ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್: ಅಘಾತಕಾರಿ ಮಾಹಿತಿ ಹಂಚಿಕೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ!

|
Google Oneindia Kannada News

ಬೆಂಗಳೂರು, ಸೆ. 20: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ಇದ್ದರೂ, ಗುಣಮುಖರಾದವರ ಸಂಖ್ಯೆ 4 ಲಕ್ಷ ದಾಟಿದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಬೀಗುತ್ತಿದೆ. ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಅಘಾತಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಾಲ್ಕು ಲಕ್ಷ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ಸರ್ಕಾರ ಹೇಳುತ್ತಿದೆ. ಆದರೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಈ ವೈರಾಣುವಿಗೆ ಬಲಿಯಾದವರ ಸಂಖ್ಯೆಯೂ 7,800ಕ್ಕೂ ಹೆಚ್ಚು ಮಂದಿ ಎಂದು ಅವರು ಆರೋಪಿಸಿದ್ದಾರೆ. ಕೋವಿಡ್ ಆರ್ಭಟ ಇತ್ತೀಚೆಗೆ ಹೆಚ್ಚಾಗಿದ್ದು, ಮರಣ ಸಂಖ್ಯೆ ಆತಂಕವನ್ನುಂಟು ಮಾಡುತ್ತಿದೆ. ಸಾಕಷ್ಟು ಜನರು ಮೃತಪಡುತ್ತಿದ್ದರೂ ಬಿಜೆಪಿ ಸರ್ಕಾರ ಮಾತ್ರ ನಿರ್ಲಕ್ಷ್ಯ ತಾಳಿ, ಮುಗ್ದ ಜನರ ಜೀವದೊಂದಿಗೆ ಚಲ್ಲಾಟವಾಡುತ್ತಿದೆ ಎಂದು ಈಶ್ವರ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಿನಿಮಾ ಮಂದಿರ, ಈಜುಕೊಳ ಹಾಗೂ ಶಾಲಾ ಕಾಲೇಜು ಹೊರತು ಪಡಿಸಿ ಉಳಿದೆಲ್ಲವನ್ನೂ ತೆರೆದಿರುವ ಸರ್ಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಗಮನವನ್ನೇ ಹರಿಸುತ್ತಿಲ್ಲ, ರೋಮ್ ಹೊತ್ತಿ ಉರಿಯುತ್ತಿದ್ದಾಗ ದೊರೆ ನೀರೋ ಪಿಟೀಲು ನುಡಿಸುತ್ತಿದ್ದ ಎಂಬ ಜನಪ್ರಿಯ ನಾಣ್ಣುಡಿ ಇದೆ. ಅದೇ ರೀತಿ, ಜನ ಸೂಕ್ತ ಚಿಕಿತ್ಸೆ ಸಿಗದೆ, ಸೋಂಕಿನಿಂದ ಸಾಯುತ್ತಿದ್ದರೂ, ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಯನ್ನು ಎಡತಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಭದ್ರಕೋಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ್ದೇನು?ಬಿಜೆಪಿ ಭದ್ರಕೋಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ್ದೇನು?

ನಿನ್ನೆ ಒಂದೇ ದಿನ ದಾಖಲೆಯ 179 ರೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ನಲ್ಲಿ ಬರೀ ಸಾವಿನ ಸುದ್ದಿಗಳೇ ಬರುತ್ತಿವೆ. ಈ ಹಂತದಲ್ಲಿ ಶಾಲೆ ಕಾಲೇಜು ತೆರೆಯುವ ಬಗ್ಗೆಯೂ ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವರು ಹೇಳುತ್ತಾರೆ. ಮಕ್ಕಳ ಭವಿಷ್ಯದ ಜೊತೆ ಸರ್ಕಾರ ಹುಡುಗಾಟವಾಡುತ್ತಿದೆ. ರಾಜ್ಯದಲ್ಲಿ ಕಳೆದ ಏಪ್ರಿಲ್ ನಿಂದ ಈಚೆಗೆ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳ ಆಗಿದೆ. ಆದರೂ ಸರ್ಕಾರ ಏನೂ ಆಗಿಯೇ ಇಲ್ಲ ಎಂಬಂತೆ ಜಾಣ ಕುರುಡುತನ, ಕಿವುಡುತನ ಪ್ರದರ್ಶಿಸುತ್ತಿದೆ, ಇಷ್ಟು ಜನವಿರೋಧಿ ಸರ್ಕಾರವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಹೇಳಿದ್ದಾರೆ.

Eshwar Khandre accused the Karanataka state government of neglecting the Covid 19 deaths

ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಗಾದೆಯಂತೆ ರಾಜ್ಯದ ಜನರ ಜೊತೆ ಸರ್ಕಾರ ಚಲ್ಲಾಟ ಆಡುತ್ತಿದೆ. ಬೆಂಗಳೂರು ನಗರದಲ್ಲಿ ದಿನವೂ ಸೋಂಕು ಹೆಚ್ಚಾಗುತ್ತಿದೆ, ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಿಸಲು ನೇಮಕಗೊಂಡಿದ್ದ ಅಷ್ಟ ದಿಕ್ಪಾಲಕರು ಏನು ಮಾಡುತ್ತಿದ್ದಾರೆ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ.

Eshwar Khandre accused the Karanataka state government of neglecting the Covid 19 deaths

'ಕರ್ನಾಟಕದಲ್ಲಿ ಕ್ಯಾಸಿನೋ ತೆರೆಯಲು ಮುಂದಾಗಿದ್ದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ''ಕರ್ನಾಟಕದಲ್ಲಿ ಕ್ಯಾಸಿನೋ ತೆರೆಯಲು ಮುಂದಾಗಿದ್ದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ'

Recommended Video

RCB vs SRH : ಕಪ್ಪೂ ಗೆಲ್ತಿವಿ ನಿಮ್ಮ ಮನಸ್ಸು ಗೆಲ್ತೀವಿ!! | Oneindia Kannada

ಜನರ ಸಂಕಷ್ಟ ಇವರಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಸಂಪೂರ್ಣ ಕೈಚೆಲ್ಲಿ ಕುಳಿತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಎರಡು ಗಡ ದೂರದ ಅಂತರ ಪಾಲಿಸುವ ಮೂಲಕ ಮತ್ತು ತಮ್ಮ ಕೈಗಳನ್ನು ಆಗಾಗ್ಗೆ ಸಾಬೂನಿನಿಂದ ತೊಳೆದು ಶುಚಿ ಗೊಳಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ತಾವು ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

English summary
Karnataka Pradesh Congress President Ishwar Khandre has accused the Karanataka state government of neglecting and spreading the Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X