ಸದನದಲ್ಲೂ ಸದ್ದು ಮಾಡಿದ ಉಪೇಂದ್ರ ಸಾಂಗ್: ಏನಿಲ್ಲ ಏನಿಲ್ಲ ಹಾಡಿನ ಮೂಲಕ ಬಿಜೆಪಿಯವರ ಕಾಲೆಳೆದ ಸಿದ್ದರಾಮಯ್ಯ!
ಬೆಂಗಳೂರು, ಫೆಬ್ರವರಿ 21: ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಪಟ್ಟೆ ಸೌಂಡ್ ಮಾಡ್ತಿರಾ ರೀಲ್ಸ್ ಅಂದ್ರೆ ಏನಿಲ್ಲ.. ಏನಿಲ್ಲ ಕರಿಮಣಿ ಮಾಲೀಕ ನೀನಲ್ಲ. ಎಲ್ಲರೂ ಸಹ ಏನಿಲ್ಲ.. ಏನಿಲ್ಲ ಎನ್ನುವ ಸಾಂಗ್ ಸಕತ್ ವೈರಲ್ ಆಗುತ್ತಿದ್ದು, ಇದೀಗ ವಿಧಾನಸಭೆಯಲ್ಲೂ ಏನಿಲ್ಲ ಏನಿಲ್ಲ ಸಾಂಗ್ ಸದ್ದು ಮಾಡಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಘೋಷಣೆ ಮಾಡಿದ್ದು, ಈ ಬಜೆಟ್ ನಲ್ಲಿ ಏನಿಲ್ಲ ಏನಿಲ್ಲ ಎಂದು ವಿರೋಧ ಪಕ್ಷದ ನಾಯರು ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು, ಇದೀಗ ವಿಪಕ್ಷಗಳ ಮಾತಿಗೆ ಏನಿಲ್ಲ ಏನಿಲ್ಲ .. ಏನಿಲ್ಲ.. ಏನಿಲ್ಲ ಹಾಡುತ್ತಾರೆ. ಬಿಜೆಪಿಯವರ ತಲೆಯಲ್ಲಿ ಏನಿಲ್ಲ ಎಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ಏನಿಲ್ಲ ಏನಿಲ್ಲ ಹಾಡಿನ ಮೂಲಕ ಬಿಜೆಪಿಯವರ ಕಾಲೆಳೆದಿದ್ದಾರೆ.

ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸಿದ್ದರಾಮಯ್ಯ ಸವಾಲು
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು. ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ.
ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.

ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ. ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.
ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.
ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲು ಅನ್ಯಾಯವಾದುದು.2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ 24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ 51000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ 30,42,243 ಕೋಟಿ ಇದ್ದರೆ ನಮಗೆ ಬಂದಿದ್ದು 31734ಕೋಟಿ ರೂ., 2021-22 ರಲ್ಲಿ 34,83,236 ಕೋಟಿ ಗಾತ್ರದ ಬಜೆಟ್ ಗೆ , ರಾಜ್ಯಕ್ಕೆ 48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ 4181232 ಕೋಟಿ , ರಾಜ್ಯಕ್ಕೆ 53510 ಕೋಟಿ ಮಾತ್ರ ಬಂತು. 2023-24ರಲ್ಲಿ 45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು 50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ 59785 ಕೋಟಿ ಬರುತ್ತದೆ ಎಂದು ರಾಜ್ಯಕ್ಕೆ ಆಗುತ್ಯಲೇ ಇರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.












Click it and Unblock the Notifications