Exam Result: ಆನ್‌ಲೈನ್‌ನಲ್ಲಿ 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದೇಗೆ?

ಬೆಂಗಳೂರು, ಏಪ್ರಿಲ್‌, 08: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 8) ಶಾಲೆಗಳಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಆನ್‌ಲೈನ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸುವುಸುದೆ ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ್ದ ಮೌಲ್ಯಾಂಕದ ಪರೀಕ್ಷೆಯ ಫಲಿತಾಂಶ ಇಂದು ಆಯಾ ಶಾಲೆಗಳಲ್ಲೇ ಪ್ರಕಟ ಮಾಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಸೂಚನೆ ನೀಡಿದೆ.

Exam Result How to Check Class 5th 8th 9th Exam Result in Online

ಮೊದಲು ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. ಬಳಿಕ ಆನ್‌ಲೈನ್‌ನಲ್ಲಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ. ಪರೀಕ್ಷಾ ಮಂಡಳಿಯ ಅಧಿಕೃತ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಇನ್ನು ತೇರ್ಡೆಯಾದ ವಿದ್ಯಾರ್ಥಿಗಳು ತಮ್ಮ ಮುಂದಿನ ತರಗತಿಗಳಿಗೆ ಸೇರಲು ಅಂಕಗಳು ಮತ್ತು ಶ್ರೇಣಿಯ ಹಾರ್ಡ್ ಕಾಪಿಯನ್ನು ತೋರಿಸಬೇಕಾಗುತ್ತದೆ. ಆದ್ದರಿಂದ ಶಾಲೆಯಲ್ಲಿ ನೀಡುವ ಅಂಕಪಟ್ಟಿಯನ್ನು ಪಡೆಯಬೇಕಾಗುತ್ತದೆ.

ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸುವುದೇಗೆ?

* ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
* ಮೊದಲ ಪುಟದಲ್ಲಿ ಕಾಣುವ ಫಲಿತಾಂಶದ ವಿಭಾಗದ ಮೇಲೆ ಕ್ಲಿಕ್ ಮಾಡಿ.
* ನಂತರ ಅಗತ್ಯ ಇರುವ ವಿವರಗಳನ್ನು ಭರ್ತಿ ಮಾಡಿ.
* ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ, ಆಗ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ.
* ಇನ್ನು ಬಳಿಕ ಫಲಿತಾಂಶವನ್ನು ಸ್ಕ್ರೀನ್‌ಶಾಟ್ ಅಥವಾ ಡೌನ್‌ಲೋಡ್‌ ಪ್ರಿಂಟ್‌ಔಟ್‌ ತೆಗೆದುಕೊಳ್ಳಬಹುದಾಗಿದೆ.
* ವಿದ್ಯಾರ್ಥಿಗಳಿಗೆ ಫಲಿತಾಂಶದ ಬಗ್ಗೆ ತೃಪ್ತಿಯಾಗದಿದ್ದರೆ ಮರು ಮೌಲ್ಯಮಾಪನಕ್ಕೆ ಅವಕಾಶ ಇರುತ್ತದೆ. ಇದಕ್ಕಾಗಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಬೇಕಾಗುತ್ತದೆ. ಇದಕ್ಕಾಗಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+