ತವರಿಗೆ ಮರಳಿದ ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?
ಬೆಂಗಳೂರು,
ಮಾ. 25 : ಕಳೆದ ವಿಧಾನಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಂಗಳವಾರ ತವರು ಪಕ್ಷಕ್ಕೆ ಮರಳಿದ್ದಾರೆ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದು ನನ್ನ ಗುರಿ ಎಂದು ಘೋಷಿಸಿದ್ದಾರೆ. id="toptextpromo"> id='are-slot-1' class='oiad oi-axt oiadv'>ಮಂಗಳವಾರ
ಬೆಂಗಳೂರಿನ ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೇಳೂರು ಗೋಪಾಲಕೃಷ್ಣ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೇರಿದ್ದ ಬೇಳೂರು ಈ ಮೂಲಕ ಮಾತೃ ಪಕ್ಷಕ್ಕೆ ಮರಳಿದ್ದಾರೆ. ಬಿಜೆಪಿಗೆ ಮರಳಿದ ಬೇಳೂರು ಹೇಳಿದ್ದೇನು? (ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ) id='are-slot-2' class='oiad oi-axt oiadv'>
ಮುನಿಸಿಕೊಂಡಿದ್ದ ಬೇಳೂರು
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದರು. ಆದರೆ, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಯಾರು ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲಿಲ್ಲ. ಆದ್ದರಿಂದ ಮುನಿಸಿಕೊಂಡು ಪಕ್ಷ ತೊರೆದಿದ್ದರು.

ತೆನೆ ಹೊತ್ತು ಸೋತಿದ್ದ ಬೇಳೂರು
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಸೇರಿದ್ದ ಬೇಳೂರು ಗೋಪಾಲಕೃಷ್ಣ, ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ವಿರುದ್ಧ ಸೋಲು ಅನುಭವಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಗೀತಾ ಶಿವರಾಜ್ ಕುಮಾರ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದರಿಂದ, ಪುನಃ ಬಿಜೆಪಿಗೆ ಮರಳಿದ್ದಾರೆ.

ಮೋದಿಯನ್ನು ಪ್ರಧಾನಿ ಮಾಡಬೇಕು
ಬಿಜೆಪಿ ಸೇರ್ಪಡೆ ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅನಿವಾರ್ಯ ಕಾರಣದಿಂದಾಗಿ ಬಿಜೆಪಿ ತೊರೆದಿದ್ದೆ. ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮಾಡಬೇಕು ಎಂಬ ಕಾರಣಕ್ಕಾಗಿ ಬಿಜೆಪಿಗೆ ಮರಳಿದ್ದೇನೆ ಎಂದು ಹೇಳಿದರು.

ಯಡಿಯೂರಪ್ಪ ಗೆಲ್ಲಿಸುತ್ತೇನೆ
ಬಂಗಾರಪ್ಪ ಕುಟುಂಬದ ಜೊತೆ ಈಗಲೂ ನಾನು ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ, ರಾಜಕೀಯ ಬೇರೆ. ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೆಲ್ಲಿಸಲು ಕಷ್ಟಪಟ್ಟು ಕೆಲಸ ಮಾಡುವುದಾಗಿ ಬೇಳೂರು ತಿಳಿಸಿದರು.












Click it and Unblock the Notifications