ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಶೇ.10ರಷ್ಟು ಹೆಚ್ಚಳ
ಬೆಂಗಳೂರು, ಜು.6: ಕರ್ನಾಟಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಒತ್ತಡಕ್ಕೆ ಮಣಿದು ಸರ್ಕಾರ ಎಂಜಿನಿಯರಿಂಗ್ ಶುಲ್ಕ ಶೇ.10ರಷ್ಟು ಹೆಚ್ಚಳಕ್ಕೆ ಅಸ್ತು ಎಂದಿದೆ.
ಕರ್ನಾಟಕದಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಕಳೆದ ವರ್ಷಕ್ಕಿಂತ ಶೇ.10 ರಷ್ಟು ಹೆಚ್ಚುವರಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಗುರುವಾರ ಖಾಸಗಿ ಕಾಲೇಜು ಹಾಗೂ ಸರ್ಕಾರದ ಮಧ್ಯೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿಎಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಆರ್ಕಿಟೆಕ್ಚರ್ ವಾರ್ಷಿಕ ಶುಲ್ಕ 15 ಸಾವಿರ ಹಾಗೂ ವಿವಿ ಶುಲ್ಕ ಸೇರಿ ಒಟ್ಟು 19,090 ರೂ. ಶುಲ್ಕ ನಿಗದಿಪಡಿಸಿದೆ. ಕೆಲವು ದಿನಗಳ ಹಿಂದೆ ಸರ್ಕಾರವು ಎಂಜಿನಿಯರಿಂಗ್ ಶುಲ್ಕವನ್ನು ಶೇ.8ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ಖಾಸಗಿ ಕಾಲೇಜುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೆ ಉಪನ್ಯಾಸಕರಿಗೆ ಸರ್ಕಾರವೆ ಸಂಭಾವನೆ ಭರಿಸಿದರೆ ನಾವು ಶೇ.8ರಷ್ಟು ಶುಲ್ಕ ಹೆಚ್ಚಳಕ್ಕೆ ಸಮ್ಮತಿ ನೀಡುತ್ತೇವೆ ಎಂದು ತಿಳಿಸಿದ್ದರು.

ಈ ವಿಚಾರ ಕುರಿತಾಗಿ ಗುರುವಾರ ಸಭೆ ನಡೆದಿದ್ದು ಖಾಸಗಿ ಕಾಲೇಜುಗಳ ಒತ್ತಡಕ್ಕೆ ಮಣಿದಿರುವ ಸರ್ಕಾರ ಶೇ.10ರಷ್ಟು ಶುಲ್ಕ ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದೆ. ಶೇ.8ರಷ್ಟು ಮಾತ್ರ ಹೆಚ್ಚಿಸಲು ಸರ್ಕಾರ ಪಟ್ಟು ಹಿಡಿದರೆ, ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರದ ಮನವಿಯನ್ನು ತಿರಸ್ಕರಿಸಿದ್ದವು. ಪರಿಣಾಮ ಶುಲ್ಕ ನಿಗದಿಯಾಗದೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೂ ಹಿನ್ನೆಡೆಯಾಗಿತ್ತು.
ಪ್ರಾಧ್ಯಾಪಕರ ವೇತನ ಶೇ.30ರಿಂದ 35ರಷ್ಟು ಶುಲ್ಕ ಹೆಚ್ಚಳವಾಗಿದೆ. ಇದನ್ನು ನಾವು ಯಾವ ಮೂಲದಿಂದ ಭರಿಸಬೇಕು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರವೇ ಪ್ರಾಧ್ಯಾಪಕರಿಗೆ ಪರಿಷ್ಕೃತ ವೇತನ ತುಂಬುವುದಾದರೆ ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದ್ದರು.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications