ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಜಿನಿಯರಿಂಗ್ ಪ್ರವೇಶಾತಿ: ಡಿ.31ರವರೆಗೂ ಅವಕಾಶ ನೀಡಿದ ಸುಪ್ರೀಂ ಕೋರ್ಟ್

|
Google Oneindia Kannada News

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಕೋರ್ಸುಗಳಿಗೆ ಡಿ.31ರವರೆಗೂ ಪ್ರವೇಶಾವಕಾಶ ಕಲ್ಪಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಎಂಜಿನಿಯರಿಂಗ್ ಕೋರ್ಸುಗಳಿಗೆ ಪ್ರತೀವರ್ಷ ಜುಲೈ 31ರೊಳಗೆ ಪ್ರವೇಶಾತಿ ಮುಗಿಸುವಂತೆ ಈ ಹಿಂದೆ (2012ರಲ್ಲಿ) ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸುಗಳಿಗೆ ಡಿ.31ರವರೆಗೂ ಪ್ರವೇಶ ಪಡೆಯಲು ಅವಕಾಶ ಕೊಡಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸಿತ್ತು. ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ರಾಜ್ಯದ ಮನವಿಯನ್ನು ಪುರಸ್ಕರಿಸಿದೆ ಎಂದು ತಿಳಿಸಿದರು.

ಸುಪ್ರೀಂಕೋರ್ಟಿನ ಆದೇಶದಂತೆ ಇದೇ ತಿಂಗಳ 31ರೊಳಗೆ ಎಂಜಿನಿಯರಿಂಗ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಗಿಸಬೇಕಾಗಿದೆ. ಹೀಗಾಗಿ ವೈದ್ಯಕೀಯ ಸೀಟು ಹಂಚಿಕೆಯ ನಂತರ ಖಾಲಿ ಉಳಿದ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಫಾರ್ಮಸಿ ಮುಂತಾದ ಸೀಟುಗಳಿಗೆ ಮತ್ತೊಮ್ಮೆ ಕ್ಯಾಶುಯಲ್ ವೇಕೆನ್ಸಿ ರೌಂಡ್' ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು.

Engineering admission: Supreme Court granted admission till Dec.31

ಹಿಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳನ್ನು ಒಟ್ಟಿಗೇ ಹಂಚಲಾಗುತ್ತಿತ್ತು. ಆದರೆ, ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಆದಾಯ ಮಿತಿ ನಿರ್ಧಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದು ಇತ್ಯರ್ಥವಾಗುವವರೆಗೂ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶಾತಿ ಕೈಗೊಳ್ಳದಂತೆ ತಡೆಯಾಜ್ಞೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ (ಎಐಸಿಟಿಇ) ಮತ್ತು ಭಾರತೀಯ ಮೆಡಿಕಲ್ ಕೌನ್ಸಿಲ್ ಜತೆ ಚರ್ಚಿಸಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಸಂಯೋಜಿತವಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸುವಂತೆ ಕೇಂದ್ರ ಸರಕಾರವನ್ನು ಕೋರಲಾಗುವುದು ಎಂದು ಅವರು ಹೇಳಿದರು.

23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ:

ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Engineering admission: Supreme Court granted admission till Dec.31

ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, 'ಓಲಾ, ಎಚ್‌ಪಿ ಸೇರಿದಂತೆ 34 ಕಂಪನಿಗಳು ಈಗಾಗಲೇ ಮೇಳದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿವೆ. ಇನ್ನೂ 70 ಕಂಪನಿಗಳು ಉತ್ಸುಕವಾಗಿವೆ. ಮೇಳವು ಸಂಪೂರ್ಣವಾಗಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು 'ಸ್ಕಿಲ್ ಕನೆಕ್ಟ್ ಪೋರ್ಟಲ್'ನಲ್ಲಿ ಹೆಸರು ನೋಂದಾಯಿಸಿ ಕೊಳ್ಳಬೇಕು' ಎಂದು ಅವರು ವಿವರಿಸಿದರು.

ನೋಂದಣಿ ಮಾಡಿಕೊಂಡ ನಂತರ ಉದ್ಯೋಗದ ಸ್ವರೂಪ, ಯಾವ ಕಂಪನಿಯು ಅಭ್ಯರ್ಥಿಯನ್ನು ಸಂದರ್ಶಿಸಲಿದೆ ಎನ್ನುವ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುವುದು. 23ರಂದು ನಡೆಯುವ ಮೊದಲ ಸುತ್ತಿನ ಸಂದರ್ಶನದಲ್ಲಿ ಆಯ್ಕೆಯಾಗುವವರಿಗೆ ಮರುದಿನವಾದ ಡಿ.24 ರಂದು ಎರಡನೇ ಸುತ್ತಿನ ಸಂದರ್ಶನ ನಡೆಯಲಿದೆ ಎಂದು ಸಚಿವರು ಹೇಳಿದರು.

ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳಿಗೆ ಏನು ಕೊರತೆ ಇದೆ ಎನ್ನುವುದನ್ನು ಕಂಡುಕೊಂಡು, ಅಂತಹವರಿಗೆ ಸೂಕ್ತ ಮತ್ತು ಅಗತ್ಯ ಕೌಶಲ್ಯ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು. 80 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ 40 ಸಾವಿರ ಜನರಲ್ಲಿ ಸರಿಯಾದ ಕೌಶಲ್ಯಗಳೇ ಇಲ್ಲ. ಈ ಕೊರತೆಯನ್ನು ನಿವಾರಿಸಲು ಸರಕಾರ ಬದ್ಧವಾಗಿದೆ ಎಂದರು.

Recommended Video

ಸಿಡಿಲು ಮಿಂಚಿನಿಂದ ಇಂಗ್ಲೆಂಡ್ & ಅಸ್ಟ್ರೇಲಿಯಾ ಆಟಗಾರರು ಎಸ್ಕೇಪ್ ಆಗಿದ್ದು ಹೇಗೆ? | Oneindia Kannada

English summary
The Supreme Court has granted permission for admission to engineering, pharmacy, agriculture and other courses in the state till December 31: Higher Education Minister Dr. C.N. Said Ashwathnarayan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X