ಮತ್ತೆ ಸಿಎಂ ಆಗ್ತಾರಾ ಸಿದ್ದು, ಡಿಕೆಶಿ ಸಿಎಂ ಆಸೆಗೆ ಶಾಕ್ ಕೊಡುತ್ತಾ ಹೈಕಮಾಂಡ್; ಸಿದ್ದರಾಮಯ್ಯ ಹೇಳಿಕೆ ಹಿಂದಿನ ಮರ್ಮವೇನು?
ಬೆಂಗಳೂರು,ಏಪ್ರಿಲ್4: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕರ ನಡುವೆ ಮನಸ್ತಾಪಗಳಿವೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇಟ್ಟಕೊಂಡು ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದ ಕಾಂಗ್ರೆಸ್ ನಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ನಾನು ಹಾಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎಂದು ಒಪ್ಪಿಕೊಂಡಿದ್ದು, ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಪಕ್ಷವು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಕಾಂಕ್ಷಿಗಳಲ್ಲಿ ನಾನೂ ಸೇರಿದ್ದೇನೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಪಕ್ಷದ ಮುಖ್ಯಸ್ಥ ಡಿ.ಕೆ. ಶಿವಕುಮಾರ್‌ಗೆ ಉನ್ನತ ಹುದ್ದೆಯ ರೇಸ್‌ನಲ್ಲಿ ಅವಕಾಶವಿಲ್ಲ. ಕಾಂಗ್ರೆಸ್ ಗೆದ್ದರೂ ಹೈಕಮಾಂಡ್ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲ್ಲ ಎಂದು ಸಿದ್ದರಾಮಯ್ಯ ಅಚ್ಚರಿ ಹೇಳಿಕೆಯನ್ನ ನೀಡಿದ್ದಾರೆ.

ಹೌದು, ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, "ನಾನೂ ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ, ಹೈಕಮಾಂಡ್ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಅಲ್ಲದೆ, ಯುವ ಪೀಳಿಗೆಯ ನಾಯಕರಿಗೆ ಏಕೆ ಅವಕಾಶ ನೀಡಬಾರದು ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಇದು ನನ್ನ ಕಡೆಯ ಚುನಾವಣೆಯಾಗಿದೆ ಎಂದು 75 ವರ್ಷ ವಯಸ್ಸಿನ ಸಿದ್ದರಾಮಯ್ಯ ಹೇಳಿದ್ದು, ಇದೇ ವೇಳೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸುವುದಿಲ್ಲ. ಅದರ ಅಗತ್ಯವೂ ಇರುವುದಿಲ್ಲ. ಏಕೆಂದರೆ, ಕಾಂಗ್ರೆಸ್ ಸಂಪೂರ್ಣ ಸಾಮರ್ಥ್ಯದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನೂ ಹೈಕಮಾಂಡ್ ಒಪ್ಪಿದರೆ ಮಾತ್ರ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಮಗೆ ಈಗಾಗಲೇ ವರುಣದಿಂದ ಟಿಕೆಟ್ ದೊರಕಿದ್ದು, ವರುಣದಿಂದಲೇ ಸ್ಪರ್ಧಿಸಲಿದ್ದೇನೆ. ಆದರೆ, ಕೋಲಾರದಲ್ಲಿ ಸ್ಪರ್ಧಿಸಿದರೆ ಸುತ್ತಲಿನ 20 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನೆರವಾಗಲಿದೆ ಎಂದು ಸ್ಥಳೀಯ ನಾಯಕರಿಂದ ಒತ್ತಾಯವಿದೆ. ಹೀಗಾಗಿ, ಈ ವಿಚಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಹೈಕಮಾಂಡ್ ಒಪ್ಪಿದರೆ ಮಾತ್ರ ಕೋಲಾರದಿಂದ ಸ್ಪರ್ಧಿಸುವೆ ಎಂದು ಎನ್‌ಡಿಟಿವಿ ಸಂದರ್ಶನದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಮತ್ತೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮತ್ತೆ ಜಟಾಪಟಿ ಏರ್ಪಡಲಿ ಎಂದು ತಿಳಿದುಬಂದಿದೆ. ಈ ಇಬ್ಬರ ನಾಯಕರಲ್ಲಿ ಸಿಎಂ ಸ್ಥಾನದ ಜಟಾಪಟಿಯಿಂದಾಗಿ ಚುನಾವಣಾ ಹೊತ್ತಲಿ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ಇತ್ತ ಹಲವು ಸಮೀಕ್ಷೆಯಲ್ಲಿ ಕಾಂಗ್ರೆಸ್ ಮೊದಲ ಸ್ಥಾನದಲ್ಲಿದ್ದು, ಕಾಂಗ್ರೆಸ್ ಈ ಬಾರೀ ಗೆಲ್ಲವ ಸಾಧ್ಯತೆ ಇದೆ ಎಂದು ಹಲವು ರಾಜಕೀಯ ವಿಶ್ಲೇಷಕರು ಹೇಳಿದ್ದು, ಇದೀಗ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ಅವರು ಸಿಎಂ ಆಗಲ್ಲ ಎಂಬ ಹೇಳಿಕೆ ಸಾಕಷ್ಟು ಅಚ್ಚರಿಯನ್ನ ಉಂಟು ಮಾಡಿದೆ. ಅದು ಅಲ್ಲದೇ, ಸಿದ್ದರಾಮಯ್ಯ ಬೆಂಬಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಇದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದ್ದು, ಸಿಎಂ ಸ್ಥಾನದ ಕುರಿತು ಹೈಕಮಾಂಡ್ ಈಗಾಗಲೇ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಹೋರಾಟ ದಿನದಿಂದ ದಿನಕ್ಕೆ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಹೊರತುಪಡಿಸಿ ಲಿಂಗಾಯತ ಸಮುದಾಯದಿಂದ ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ (ಎಸ್‌ಟಿ), ಡಾ. ಜಿ ಪರಮೇಶ್ವರ್ (ದಲಿತ) ಕೂಡ ಕಣಕ್ಕೆ ಇಳಿದಿದ್ದಾರೆ.
ಎಬಿಪಿ ನ್ಯೂಸ್ ಸಿ ವೋಟರ್ ಮುಖ್ಯಮಂತ್ರಿ ಸ್ಥಾನಕ್ಕೆ ಉನ್ನತ ಆಯ್ಕೆಯ ಬಗ್ಗೆ ಸಮೀಕ್ಷೆಯು ನಡೆಸಿತು. ಸಮೀಕ್ಷೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದ ಸ್ಪಷ್ಟ ನಾಯಕರಾಗಿ ಹೊರಹೊಮ್ಮಿದ್ದಾರೆ












Click it and Unblock the Notifications