ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿಧಾನಸಭೆ ಎಲೆಕ್ಷನ್ನಲ್ಲಿ ಇವಿಎಂ ಗ್ಯಾರಂಟಿ!

|
Google Oneindia Kannada News

ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್ ಸರ್ಕಾರದ ಸತತ ಒತ್ತಡದ ನಡುವೆಯೂ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಇವಿಎಂ ಅಳವಡಿಕೆ ಇದೆಯೋ ಇಲ್ಲವೋ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ.

ಬುಧವಾರ ಕೇಂದ್ರ ಚುನಾವಣಾ ಆಯೋಗದ ಮಹಾ ನಿರ್ದೇಶಕ ದಿಲೀಪ್ ಶರ್ಮಾ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಓಟಿಂಗ್ ಮೆಷಿನ್ ಬಳಕೆ ಪ್ರಕಟಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸರ್ವಿಸ್​​ ಮ್ಯಾನ್, ಎನ್​​ಆರ್​​ಐಗಳ ಆನ್​​ಲೈನ್ ಮತದಾನಕ್ಕೆ ಅವಕಾಶ ನೀಡಿದ್ದು, ಮತದಾನಕ್ಕೆ 3 ದಿನ ಮುಂಚಿತದವರೆಗೂ ಎನ್​​ಆರ್​​ಐಗಳ ಮತದಾರ ಪಟ್ಟಿಗೆ ನೋಂದಣಿ ಮಾಡಿಕೊಳ್ಳಬಹುದು.

ಮಾರ್ಚ್ ಮಧ್ಯ ಭಾಗದಲ್ಲಿ ಕರ್ನಾಟಕ ಚುನಾವಣೆ ಘೋಷಣೆ ಸಾಧ್ಯತೆ ಮಾರ್ಚ್ ಮಧ್ಯ ಭಾಗದಲ್ಲಿ ಕರ್ನಾಟಕ ಚುನಾವಣೆ ಘೋಷಣೆ ಸಾಧ್ಯತೆ

ಚುನಾವಣೆ ಅಭ್ಯರ್ಥಿಗಳ ವೆಚ್ಚವನ್ನು 28 ಲಕ್ಷ ರೂ.ಗೆ ನಿಗದಿ ಮಾಡಲಾಗಿದ್ದು, ಹೆಚ್ಚಿನ ಹಣ ಖರ್ಚು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

EVMs will install in state poll

ಉಪಚುನಾವಣೆ ಆಯುಕ್ತ ಸಂದೀಪ್ ಸಕ್ಸೇನಾ ಮಾತನಾಡಿ, ಚುನಾವಣಾ ಪ್ರಚಾರಕ್ಕೆ ತೆರಳುವ ಪಕ್ಷಗಳು, ರಾಜಕೀಯ ಮುಖಂಡರು ಚುನಾವಣಾ ಆಯೋಗದ ಒಪ್ಪಿಗೆ ಪಡೆಯಬೇಕು. 25 ಸಾವಿರ ಸೇವಾ ಮತದಾರರಿಗೆ ಪೋಸ್ಟಲ್ ಬ್ಯಾಲೆಟ್​​ಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಸಂಕ್ರಾಂತಿ ವಿಶೇಷ ಪುಟ

ಈ ಬಾರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು ಜತೆಗೆ ವಿವಿ ಪ್ಯಾಟ್ ಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಮತದಾರರಿಗೆ ತಾವು ಯಾರಿಗೆ ಮತದಾನ ಮಾಡಿದ್ದು ಎಂದು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೆ, ಡಿಜಿಟಲ್ ಮ್ಯಾಪ್ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕೇಂದ್ರ ಉಪಚುನಾವಣಾ ಆಯುಕ್ತ ಉಮೇಶ್ ಸಿನ್ಹಾ ಮಾತನಾಡಿ, ಗುರುತಿನ ಸಂಖ್ಯೆ ಬಗ್ಗೆ ತಿಳಿಯುವ ಚುನಾವಣಾ ಅಪ್ಲಿಕೇಷನ್ ಬಿಡುಗಡೆ ಮಾಡಲಾಗಿದ್ದು, 9731979898 ಸಂಖ್ಯೆಗೆ ಎಸ್​​ಎಂಎಸ್ ಕಳುಹಿಸಿದರೆ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ, ಸಂಖ್ಯೆ, ವಿಳಾಸ ಸೇರಿದಂತೆ ಚುನಾವಣಾ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ದೀರೇಂದ್ರ ಓಝ, ನಿಖಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಉಪಸ್ಥಿತರಿದ್ದರು.

English summary
Central election Commission Additional Director General Dileep Sharma declared that the electronic voting machines will be used in upcoming state assembly elections here on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X