ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್‌ 2ರಂದು ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಲೋಕಾರ್ಪಣೆ

|
Google Oneindia Kannada News

ಬೆಂಗಳೂರು, ಫೆ. 27: ತಂತ್ರಜ್ಞಾನ ಬೆಳೆದಂತೆಲ್ಲ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಎಲ್ಲ ಕ್ರಮಗಳನ್ನು ಸರಕಾರ ಕೈಗೊಂಡಿದ್ದು, ಶೀಘ್ರದಲ್ಲಿಯೇ ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ (engineering R&D policy ) ಯನ್ನು ಜಾರಿಗೆ ತರಲಾಗುತ್ತಿದ್ದು, ಮಾರ್ಚ್‌ 2ರಂದು ಘೋಷಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ‌ಅಶ್ವಥ್ ನಾರಾಯಣ ಅವರು ಹೇಳಿದರು.

ಬೆಂಗಳೂರಿನಲ್ಲಿ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ನೂತನ ಪೂರಕ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರೆವೇರಿಸಿ ಮಾತನಾಡಿದರು. ಇಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ನಾವು ದೇಶದಲ್ಲೇ ಮುಂಚೂಣಿಯಲ್ಲಿದ್ದೇವೆ. ಹೀಗಾಗಿ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಆ ನೀತಿ ಬಂದ ನಂತರ ಈ ಕ್ಷೇತ್ರದಲ್ಲೂ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತವೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚು ಉತ್ತೇಜನ ನೀಡಬೇಕು. ಸಬ್ಸಿಡಿ, ರಿಯಾಯಿತಿಗಳನ್ನು ಕೊಡುವ ಮೂಲಕ ತಂತ್ರಜ್ಞಾನದಲ್ಲಿ ಬಹುದೊಡ್ಡ ವ್ಯತ್ಯಾಸ ತರುವ ಉದ್ದೇಶ ಸರ್ಕಾರಕ್ಕಿದೆ ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕ್ಯಾಂಪಸ್

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕ್ಯಾಂಪಸ್

ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್‌ನ್ನು ಇನ್ನೂ ಉನ್ನತ ದರ್ಜೆಗೆ ಏರಿಸಲಾಗುವುದು. ಈ ಕ್ಯಾಂಪಸ್ಸಿನಲ್ಲಿ ಪಾಲಿಟೆಕ್ನಿಕ್ ಕಾಲೇಜು ಸೇರಿದಂತೆ ಹಲವಾರು ಸಂಸ್ಥೆಗಳಿವೆ. ಡಿಪ್ಲೊಮೋ, ಎಂಜಿನಿಯರಿಂಗ್‌ ಸೇರಿ ಪ್ರತ್ಯೇಕವಾಗಿ ನಾಲ್ಕಾರು ಸಂಸ್ಥೆಗಳು ಇಲ್ಲಿವೆ. ಈ ಬಗ್ಗೆ ನಾನು, ನಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌ ಜತೆ ಮಾತುಕತೆ ನಡೆಸಿ ಇಷ್ಟೆಲ್ಲ ಸಂಸ್ಥೆಗಳನ್ನು ಒಳಗೊಂಡ ಈ ಕ್ಯಾಂಪಸ್‌ಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ಮರಣಾರ್ಥ ʼನಾಲ್ವಡಿ ಕ್ಯಾಂಪಸ್‌ʼ ಎಂದು ನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ

ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ

ಮುಂಗಡ ಪತ್ರದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನವನ್ನು ಕೋರಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈವರೆಗೆ ಒಟ್ಟಾರೆ ಬಜೆಟ್‌ ಗಾತ್ರದಲ್ಲಿ ಶೇ.2ರಷ್ಟು ಮೊತ್ತವನ್ನು ಉನ್ನತ ಶಿಕ್ಷಣಕ್ಕೆ ನೀಡಲಾಗುತ್ತಿತ್ತು. ಈಗ ಶೇ.3.5ರಷ್ಟು ಅನುದಾನ ಕೊಡಿ ಎಂದು ಕೇಳಿದ್ದೇವೆ. ಶಿಕ್ಷಣಕ್ಕೆ ಸೌಲಭ್ಯಗಳನ್ನು ಕಲ್ಪಿಸುವ ವಿಚಾರದಲ್ಲಿ ಸರಕಾರ ಚೌಕಾಸಿ ಮಾಡುವುದಿಲ್ಲ ಎಂದು ಡಿಸಿಎಂ ಹೇಳಿದರು.

ಡಿಪ್ಲೊಮಾ ಪಠ್ಯ ಪರಿಷ್ಕರಣೆ

ಡಿಪ್ಲೊಮಾ ಪಠ್ಯ ಪರಿಷ್ಕರಣೆ

ಗುಣಮಟ್ಟದ ಬೋಧನೆ-ಕಲಿಕೆಯ ಗುರಿಯೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಂತ್ರಿಕ ಶಿಕ್ಷಣ ಮುಗಿದ ಕೂಡಲೇ ಉದ್ಯೋಗ ಸಿಗುವಂಥ ವ್ಯವಸ್ಥೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಈಗಾಗಲೇ ಡಿಪ್ಲೊಮಾ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. ಆ ಪಠ್ಯವನ್ನು ರಾಷ್ಟ್ರೀಯ ಕೌಶಲ್ಯ ಮಾನದಂಡಕ್ಕೆ ಅನುಗುಣವಾಗಿ ರೂಪಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಟೆಕ್ನಾಲಜಿ ಬೆಳೆದ ಹಾಗೆಲ್ಲ ಸರಕಾರಿ ಶಿಕ್ಷಣ ಸಂಸ್ಥೆಗಳ ಉನ್ನತೀಕರಣವನ್ನೂ ಕೈಗೊಳ್ಳಬೇಕು. ಹಾಗೆಯೇ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಸಂಸ್ಥೆಗಳು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಸಲಹೆ ನೀಡಿದ್ದಾರೆ.

Recommended Video

ಸಿಲಿಕಾನ್ ಸಿಟಿಗೆ ಕೊರೋನಾ ಶಾಕ್..!- ಕೇರಳ- ಮಹಾರಾಷ್ಟ್ರ ದಿಂದ ಬಂದ ವಿದ್ಯಾರ್ಥಿಗಳಲ್ಲಿ ಸೋಂಕು | Oneindia Kannad
ಬೋಧಕರಿಗೆ ಎಲ್ಲ ಸಹಕಾರ

ಬೋಧಕರಿಗೆ ಎಲ್ಲ ಸಹಕಾರ

ಗುಣಮಟ್ಟದ ಕಲಿಕೆಯ ಬಗ್ಗೆ ಮಾತನಾಡುವ ನಾವು ಗುಣಮಟ್ಟದ ಬೋಧನೆಯ ಬಗ್ಗೆಯೂ ಮಾತನಾಡಬೇಕು. ಹಾಗೆ ಆಗಬೇಕಾದರೆ, ಬೋಧಕರ ಎಲ್ಲ ಸಮಸ್ಯೆಗಳನ್ನು ನಿವಾರಿಸಬೇಕು. ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ ವೇತನ ಪರಿಷ್ಕರಣೆ ಮಾಡಲಾಯಿತು. ಇನ್ನೂ ಅನೇಕ ವಿಷಯಗಳಲ್ಲಿ ಬೋಧಕರಿಗೆ ಪೂರಕವಾಗಿ ಸರಕಾರ ಕೆಲಸ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಡಾ. ಅಶ್ವಥ್ ನಾರಾಯಣ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

English summary
The government of Karnataka is taking all measures to bring about reforms in the access for quality education and a new Engineering R & D (ER&D) policy will be rolled out on coming March 2, Deputy Chief Minister, Dr. C.N.Ashwatha Narayana, who also holds the higher education portfolio, said. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X