ್ಟನೆ ನೀಡಿದ ಕೆ ಜೆ ಜಾರ್ಚ್
ಬೆಂಗಳೂರು, ಮಾರ್ಚ್ 26: ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ. ಈ ಸ್ಮಾರ್ಟ್‌ಮೀಟರ್ ಟೆಂಡರ್ ಕುರಿತು ಇಂಧನ ಸಚಿವರಾದ ಕೆ ಜೆ ಜಾರ್ಚ್ ಅವರು ಪ್ರತಿಕ್ರಿಯಿಸಿದ್ದು, ಸ್ಮಾರ್ಟ್‌ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ ಜೆ ಜಾರ್ಜ್ ಅವರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ ಸಿ) ಆದೇಶದಂತೆ ರಾಜ್ಯದಲ್ಲಿ ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಮಾತ್ರ ಮೀಟರ್ ಅಳವಡಿಸಲಾಗುತ್ತಿದೆ. ಅದಕ್ಕಾಗಿ ಕೆಟಿಪಿಪಿ ಕಾಯ್ದೆ ಅನುಸಾರ ಟೆಂಡರ್ ಕರೆದು ನಂತರ ಪ್ರಿಬಿಡ್ ಸಭೆಯಲ್ಲಿ ಆಸಕ್ತ ಬಿಡ್ಡುದಾರರ ಪ್ರಶ್ನೆಗಳಿಗೆ ಉತ್ತರಿಸಲಾಗಿತ್ತು. ಬಳಿಕ ಅತಿ ಕಡಿಮೆ ಬಿಡ್ ಮಾಡಿದ್ದ ರಾಜಶ್ರೀ ಎಂಟರ್ ಪ್ರೈಸಸ್‌ನವರಿಗೆ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದರು.

ಬಿಜೆಪಿಯವರು ವಿಧಾನಸಭೆಯಲ್ಲಿ ಸ್ಮಾರ್ಟ್ ಮೀಟರ್ ಪ್ರಸ್ತಾಪಿಸಿದಾಗ ಉತ್ತರ ಕೊಡುವುದಾಗಿ ಹೇಳಿದ್ದೆ. ಅದರಂತೆ ಮಾರನೇ ದಿನ ಉತ್ತರ ಕೊಡಲು ಸಿದ್ಧವಾಗಿಯೇ ಬಂದು ಕಲಾಪ ಆರಂಭವಾಗುವಾಗ ಅವಕಾಶ ಕೇಳಿದ್ದೆ. ಆದರೆ, ಸಭಾಧ್ಯಕ್ಷರು ಬಜೆಟ್ ಕುರಿತ ಚರ್ಚೆಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಉತ್ತರಿಸಿದ ಬಳಿಕ ನನಗೆ ಉತ್ತರಿಸಲು ಅವಕಾಶ ನೀಡುವುದಾಗಿ ಹೇಳಿದರು. ಆದರೆ, ಮುಖ್ಯಮಂತ್ರಿಗಳ ಉತ್ತರದ ವೇಳೆಯೇ ಬಿಜೆಪಿಯವರು ಗದ್ದಲ ಮಾಡಿ ಕಲಾಪ ನಡೆಸಲು ಅವಕಾಶ ಕೊಡಲಿಲ್ಲ. ಗಲಾಟೆ ಮಾಡಿ ಉತ್ತರ ಕೊಡಲೂ ಅವಕಾಶ ನೀಡಲಿಲ್ಲ. ಹಾಗಾಗಿ ನನಗೆ ಉತ್ತರ ನೀಡಲು ಸಾಧ್ಯವಾಗಲಿಲ್ಲ. ಇದನ್ನು ಮುಚ್ಚಿಟ್ಟು ಬಿಜೆಪಿಯವರು ನನ್ನ ಮೇಲೆ ವೃಥಾರೋಪ ಮಾಡುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ಜಾರಿಗೊಳಿಸಿದ್ದರೆ ಅಥವಾ ಕೇಂದ್ರ ಸರ್ಕಾರದ ನಿರ್ದೇಶನದಂತೆ ನಾವು ಮುಂದುವರಿದಿದ್ದರೆ ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳ ಜತೆಗೆ ಹಾಲಿ ಸ್ಥಾಪನಗಳಿಗೂ (2.16 ಕೋಟಿ) ಸ್ಮಾರ್ಟ್ ಮೀಟರ್ ಅಳವಡಿಸಬೇಕಿತ್ತು. ಆದರೆ, ಗ್ರಾಹಕರ ಮೇಲೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಅದನ್ನು ಜಾರಿಗೊಳಿಸಲಿಲ್ಲ. ಕೆಇಆರ್‌ಸಿ ಆದೇಶದಂತೆ ಹೊಸ ಮತ್ತು ತಾತ್ಕಾಲಿಕ ಸ್ಥಾಪನಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತಿದೆ. ನಮಗೆ ಜನಹಿತ ಮುಖ್ಯವಾಗಿದ್ದರಿಂದ ಈ ನಿರ್ಧಾರ ಕೈಗೊಂಡೆವು ಎಂದು ಹೇಳಿದರು.
ಆರ್ ಡಿಎಸ್‌ಎಸ್ ಅನುಷ್ಠಾನಗೊಳಿಸಿರುವ ರಾಜ್ಯಗಳ ವಿದ್ಯುತ್ ಸರಬರಾಜು ಕಂಪನಿಗಳು ಎಲ್ಲಾ ಮನೆಗಳಲ್ಲಿ ಏಕ ಕಾಲದಲ್ಲಿ (Bulk replacement) ಸ್ಮಾರ್ಟ್ ಮೀಟರ್ ಅಳವಡಿಸಿ ಅದಕ್ಕೆ ಪೂರಕವಾದ ತಾಂತ್ರಿಕ ನಿರ್ವಹಣೆ ವೆಚ್ಚವನ್ನು ಪ್ರತಿ ತಿಂಗಳ ಬಿಲ್‌ನಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತವೆ. ಅಂದರೆ, ಕಂತಿನಲ್ಲಿ ಸ್ಮಾರ್ಟ್‌ಮೀಟರ್ ಹಾಗೂ ತಾಂತ್ರಿಕ ನಿರ್ವಹಣೆ ವೆಚ್ಚವನ್ನು ಗ್ರಾಹಕರಿಂದ ವಸೂಲಿ ಮಾಡುತ್ತವೆ. ಆದರೆ, ನಮ್ಮ ರಾಜ್ಯದಲ್ಲಿ ಇರುವ ನಿಯಮದ ಪ್ರಕಾರ, ವಿದ್ಯುತ್ ಮೀಟರ್‌ಗಳನ್ನು ಗ್ರಾಹಕರೇ ಭರಿಸಬೇಕು.
ಆರ್‌ಡಿಎಸ್ಎಸ್ ಅನುಷ್ಠಾನಗೊಳಿಸದ ಕಾರಣ ನಮ್ಮಲ್ಲಿ ಹೊಸ ಮತ್ತು ತಾತ್ಕಲಿಕ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಸುತ್ತಿರುವುದರಿಂದ ಮೀಟರ್ ದರವನ್ನು (ಸಿಂಗಲ್ ಫೇಸ್ - 4,998 ರೂ.) ಆ ಗ್ರಾಹಕರೇ ಭರಿಸಬೇಕಾಗುತ್ತದೆ. ಪ್ರತಿ ತಿಂಗಳ ತಾಂತ್ರಿಕ ನಿರ್ವಹಣೆ ವೆಚ್ವವನ್ನು ಬೆಸ್ಕಾಂ ಭರಿಸಿ, ನಂತರ ದರ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ತಾತ್ಕಾಲಿಕ ಸಂಪರ್ಕಕ್ಕೆ ಪ್ರಿ-ಪೇಯ್ಡ್‌ಗೆ ಮಾತ್ರ ಅವಕಾಶವಿದ್ದು, ಪೋಸ್ಟ್ ಪೇಯ್ಡ್ ಆಯ್ಕೆ ಇರುವುದಿಲ್ಲ. ಹೊಸ ಸಂಪರ್ಕಗಳಿಗೆ ಪ್ರಿ-ಪೇಯ್ಡ್ ಹಾಗೂ ಪೋಸ್ಟ್-ಪೇಯ್ಡ್ ಆಯ್ಕೆ ಲಭ್ಯವಿರುತ್ತದೆ ಎಂದು ಹೇಳಿದರು.
ಕೇಂದ್ರ ಇಂಧನ ಪ್ರಾಧಿಕಾರದ ನಿರ್ದೇಶನದಂತೆ 2021-22 ನೇ ಸಾಲಿನಲ್ಲಿ ಆರ್‌ಡಿಎಸ್ (RDSS- Revamped Distribution Sector Scheme) ಯೋಜನೆ ರೂಪಿಸಿದ್ದು, ಕೇಂದ್ರದ ಇಂಧನ ಸಚಿವಾಲಯವು ಮಾರ್ಗಸೂಚಿ ಹೊರಡಿಸಿ, ವಿದ್ಯುತ್ ಸರಬರಾಜು ತಮ್ಮ ಸಬ್ಸಿಡಿ ಸೇರಿದಂತೆ ಎಲ್ಲಾ ಬಾಕಿಗಳನ್ನು ಪಾವತಿಸಿದ್ದರೆ ಸ್ಮಾರ್ಟ್ ಮೀಟರ್ ಅಳವಡಿಸಲು ಕೇಂದ್ರದಿಂದ ಪ್ರತಿ ಮೀಟರ್ಗೆ ಗರಿಷ್ಠ 900 ರೂ. ಅಥವಾ ಮೀಟರ್ ದರದ ಶೇ. 15ರಷ್ಟನ್ನು ಸಬ್ಸಿಡಿಯಾಗಿ ನೀಡುವುದಾಗಿ ಹೇಳಿತ್ತು. ಅದರಂತೆ ದೇಶದ ಇತರೆ ರಾಜ್ಯಗಳು ಯೋಜನೆಯಡಿ, ಏಕಕಾಲದಲ್ಲಿ ಎಲ್ಲಾ ಗ್ರಾಹಕರ ಸ್ಥಾಪನಗಳಿಗೂ ಸ್ಮಾರ್ಟ್ ಮೀಟರ್ ಅಳವಡಿಸಿದ್ದವು. ಆದರೆ, ನಮ್ಮ ರಾಜ್ಯ ಆಗ ಯೋಜನೆ ಅಳವಡಿಸಿಕೊಂಡಿರಲಿಲ್ಲ ಎಂದು ತಿಳಿಸಿದರು.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು 2024ರ ಫೆಬ್ರವರಿ 6 ಮತ್ತು ಮಾರ್ಚ್ 6ರಂದು ಹೊರಡಿಸಿದ್ದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಎಲ್ಲ ತಾತ್ಕಾಲಿಕ ಸ್ಥಾಪನಗಳು ಹಾಗೂ ಹೊಸ ಸ್ಥಾಪನಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿತ್ತು. ಅದರಂತೆ, ಕೇಂದ್ರ ವಿದ್ಯುತ್ ಸಚಿವಾಲಯ ನಿಗದಿಪಡಿಸಿರುವ ಸಾಮಾನ್ಯ ಬಿಡ್ಡಿಂಗ್ ದಾಖಲೆ (Standard Bidding Document)ಗಳ ಪ್ರಕಾರ ಹಾಗೂ ಕೆಟಿಪಿಪಿ ಕಾಯ್ದೆ ಅನುಸಾರ 2024ರ ಸೆ. 26ರಂದು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಯನ್ನೂ ಹೊರಡಿಸಲಾಗಿತ್ತು. ಈ ಟೆಂಡರ್‌ನಲ್ಲಿ ಕಡಿಮೆ ದರ ಬಿಡ್ ಮಾಡಿದ್ದ ರಾಜಶ್ರೀ ಎಲೆಕ್ಟ್ರಿಕಲ್ಸ್ ಸಂಸ್ಥೆಗೆ 2024ರ ಡಿಸೆಂಬರ್ 23ರಂದು ಗುತ್ತಿಗೆ ನೀಡಲಾಯಿತು ಎಂದು ಹೇಳಿದರು.
ರಾಜ್ಯದಲ್ಲಿ ಆರ್‌ಡಿಎಸ್ ಯೋಜನೆ ಜಾರಿಯಲ್ಲಿ ಇಲ್ಲದಿರುವುದರಿಂದ ಸ್ಮಾರ್ಟ್ ಮೀಟರ್ ದರ ಹಾಗು ಅಡ್ವಾನ್ಸ್‌ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (AMI) ತಂತ್ರಜ್ಞಾನದ ದರವನ್ನು ಟೆಂಡರ್ ಮೂಲಕ ಪ್ರತ್ಯೇಕವಾಗಿ ಪಡೆಯಲಾಗಿರುತ್ತದೆ. ಕೆಟಿಪಿಪಿ ಕಾಯ್ದೆಯ ಕೆಡಬ್ಲ್ಯು 4ರ ನಿಬಂದನೆ ಅನ್ವಯ, ಹಣಕಾಸು ವಹಿವಾಟನ್ನು ನಿಗದಿಪಡಿಸಲಾಗಿರುತ್ತದೆ. ಅದರಂತೆ, 354 ಕೋಟಿ ರೂ. ವಹಿವಾಟು ಹೊಂದಿರುವ ರಾಜಶ್ರೀ ಎಲೆಕ್ಟ್ರಿಕಲ್ಸ್ ಸಂಸ್ಥೆಯು ಸುಮಾರು 15 ವರ್ಷಗಳಿಂದ ಅಸ್ತಿತ್ವದಲ್ಲಿದೆ.
ಕ್ಲಾಸ್ 1 ಸೂಪರ್ ಗ್ರೇಡ್ ಎಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದಾರೆ. ಸಾಮಾನ್ಯ ಬಿಡ್ಡಿಂಗ್ ದಾಖಲೆ (SBD) ಹಾಗೂ ಟೆಂಡರ್‌ನಲ್ಲಿ ವಿಧಿಸಿರುವ ಷರತ್ತಿನಂತೆ ಸ್ಮಾರ್ಟ್ ಮೀಟರ್ ತಯಾರಿಸುವ ಮೂರು ಕಂಪನಿಗಳಾದ ಸ್ನೈಡರ್, ಜೀನಸ್ ಮತ್ತು ಓಪಸ್ ಜತೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಅದೇ ರೀತಿ ಎಸ್‌ಬಿಡಿ ಮತ್ತು ಟೆಂಡರ್‌ನಲ್ಲಿ ವಿಧಿಸಿರುವ ಷರತ್ತಿನಂತೆ, ಸಾಫ್ಟ್‌ವೇರ್ ಸೇವೆ ಒದಗಿಸುವ ಕಂಪನಿಯಾದ ಬಿಸಿಐಟಿಎಸ್‌ರವರ ಜತೆಗೂ ಒಡಂಬಡಿಕೆ ಮಾಡಿಕೊಂಡಿರುತ್ತಾರೆ ಎಂದು ವಿವರಿಸಿದರು.
-
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications