ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ: ಆರಗ ಜ್ಞಾನೇಂದ್ರ

ಬೆಳಗಾವಿ,ಡಿಸೆಂಬರ್ 26: ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ಸೈಬರ್ ಕ್ರೈಂ ವಂಚನೆಗೊಳಗಾದವರ ನೆರವಿಗಾಗಿ ಸರ್ಕಾರವು ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ವಿಧಾನ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪಿ.ಆರ್.ರಮೇಶ್ ಹಾಗೂ ಟಿ.ಎ.ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದ ಅವರು, ರಾಜ್ಯದಲ್ಲಿ ಸೈಬರ್ ಅಪರಾಧ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಸೈಬರ್ ಸೆಲ್ ಆಧುನೀಕರಣಗೊಳಿಸಲಾಗಿದೆ. ಪೊಲೀಸರಿಗೆ ಆಧುನಿಕ ತರಬೇತಿ ನೀಡಲು ಸಿ.ಐ.ಡಿ ಘಟಕದಲ್ಲಿ ವಿಶೇಷ ತರಬೇತಿ ವಿಭಾಗವನ್ನು ಸ್ಥಾಪಿಸಲಾಗಿದೆ. ಒಟ್ಟು 3657 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ, ಸರ್ಕಾರಿ ಅಭಿಯೋಜಕರು, ಇನ್ನಿತರೆ ಕಾನೂನು ಜಾರಿ ಸಂಸ್ಥೆಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯದ ಗೃಹ ಇಲಾಖೆ ಗುಜರಾತಿನ ಅಹಮದಬಾದ್ ವಿಧಿ ವಿಜ್ಞಾನ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅಲ್ಲಿ ರಾಜ್ಯದ ಆಸಕ್ತ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೊಡಿಸಿ ನೇಮಕಾತಿ ಮಾಡಲಾಗಿದೆ.

ಕೇಂದ್ರ ಸರ್ಕಾರ ಸೈಬರ್ ದೂರುಗಳನ್ನು ದಾಖಲಿಸಲು ನ್ಯಾಶನಲ್ ಸೈಬರ್ ಕ್ರೆöÊಂ ರಿಪೋರ್ಟಿಂಗ್ ಪೋರ್ಟಲ್ ಸ್ಥಾಪಿಸಿದೆ. ಇದರಲ್ಲಿ ರಾಜ್ಯಕ್ಕೆ ಸಂಬAಧಿಸಿದAತೆ ಒಟ್ಟು 80,379 ದೂರುಗಳು ದಾಖಲಾಗಿವೆ. 53,229 ದೂರುಗಳು ಪರಿಶೀಲನಾ ಹಂತದಲ್ಲಿವೆ. 14,960 ದೂರುಗಳನ್ನು ಪರಿಶೀಲಿಸಿ ಮುಕ್ತಾಯಗೊಳಿಸಲಾಗಿದೆ. 901 ದೂರುಗಳು ತಿರಸ್ಕರಿಸಲ್ಪಟ್ಟಿವೆ. 5,734 ಪ್ರಕರಣಗಳ ವಿಚಾರಣೆ ಬಾಕಿಯಿದೆ. ಒಟ್ಟು 528 ಪ್ರಕರಣಗಲ್ಲಿ ಎಪ್.ಐ.ಆರ್. ದಾಖಲಿಸಲಾಗಿದೆ. 2,028 ಪ್ರಕರಣಳನ್ನು ದೂರುದಾರರು ಹಿಂಪಡೆದಿದ್ದಾರೆ.

Every District And City limits Establishment Of Cyber Police Station Araga Jnanendra Said

ಸಾರ್ವಜನಿಕರು ಸೈಬರ್ ವಂಚನೆಯಾದ ತಕ್ಷಣವೇ ದೂರು ದಾಖಲಿಸಬೇಕು. ಹಣದ ವಂಚನೆ ಕಂಡು ಬಂದ ಎರಡು ಗಂಟೆಗಳ ಒಳಗೆ ದೂರು ಸಲ್ಲಿಸಿದರೆ, ವಂಚನೆ ಮಾಡಿ ಹಣ ಪಡೆದುಕೊಂಡವರ ಬ್ಯಾಂಕ್ ಖಾತೆಯನ್ನು ನಿಷ್ಕಿçಯಗೊಳಿಸಿ ಹಣದ ವಂಚನೆಯಾಗುವುದನ್ನು ತಡೆಯಲಾಗುವುದು. ಈ ರೀತಿಯಲ್ಲಿ ರೂ.70 ಕೋಟಿಗೂ ಅಧಿಕ ಮೊತ್ತದ ಹಣ ವಂಚನೆಗೆ ಒಳಗಾಗುವುದನ್ನು ತಡೆಹಿಡಿಯಲಾಗಿದೆ. ಇಂದು ಸೈಬರ್ ಅಪರಾಧಗಳ ಸ್ವರೂಪ ಬದಲಾಗಿದೆ. ಇದಕ್ಕೆ ತಕ್ಕಹಾಗೆ ಕಾನೂನುಗಳನ್ನು ರೂಪಿಸುವುದು ಅಗತ್ಯವಾಗಿದೆ.

ಜಾಲತಾಣಗಳಲ್ಲಿ ಅಶ್ಲೀಲ ವಿಷಯಗಳು ಪ್ರಸಾರವಾಗುತ್ತಿರುವುದು ಹಾಗೂ ಇವು ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಅಂತರ್ಜಾಲದಲ್ಲಿ ಸಮಾಜಘಾತುಕ ಪೋಸ್ಟ್ಗಳನ್ನು ಗುರುತಿಸಿ ತೆರವುಗೊಳಿಸುವ ಕಾರ್ಯವನ್ನು ಸೈಬರ್ ಕ್ರೈಂ ಪೊಲೀಸರು ನಿರ್ವಹಿಸುತ್ತಿದ್ದಾರೆ. ಅಶ್ಲೀಲ ವಿಷಯ ಹಾಗೂ ವಿಡಿಯೋಗಳನ್ನು ಪೊಸ್ಟ್ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಮಾಹಿತಿ ತಂತ್ರಜ್ಞಾನ ಕಾಯ್ದೆ, ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ. ಕೆಟ್ಟ ಪರಿಣಾಮ ಬೀರುವ ಪೋಸ್ಟ್ಗಳನ್ನು ಸಂಬಂಧಪಟ್ಟ ಜಾಲತಾಣದಿಂದ ಹಾಗೂ ಸಾರ್ವಜನಿಕರ ವೀಕ್ಷಣೆಯಿಂದ ತೆಗೆದು ಹಾಕಲು ಸಂಬAಧಪಟ್ಟ ಜಾಲತಾಣದ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಲಾಗುತ್ತಿದೆ. ಅಶ್ಲೀಲ ದೃಶ್ಯಗಳು, ಸಮಾಜಘಾತುಕ ವಿಷಯ ಪೋಸ್ಟ್ಗಳ ಕುರಿತು ದೂರು ಸಲ್ಲಿಸಲು ಪ್ರತಿ ಜಿಲ್ಲೆ ಹಾಗೂ ನಗರಗಳಲ್ಲಿ ಕುಂದುಕೊರತೆ ವಿಭಾಗಗಳನ್ನು ಸ್ಥಾಪಿಸಲಾಗಿದೆ. ಇದರೊಂದಿಗೆ ವಿದ್ಯಾರ್ಥಿಗಳು ಹಾಗೂ ಯುವಕ ಯುವತಿಯರಿಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ. ಇದಕ್ಕೆ ಶಿಕ್ಷಕರು, ಪೋಷಕರ ಸಹಕಾರದ ಅಗತ್ಯವಿದೆ ಎಂದರು.

ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕವೇ ಸ್ಪೋಟಕಗಳನ್ನು ತಯಾರಿಸುವುದನ್ನು ಕಲಿತಿದ್ದ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗಿದೆ. ಆದರೆ ಆರೋಪಿಯು ಈ ಕುರಿತು ಹೇಳಿಕೆ ನೀಡುವುದು ಬಾಕಿಯಿದೆ. ಇದನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಶಾಸಕ ಪಿ.ಆರ್.ರಮೇಶ್ ಮಾತನಾಡಿ ಕಾಮೋತ್ತೇಜಕ ದೃಶ್ಯಗಳನ್ನು ಜಾಲತಾಣಗಳಲ್ಲಿ ವೀಕ್ಷಿಸುವ ಗೀಳು ಯುವಜನರಲ್ಲಿ ಹೆಚ್ಚಾಗಿದೆ. ಇದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದರಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತಿದೆ. ಹಿಂದೂ ಸಂಸ್ಕೃತಿಯೂ ನಾಶವಾಗುತ್ತಿದೆ. ದುಷ್ಟ ಹಾಗೂ ಬಾಹ್ಯ ಶಕ್ತಿಗಳು ವ್ಯವಸ್ಥಿತವಾಗಿ ದೇಶದ ಯುವಜನರನ್ನು ಇದರ ದಾಸರನ್ನಾಗಿ ಮಾಡುತ್ತಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್‌ಗಳಲ್ಲಿನ ಕಾಮೋತ್ತೇಜಕ ದೃಶ್ಯಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಸಕ ಟಿ.ಎ.ಶರವಣ ಮಾತನಾಡಿ ಸೈಬರ್ ಮೂಲಕ ರಾಜ್ಯದಲ್ಲಿ ರೂ.120 ಕೋಟಿಗೂ ಅಧಿಕ ವಂಚನೆ ಎಸಗಲಾಗಿದೆ ಈ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+