ನೀವು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ
ಬೆಂಗಳೂರು, ಅಕ್ಟೋಬರ್ 25: ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತನಾಡಿರುವ ಡಿಕೆ ಶಿವಕುಮಾರ್‌ಗೆ ಮತ್ತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿಕೆ ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಪ್ರಶ್ನಿಸಿದ್ದಾರೆ.

"ಈ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು" ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ ಎಂದು ಅವರು ಹೇಳಿದ್ದಾರೆ.
ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ 'ದುಷ್ಟ'ಪ್ರಜ್ಞೆ, 'ಅತಿ' ಬುದ್ಧಿವಂತಿಕೆ, 'ಅಸಾಮಾನ್ಯ' ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ತಿಳಿಸಿದ್ದಾರೆ.
ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು @DKShivakumar ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 25, 2023
"ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ" ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ!
ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಅವರು ಪ್ರಶ್ನಿಸಿದ್ದಾರೆ.

ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಎಚ್‌ಡಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ.
ಅಂದು ಲೋಕೋಪಯೋಗಿ, ಬೃಹತ್ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ?
ನಾಡಪ್ರಭು ಶ್ರೀ ಕೆಂಪೇಗೌಡರು, ಶ್ರೀ ಕೆಂಗಲ್ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್ ಎಸ್ಟೇಟ್ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್? ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಕುಮಾರಸ್ವಾಮಿ ಹೇಳಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications