ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಎಂತಹ ಸ್ವಾರ್ಥಿ, ಎಡಬಿಡಂಗಿ ರಾಜಕಾರಣಿ ಎಂದು ಇಡೀ ನಾಡಿಗೆ ಗೊತ್ತಿದೆ

|
Google Oneindia Kannada News

ಬೆಂಗಳೂರು, ಸೆ 20: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ರಮೇಶ್ ಬಾಬು, ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಆಡಿದ ಮಾತಿಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ.

"ಜಾತ್ಯಾತೀತ ಜನತಾದಳದವರಿಗೆ ತತ್ವ, ಸಿದ್ದಾಂತ ಎನ್ನುವುದು ಇಲ್ಲ. ಅವರಿಗೆ ಬೇಕಾಗಿರುವುದು ಅವಕಾಶ ಮಾತ್ರ, ಅದಕ್ಕಾಗಿ ಬೇಕಾದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಜೊತೆಗೂ ಹೋಗಲು ಅವರು ಸಿದ್ದರಿರುತ್ತಾರೆ"ಎಂದು ಸಿದ್ದರಾಮಯ್ಯ ಹೇಳಿದ್ದರು.

ಅವಕಾಶಕ್ಕಾಗಿ ಜೆಡಿಎಸ್ ನವರು RSS ಜೊತೆ ಬೇಕಾದರೂ ಹೋಗುತ್ತಾರೆ!ಅವಕಾಶಕ್ಕಾಗಿ ಜೆಡಿಎಸ್ ನವರು RSS ಜೊತೆ ಬೇಕಾದರೂ ಹೋಗುತ್ತಾರೆ!

ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, "ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ" ಎಂದು ಹೇಳಿದ್ದಾರೆ.

ಪಕ್ಷದೊಳಗಿನ ಭಿನ್ನಮತೀಯರಿಗೆ ದೆಹಲಿಯಿಂದ ಯಡಿಯೂರಪ್ಪ ಖಡಕ್ ಸಂದೇಶಪಕ್ಷದೊಳಗಿನ ಭಿನ್ನಮತೀಯರಿಗೆ ದೆಹಲಿಯಿಂದ ಯಡಿಯೂರಪ್ಪ ಖಡಕ್ ಸಂದೇಶ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡ

ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡ

"ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ಮೂಲಕ ಕಿಡಿಕಾರಿದ ಕುಮಾರಸ್ವಾಮಿ

"ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಬಹಿರಂಗವಾಗಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು

ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತು

ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತು

ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನರ ಕಷ್ಟಕಾರ್ಪಣ್ಯಗಳು, ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Recommended Video

IPL 2020 DC VS KXIP : ಪಂದ್ಯದ ಬಳಿಕ Mayank Agarwal ಮಾಧ್ಯಮದವರ ಮುಂದೆ ಹೇಳಿದ್ದೇನು | Oneindia Kannada
ಸಿದ್ದರಾಮಯ್ಯ ಎಂತಹ ಸ್ವಾರ್ಥಿ, ಎಡಬಿಡಂಗಿ ರಾಜಕಾರಣಿ ಎಂದು ಇಡೀ ನಾಡಿಗೆ ಗೊತ್ತಿದೆ

ಸಿದ್ದರಾಮಯ್ಯ ಎಂತಹ ಸ್ವಾರ್ಥಿ, ಎಡಬಿಡಂಗಿ ರಾಜಕಾರಣಿ ಎಂದು ಇಡೀ ನಾಡಿಗೆ ಗೊತ್ತಿದೆ

"ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

English summary
Entire Karnataka Knows Siddaramaiah Is Selfish Politician: HD Kumaraswamy Statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X