ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಸೋಲಲಿ: ಇದು ಮೋದಿ, ಅಮಿತ್ ಸಂದೇಶ ಎಂದ ಬಿಜೆಪಿ ನಾಯಕ
ನವದೆಹಲಿ, ಏಪ್ರಿಲ್ 04: ಬಿಜೆಪಿಯಲ್ಲಿ ಲೋಕಸಭಾ ಚುನಾವಣೆಗೆ ಪುತ್ರಿನಿಗೆ ಹಾವೇರಿಯಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗದಿಂದ ಸ್ಪರ್ಧೆ ಘೋಷಿಸುವ ಮೂಲಕ ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯದ ಬಾವುಟ ಹಾರಿದ್ದಾರೆ.
ಹೌದು, ಹಾವೇರಿ ಲೋಕಸಭೆ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದ್ದು, ಟಿಕೆಟ್ ನಿರೀಕ್ಷೆಯಲ್ಲಿದ್ದ ಕಾಂತೇಶ್‌ಗೆ ಟಿಕೆಟ್ ನೀಡದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿತ್ತು. ಇದರಿಂಗಾಗಿ ಕೊಟ್ಟ ಮಾತಿಗೆ ಬಿ ಎಸ್ ಯಡಿಯೂರಪ್ಪ ಅವರು ತಪ್ಪಿದ್ದಾರೆ, ನನಗೆ ಮೋಸವಾಗಿದೆ ಎಂದು ಕೆ ಎಸ್ ಈಶ್ವರಪ್ಪ ಅವರು, ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಕುರಿತು ಪ್ರಕಟಿಸಿದ್ದು, ಯಡಿಯೂರಪ್ಪ ಕುಟುಂಬದ ವಿರುದ್ಧ ತೊಡೆ ತಟ್ಟಿದ್ದಾರೆ.

ಇನ್ನೂ ಕೆ ಎಸ್ ಈಶ್ವರಪ್ಪ ಅವರು ತಮ್ಮ ನಿರ್ಧಾರವನ್ನ ಬದಲಿಸಲಿದ್ದಾರೆ ಎನ್ನುವ ಭರವಸೆಯಲ್ಲಿ ಬಿಜೆಪಿ ನಾಯಕರಿದ್ದು, ರಾಜ್ಯಕ್ಕೆ ಅಮಿತ್ ಶಾ ಬಂದಾಗ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ, ದೆಹಲಿ ಬರುವಂತೆ ಸೂಚನೆ ನೀಡಿದ್ರು. ಅದರಂತೆ ಬುಧವಾರ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ದೆಹಲಿಗೆ ಹೋಗಿದ್ದಾರೆ. ಅದರೇ ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಗದೆ, ಬೆಂಗಳೂರಿನತ್ತ ವಾಪಸ್ ಆಗಿದ್ದಾರೆ.
ಈ ಕುರಿತು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಅವರು ಮಾತನಾಡಿ, ನನ್ನನ್ನು ಭೇಟಿಯಾಗುವುದು ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗುವುದಿಲ್ಲ. ಈಶ್ವರಪ್ಪ ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಚುನಾವಣೆಯಲ್ಲಿ ಸೋಲಲಿ. ಈ ಸಂದೇಶವನ್ನು ಕೇಂದ್ರ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಅಮಿಶ್ ಶಾ ದೆಹಲಿಗೆ ಬರಲು ಹೇಳಿದ್ದರು ಅಷ್ಟು ದೊಡ್ಡವರು ಕರೆದಾಗ ಗೌರವ ಕೊಟ್ಟು ದೆಹಲಿಗೆ ಹೋದೆ. ರಾಜೇಶ್ ಜಿ ಅವರ ಮನೆಗೆ ತೆರಳಲು ಸೂಚಿಸಿದ್ದರು ನಾನು ದೆಹಲಿ ತಲುಪಿ ಅಮಿತ್ ಶಾ ಮನೆಗೆ ಫೋನ್ ಮಾಡಿದೆ ಫೋನ್ ಮೂಲಕಭೇಟಿ ಅವಶ್ಯಕತೆ ಇಲ್ಲ ಎಂದು ತಿಳಿಸಿದರು ವಾಪಸು ಮನೆಗೆ ಹೋಗಲು ತಿಳಿಸಿದರು ಈ ಮೂಲಕ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ ಗೆಲ್ಲಲು ಎಂದು ಸೂಚನೆ ಸಿಕ್ಕಿದೆ.

ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ ಮತ್ತು ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ. ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ ಈ ಎಲ್ಲಾ ಪ್ರಶ್ನೆ ಗಳಿಗೆ ಅವರ ಬಳಿ ಉತ್ತರ ಇಲ್ಲ ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ. ನಾನು ಸ್ಪರ್ಧೆ ಮಾಡಿ ಗೆದ್ದು ದೆಹಲಿಗೆ ತೆರಳಿ ಮೋದಿ ಪರವಾಗಿ ಕೈಎತ್ತುತ್ತೇನೆ. ನನ್ನನ್ನು ಭೇಟಿಯಾಗದೆ ಅವರು ತೆಗೆದುಕೊಂಡ ತೀರ್ಮಾನ ರಾಜಕೀಯ ಚಾಣಾಕ್ಷನ ತೀರ್ಮಾನ ಸ್ವಾಗತಿಸುತ್ತೇನೆ ಈ ಮೂಲಕ ನನಗೆ ಚುನಾವಣೆಯಲ್ಲಿ ಸ್ಪರ್ದೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನ ಎಂದರು.
ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಠಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ. ನಾನು ಗೀತಾ ಶಿವರಾಜ್ ಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು. ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ ಎಂದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications