ರಾಜ್ಯ ಅರಣ್ಯ ಪ್ರದೇಶ ಒತ್ತುವರಿ ತೆರವಿಗೆ ಕಾರ್ಯಪಡೆ ರಚಿಸಿ: ಈಶ್ವರ್ ಖಂಡ್ರೆ
ಬೆಂಗಳೂರು, ಸೆಪ್ಟಂಬರ್ 27: ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ಆಗಿರುವ ಒತ್ತುವರಿಗಳನ್ನು (ಅತಿಕ್ರಮಣ) ತೆರವುಗೊಳಿಸಬೇಕು. ಅದಕ್ಕಾಗಿ ರಾಜ್ಯ ಮಟ್ಟದ ಕಾರ್ಯಪಡೆಯನ್ನು ರಚಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಇದಷ್ಟೇ ಅಲ್ಲದೇ ಪ್ರತಿನಿತ್ಯ ಅರಣ್ಯ ಅತಿಕ್ರಮಣಕ್ಕೆ ಸಾಕ್ಷಿಯಾಗುತ್ತಿದ್ದು ಅದರ ತಡೆಗೆ ಬೆಂಗಳೂರು ಮಟ್ಟಿಗೆ ಒಂದು ಪ್ರತ್ಯೇಕ ಕಾರ್ಯಪಡೆ ರಚಿಸುವಂತೆ ಅವರು ತಿಳಿಸಿದರು. ಈ ಕುರಿತು ಇಲಾಖೆಯ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಪತ್ರ ಬರೆದ ನಿರ್ದೇಶನ ನೀಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೆಪ್ಟೆಂಬರ್ 22 ರಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ, ಪರಿಸರ ಮತ್ತು ಪರಿಸರ) ಜವೈದ್ ಅಖ್ತರ್ ಅವರಿಗೆ ಸಚಿವರು ಪತ್ರದ ಮೂಲಕ ತಿಳಿಸಿದ್ದಾರೆ. ರಚನೆಯಾಗುವ ಕಾರ್ಯಪಡೆಗಳಲ್ಲಿ ಅರಣ್ಯ, ಕಂದಾಯ, ಗೃಹ ಅಧಿಕಾರಿಗಳನ್ನು ಒಳಗೊಂಡಿರಬೇಕು. ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸದಸ್ಯರು ಇರಬೇಕು ಎಂದು ಸೂಚಿಸಲಾಗಿದೆ.
ಬದಲಾವಣೆಗಳು ಪರಿಸರದ ಮೇಲೆ ದುಷ್ಪರಿಣಾಮ ಭೀರುತ್ತವೆ
ರಾಜ್ಯದ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ನೂರು ವರ್ಷಗಳ ಭೂ ದಾಖಲೆಗಳ ಇದ್ದರೂ ಸಹಿತ ಅರಣ್ಯ ಪ್ರದೇಶಗಳ ಅತಿಕ್ರಮ ಮುಂದುವರಿದೆ. ಅರಣ್ಯದ ಭೂಪ್ರದೇಶದಲ್ಲಿ ಸಣ್ಣ ಪ್ರಮಾಣದ ಬದಲಾವಣೆಗಳು ಉಂಟಾದರೂ ಸಹಿತ ಅದು ಪರಿಸರ ವಿಜ್ಞಾನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುವ ಸಾಧ್ಯತೆಗಳು ಇರುತ್ತವೆ.
ರಾಜ್ಯ ಸರ್ಕಾರ ಹಲವು ವರ್ಷಗಳ ಹಿಂದೆ ಅರಣ್ಯ ಪ್ರದೇಶಗಳೆಂದು ಘೋಷಿಸಿದ್ದ ಸ್ಥಳಗಳನ್ನು ವೈಜ್ಞಾನಿಕವಾಗಿ ರಕ್ಷಿಸುವ ಜವಾಬ್ದಾರಿ ನಮ್ಮ ಮೇಳಿದೆ. ಕಾನೂನು ಪ್ರಕರಣಗಳಿಂದಾಗಿ ಅತಿಕ್ರಮಣದಾರರ ತೆರವು ಸ್ಥಗಿತಗೊಂಡಿರುವುದು ಕಂಡು ಬಂದಿದೆ. ಅರಣ್ಯ ಅತಿಕ್ರಮಣ ಬಹಳಷ್ಟು ವ್ಯಾಪಿಸಿದೆ. ಒತ್ತುವರಿ ಸಮಸ್ಯೆಯನ್ನು ಕೂಲಂಕುಷವಾಗಿ ಪರಿಶೀಲಿಸಿದರೆ ವಿವಿಧ ಹಂತದ ಅತಿಕ್ರಮಣ ತೆರವು ಪ್ರಕರಣಗಳನ್ನು ಕಾನೂನಾತ್ಮಕವಾಗಿ ಇತ್ಯರ್ಥಪಡಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಇಲಾಖೆ ಬದ್ಧವಾಗಿಲ್ಲ ಎಂಬುದು ಗೊತ್ತಾಗಿದೆ ಎಂದು ಈಶ್ವರ್ ಖಂಡ್ರೆ ಉಲ್ಲೇಖಿಸಿದ್ದಾರೆ.

ಬಾಕಿ ಇರವು ಪ್ರಕರಣ ಇತ್ಯರ್ಥಕ್ಕೆ ಸಹಕರಿಸಿ
ಅರಣ್ಯ ಸಂಪತ್ತಿನ ರಕ್ಷಣೆಗಾಗಿ ನಮ್ಮ ಇಲಾಖೆಯು ಕಂದಾಯ ಇಲಾಖೆ ಜೊತೆಗೆ ಸಮನ್ವಯ ಸಾಧಿಸಲಿದೆ. ಗೊತ್ತುಪಡಿಸಿದ ಅರಣ್ಯ ಪ್ರದೇಶಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ಸಂರಕ್ಷಣೆ ಮಾಡಬೇಕು. ವೈಜ್ಞಾನಿಕವಾಗಿ ನಿರ್ವಹಿಸುವುದು ಮತ್ತು ಮುಂದಿನ ಪೀಳಿಗೆಗೆ ಅವುಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿ ಆಗಿದೆ ಎಂದು ಖಂಡ್ರೆ ತಿಳಿಸಿದರು.
ಅತಿಕ್ರಮಣ ಪ್ರಕರಣಗಳ ಪರಿಶೀಲಿಸಲಾಗಿದ್ದು, ಅವೆಲ್ಲವುಗಳನ್ನು ಮತ್ತು ನ್ಯಾಯಾಲಯಗಳ ವಿವಿಧ ಹಂತಗಳಲ್ಲಿ ಬಾಕಿ ಉಳಿದಿರುವ ಅತಿಕ್ರಮಣ ತೆರವು ಪ್ರಕರಣಗಳನ್ನು ಇತ್ಯರ್ಥಗೊಳಿಸಲು ರಾಜ್ಯ ಮಟ್ಟದ ಕಾರ್ಯಪಡೆ ಮತ್ತು ಬೆಂಗಳೂರು ನಗರ ಜಿಲ್ಲೆಗೆ ಪ್ರತ್ಯೇಕ ಕಾರ್ಯಪಡೆ ರಚಿಸುವುದು ಸೂಕ್ತ ಎಂದು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.
ಕಾರ್ಯಪಡೆಯ ರಚನೆ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ನೇತೃತ್ವ ವಹಿಸುವ ಜೊತೆಗೆ ಕಂದಾಯ, ಗೃಹ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಇನ್ನಿತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳು/ತಜ್ಞರನ್ನು ಒಳಗೊಂಡು ತಂಡ ರಚನೆ ಆಗಬೇಕು. ಅಲ್ಲದೇ ಪ್ರಕರಣ ಇತ್ಯರ್ಥ್ಕಾಗಿ ಸರ್ಕಾರಿ ವಕೀಲರಿಗೆ ಅಗತ್ಯ ದಾಖಲಾತಿ ಒದಗಿಸಬೇಕು ಎಂದು ಅವರು ತಿಳಿಸಿದ್ದಾರೆ.












Click it and Unblock the Notifications