ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು?

ಬೆಂಗಳೂರು, ಅಕ್ಟೋಬರ್‌ 13: ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ! ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಎಚ್‌ ಡಿ ಕುಮಾರಸ್ವಾಮಿ, ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಕೇಳಿದ್ದಾರೆ.

Ex Chief Minister HD KumaraswamyFierce Attack Against Chief Minister Siddaramaiah

ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಪ್ರಶ್ನಿಸಿದ್ದಾರೆ.

23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ 'ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ'ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್‌ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Ex Chief Minister HD KumaraswamyFierce Attack Against Chief Minister Siddaramaiah

ಈಗ ಹೇಳಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು..? ದಯಮಾಡಿ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ಕೇಳಿದ್ದಾರೆ.

ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ' ಕೈ ' ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್!! ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ

ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಹೇಳುವ ಮೂಲಕ ಕರ್ನಾಟಕಕ್ಕೆ ಕಾಂಗ್ರೆಸ್‌ ಕನ್ನಡ ಎಂದು ಹ್ಯಾಶ್‌ ಟ್ಯಾಗ್‌ ಬಳಸಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+