ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರ ಎಷ್ಟು? ಸವಾಲು ಹಾಕಿದ ಈಶ್ವರ್ ಖಂಡ್ರೆ
ಬೆಂಗಳೂರು ಡಿಸೆಂಬರ್ 15: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸವಾಲು ಹಾಕಿದ್ದಾರೆ.
ಸದನದಲ್ಲಿ ತಾವು ಫಸಲು ಬಿಮಾ ಯೋಜನೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಮೆ ಯೋಜನೆ ಬಗ್ಗೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿದೆ ಎಂಬುದು ಬಟಾ ಬಯಲಾಗಲಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು.

ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಯೋಜಿತ ಪಕ್ಕಾ ಗೋಲ್ಮಾಲ್ ಯೋಜನೆ ಎಂದು ಈಶ್ವರ ಖಂಡ್ರೆ ಪುನರುಚ್ಚರಿಸಿದರು. ಕೋವಿಡ್ ಸಮಯದಲ್ಲಿ ಜನರು ಆಕ್ಸಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದರು. ಭಗವಂತ ಖೂಬಾಗೆ ಮಾಡಲು ಕೆಲಸವಿಲ್ಲ, ಈಗ ನಿರುದ್ಯೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾ, ಕಾಲ ತಳ್ಳುತ್ತಿದ್ದಾರೆ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ ತುಂಬಾ ಆತ್ಮೀಯರಾಗಿದ್ದರು ಅವರ ನಿಧನದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications