ಬರೋಬ್ಬರಿ ₹700 ಕೋಟಿ ಮೌಲ್ಯದ ಅರಣ್ಯ ಭೂಮಿ ಒತ್ತುವರಿ, 20 ಎಕ್ರೆ ವಶಕ್ಕೆ ಅರಣ್ಯ ಸಚಿವರ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 20: ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(2) 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.
ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಇದೇ ಕೊತ್ತನೂರು ಗ್ರಾಮದ ಸರ್ವೆ ನಂಬರ್ 47ರಲ್ಲಿ 2006ರಲ್ಲಿ ಅರಣ್ಯ ಇಲಾಖೆಗೆ ಮಂಜೂರಾಗಿ ಒತ್ತುವರಿಯಾಗಿದ್ದ 17 ಎಕರೆ 34 ಗುಂಟೆ ಜಮೀನನ್ನು ಮರು ವಶಪಡಿಸಿಕೊಂಡು ಇಲ್ಲಿ ಸಸ್ಯೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಶಂಕುಸ್ಥಾಪನೆಯನ್ನೂ ನೆರೆವೇರಿಸಿದ್ದರು.
ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ 'ಸರ್ಕಾರಿ ಭೂಮಿ' ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು.
ಕಾನೂನು ಬಾಹೀರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದ ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications