ಇವಿಎಂ ತಂತ್ರಜ್ಞಾನದ ಬದಲಾವಣೆ ಅಸಾಧ್ಯ: ಸಂಜೀವ್ ಕುಮಾರ್
ಬೆಂಗಳೂರು, ಮಾರ್ಚ್ 26: ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾವಣೆ ವಿಧಾನ, ಚಲಾಯಿಸಿ ಮತದ ಸುರಕ್ಷತೆ ಹಾಗೂ ನಿಖರತೆ ಕುರಿತು ಚುನಾವಣಾ ಆಯೋಗ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
ಬೆಳಗ್ಗೆ 7ರಿಂದ ಲಾಲ್ ಬಾಗ್ ಉದ್ಯಾನದಲ್ಲಿ ರಾಜ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂದರ್ಭದಲ್ಲಿ ಮಾತನಾಡಿದ ಅವರು, ಮತ ಯಂತ್ರಗಳಲ್ಲಿ ಅಳವಡಿಸಿರುವ ತಂತ್ರಾಂಶ ವನ್ನು ಬದಲಾಯಿಸಲು ಸಾಧ್ಯವಿಲ್ಲ.
ಇದಕ್ಕೆ ಯಾವುದೇ ರೀತಿಯ ಇಂಟರ್ ನೆಟ್ , ಬ್ಲೂಟೂತ್ ಅಥವಾ ಪೋರ್ಟ್ ಮೂಲಕ ಸಂಪರ್ಕ ಸಾಧ್ಯವಿಲ್ಲ. ಆದ್ದರಿಂದ ಮತಯಂತ್ರಗಳ ಕುರಿತು ಸಾರ್ವಜನಿಕರು ಯಾವುದೇ ಅನುಮಾನ ಪಡಬೇಕಾಗಿಲ್ಲ ಎಂದರು.

ಚುನಾವಣೆಗೆ ಬಳಸುವ ಮುನ್ನ ಯಂತ್ರಗಳನ್ನು ಮೂರು ಹಂತಗಳಲ್ಲಿ ಪರೀಕ್ಷಿಸಲಾಗುತ್ತದೆ. ಅಲ್ಲದೆ, ಭದ್ರತೆಯಲ್ಲಿ ಅವುಗಳನ್ನು ಸಂರಕ್ಷಿಸಲಾಗುತ್ತದೆ. ವಿವಿ ಪ್ಯಾಟ್ ಯಂತ್ರದಲ್ಲಿ ಮತದಾರರು ಮತ ಚಲಾಯಿಸಿದ ಕೂಡಲೇ ಅವರು ಮತ ಚಲಾಯಿಸಿ ಅಭ್ಯರ್ಥಿಗಳ ವಿವಿರಗಳು ಲಭ್ಯವಾಗುತ್ತದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ನಾಗರಿಕರಲ್ಲಿ ಮತಯಂತ್ರ ಬಳಕೆ ಮಾಡುವುದು ಹೇಗೆ ಎಂಬುದರ ಕುರಿತು ತಿಳಿಸಿಕೊಡುವುದರ ಜತೆಗೆ ಮತಯಂತ್ರದ ಮೂಲಕ ಮತ ಚಲಾಯಿಸಿದ ಮತದ ಬಗ್ಗೆ ಖಾತರಿ ಪಡಿಸಿಕೊಳ್ಳುವುದರ ಬಗ್ಗೆ ಜಾಗೃತಿ ನೀಡಲಾಯಿತು.ವಿದ್ಯುನ್ಮಾನ ಮತಯಂತ್ರಗಳನ್ನು ಮತ್ತು ವಿವಿ ಪ್ಯಾಟ್ ಗಳನ್ನು ಸ್ಥಳದಲ್ಲಿಟ್ಟು ಸಾರ್ವಜನಿಕರಿಗೆ ಅವುಗಳನ್ನು ನೋಡುವ , ಬಳಸುವುದಕ್ಕೆ ಅವಕಾಶ ನೀಡುವ ಮೂಲಕ ಅರಿವು ಮೂಡಿಸಲಾಯಿತು.












Click it and Unblock the Notifications