ಕೆಲಸವಿಲ್ಲದಿದ್ದರೆ, ಕೆಲಸ ಹುಡುಕಿಕೊಂಡು ಜೀವನಾಂಶ ನೀಡಬೇಕು; ಕೋರ್ಟ್

ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ಬೆಂಗಳೂರು, ಫೆಬ್ರವರಿ 13; ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ, ಒಂದು ವೇಳೆ ಪತಿಗೆ ಕೆಲಸವಿಲ್ಲದಿದ್ದರೆ, ಆತ ಉದ್ಯೋಗ ಹುಡುಕಿಕೊಂಡು ಜೀವನಾಂಶ ನೀಡಲೇಬೇಕು ಎಂದು ಕರ್ನಾಟಕ ಹೈಕೋರ್ಟ್‌ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.

ಮೈಸೂರಿನ ಕೌಟುಂಬಿಕ ನ್ಯಾಯಾಲಯ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವಂತೆ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ. ಅಲ್ಲದೇ, ನ್ಯಾಯಾಲಯ ಅಪರಾಧ ದಂಡ ಸಂಹಿತೆ ಸೆಕ್ಷನ್ 125ರಡಿ ಪತ್ನಿಗೆ 6,000, ಮಗುವಿಗೆ 4,000 ಜೀವನಾಂಶ ನೀಡಲು ಪತಿಗೆ ಸೂಚನೆ ನೀಡಿದೆ.

ಪತಿ ಮತ್ತು ಮಗುವಿಗೆ 10 ಸಾವಿರ ರೂ. ಜೀವನಾಂಶ ನೀಡಬೇಕೆನ್ನುವುದು ದುಬಾರಿ ಏನಲ್ಲ. ಅಷ್ಟು ಹಣ ಹೊಂದಿಸಲಾಗದು ಎಂಬ ಪತಿಯ ವಾದ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದೇ ಆಗಿದೆ ಎಂದು ಹೇಳಿದೆ.

Even Husband Has Not Job He Can Find A Job And Pay Maintenance To Wife

ಅಲ್ಲದೆ, ಪತಿ ತಾನೂ ಯಕೃತ್‌ ಸಂಬಂಧಿ ರೋಗದಿಂದ ಬಳಲುತ್ತಿದ್ದೇನೆ ಎಂದು ಹೇಳುತ್ತಿರುವುದಕ್ಕೆ ಪುಷ್ಠಿ ನೀಡುವ ಯಾವುದೇ ದಾಖಲೆಯನ್ನು ಒದಗಿಸಿಲ್ಲ. ಹಾಗಾಗಿ ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡಲೇಬೇಕು ಎಂದು ನ್ಯಾಯಪೀಠ ಆದೇಶ ನೀಡಿದೆ.

"ತಾನೇ ಹಲವು ಕಾಯಿಲೆಗಳಿಂದ ನರಳುತ್ತಿದ್ದೇನೆ, ಸರಿಯಾದ ಉದ್ಯೋಗವಿಲ್ಲ, ತಿಂಗಳಿಗೆ ಎಷ್ಟೇ ಕಷ್ಟಪಟ್ಟರೂ 15 ಸಾವಿರಕ್ಕಿಂತ ಹೆಚ್ಚು ದುಡಿಯಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಜೀವನಾಂಶ ಪಾವತಿ ಮಾಡಲು ಸಾಧ್ಯವಿಲ್ಲ" ಎಂಬ ಪತಿಯ ವಾದವನ್ನು ನ್ಯಾಯಾಲಯ ಸರಾಸಗಟಾಗಿ ತಳ್ಳಿ ಹಾಕಿದೆ.

"ಪತಿಗೆ 10 ಸಾವಿರ ಜೀವನಾಂಶ ಪಾವತಿಸಲು ಸಾಧ್ಯವಿಲ್ಲ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಆದರೆ ಅದನ್ನು ಒಪ್ಪಲಾಗದು. ದುಡಿಯಲು ಸಮರ್ಥನಿರುವ ಪತಿಗೆ ಉದ್ಯೋಗವಿಲ್ಲದಿದ್ದರೆ ಬೇರೆ ಉದ್ಯೋಗವನ್ನು ಹುಡುಕಿಕೊಂಡು ದುಡಿದು ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡಲೇಬೇಕು" ಎಂದು ಕೋರ್ಟ್‌ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+