ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಬಿಲ್ ಅಕ್ರಮ: ಬೆಸ್ಕಾಂ ಸಿಬ್ಬಂದಿ ಅಮಾನತು ಮಾಡಿದ ಸಚಿವ ಸುನಿಲ್ ಕುಮಾರ್!

|
Google Oneindia Kannada News

ಬೆಂಗಳೂರು, ಸೆ. 04: ವಿದ್ಯುತ್ ಬಿಲ್‌ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ್ದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬುವರೇ ಅಮಾನತಾದ ಸಿಬ್ಬಂದಿಯಾಗಿದ್ದಾರೆ.

ಪ್ರತಿ ತಿಂಗಳು ಬಿಲ್ ಮಾಡುವಾದ ಬೆಸ್ಕಾಂಗೆ ನಷ್ಠವನ್ನುಂಟು ಮಾಡಿದ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್‌ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್‌ ಮೊತ್ತವನ್ನು ಕಡಿಮೆ ಮಾಡಿದ್ದಾರೆ. ಆ ಮೂಲಕ ಬೆಸ್ಕಾಂಗೆ ವಿಸ್ತವಿಕವಾಗಿ ಬರಬೇಕಾದ ಆದಾಯದಲ್ಲಿ ನಷ್ಟ ಉಂಟಾಗಲು ಈ ಮೂವರು ಕಾರಣರಾಗಿದ್ದಾರೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

Energy Minister Sunil Kumar orders suspension of 3 staff of Bescom in electricity bill scam

ಪ್ರಸ್ತುತ ಈ ಮೂವರು ಸಿಬ್ಬಂದಿ ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿ ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿದೆ. ಜೊತೆಗೆ 8 ಆರ್ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿದೆ. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಜೊತೆಗೆ ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Energy Minister Sunil Kumar orders suspension of 3 staff of Bescom in electricity bill scam

"ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು" ಎಂದು ಇದೇ ಸಂದರ್ಭದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

Recommended Video

ಇಸೋಲೇಷನ್ ಗೆ ಒಳಗಾದ ಟೀಮ್ ಇಂಡಿಯಾ ಕೋಚ್! | Oneindia Kannada

English summary
Energy Minister Sunil Kumar orders suspension of 3 staff of Bescom in electricity bill scam. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X