ವಿದ್ಯುತ್ ಬೆಲೆ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ ಎಸ್ಕಾಂ

ಬೆಂಗಳೂರು, ಫೆಬ್ರವರಿ 2: ಕರ್ನಾಟಕದ ವಿದ್ಯುತ್ ಪ್ರಸರಣ ಕಂಪನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ವಿದ್ಯುತ್ ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಕಿಲೋವ್ಯಾಟ್ ಬೆಲೆಯನ್ನು 83 ಪೈಸೆಯಿಂದ 1ರೂ. 10 ಪೈಸೆ ವರೆಗೆ ಏರಿಕೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಹೇಳಿದ್ದಾರೆ.

ಬೆಂಗಳೂರು ವಿದ್ಯುತ್ ಪ್ರಸರಣ ಸಂಸ್ಥೆ (ಬೆಸ್ಕಾಂ) ಪ್ರತಿ ಕಿಲೋವ್ಯಾಟ್ ಬೆಲೆಯನ್ನು 83 ಪೈಸೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರೆ, ಹುಬ್ಬಳ್ಳಿ ಮತ್ತು ಗುಲ್ಬರ್ಗಾ ವಿದ್ಯುತ್ ಪ್ರಸರಣ ಸಂಸ್ಥೆ ರೂ. 1.10 ಏರಿಕೆ ಮಾಡುವಂತೆ ಕೇಳಿಕೊಂಡಿವೆ.

ಬೆಲೆ ಏರಿಕೆ ಬಗ್ಗೆ ನಾವು ಜನರ ಜತೆ ಸಮಾಲೋಚನೆ ನಡೆಸಿ ನಿರ್ಧರಿಸುತ್ತೇವೆ ಎಂದು ಶಂಕರಲಿಂಗೇಗೌಡ ಹೇಳಿದ್ದಾರೆ. ಫೆಬ್ರವರಿ 19 ರಿಂದ ಮಾರ್ಚ್ 2ರ ನಡುವೆ ಸಾರ್ವಜನಿಕರ ಜತೆ ಈ ಸಂಬಂಧ ಚರ್ಚೆ ನಡೆಯಲಿದೆ.

ESCOMs in Karnataka seek power tariff increase

ಇದೇ ವೇಳೆ ಎಸ್ಕಾಂನ ವಿಭಾಗ ಕೇಂದ್ರಗಳಾದ ಮೈಸೂರು, ಮಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕರ ಜತೆ ಸಮಾಲೋಚನೆ ನಡೆಯಲಿದೆ ಎಂದು ಶಂಕರಲಿಂಗೇಗೌಡ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+