Republic Double Exit Poll Karnataka: ಕರ್ನಾಟಕದಲ್ಲಿ 'ಕೈ'ಗೆ ನಿರಾಸೆ, 'ಕಮಲ'ಕ್ಕೆ ಭರವಸೆ: ಫಲಿತಾಂಶದಲ್ಲಿ ಏನಿದೆ?
ಬೆಂಗಳೂರು, ಜೂನ್ 01: ಕರ್ನಾಟಕ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಇಂದು (ಜೂನ್ 01) ಚುನಾವಣೋತ್ತರವಾಗಿ Republic TV with Matrize Exit Poll ಸಮೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
ಕರ್ನಾಟಕ ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಪ್ರಕಾರ, ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು ಈ ಭಾರಿಯು ಮತ್ತೆ ಬಹುಮತ ಪಡೆಯಲಿದೆ. ಬಿಜೆಪಿ (ಎನ್‌ಡಿಎ) 21 ಸೀಟುಗಳನ್ನು ಗೆಲ್ಲುವ ವಿಶ್ವಾಸ ಸಿಕ್ಕಿದೆ. ಕಾಂಗ್ರೆಸ್ (ಇಂಡಿಯಾ ಮೈತ್ರಿಕೂಟ) ರಾಜ್ಯದಲ್ಲಿ ಬರೀ 07 ಸ್ಥಾನಗಳನ್ನು ಗೆಲ್ಲಲಿದೆ. ಇದು ಕಳೆದ ಬಾರಿಗಿಂತ ಹೆಚ್ಚು ಎಂದು ಹೇಳಲಾಗುತ್ತಿದೆ. ಸದ್ಯ ಸಮೀಕ್ಷೆಯಿಂದ ಬಿಜೆಪಿ ಪಡೆಯಲ್ಲಿ ಮಂದಹಾಸ ಮೂಡಿಸಿದೆ.

ಕರ್ನಾಟಕ ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಿತು. ಎರಡನೇ ಹಂತದಲ್ಲಿ ಮೇ 07 ಚುನಾವಣೆ ಸುಸೂತ್ರವಾಗಿ ಜರುಗಿತು. ಈ ಚುನಾವಣೆ ಸಂಬಂಧ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಪಕ್ಷಗಳ ಜೊತೆಗೆ ಕಾಂಗ್ರೆಸ್ ಏಕಾಂಗಿಯಾಗಿ ಪೈಪೋಟಿ ನೀಡಿತ್ತು.
ಕಾಂಗ್ರೆಸ್‌ಗೆ ವಿಧಾಸಭೆಯಲ್ಲಿ ಘೋಷಿಸಿ ಜಾರಿಗೆ ತಂದ ಐದು ಗ್ಯಾರೆಂಟಿ ಯೋಜನೆಗಳ ಭರವಸೆಯೊಂದಿಗೆ ಲೋಕಸಭೆ ಎದುರಿಸಿದೆ. ಕಾಂಗ್ರೆಸ್‌ನಲ್ಲಿ ರಾಜ್ಯ ಚುನಾವಣೆ ಎದುರಿಸಿದ್ದ ಹುಮ್ಮಸ್ಸು ಇತ್ತು. ಇತ್ತ ಬಿಜೆಪಿಯು ಹತ್ತು ವರ್ಷಗಳಲ್ಲಿ ಆದ ದೇಶದ ಅಭಿವೃದ್ಧಿ, ರಾಮಮಂದಿರ ನಿರ್ಮಾಣ, ಹಿಂದೂತ್ವ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಅಲೆ ಪ್ರಭಾವದೊಂದಿಗೆ ಚುನಾವಣೆ ಎದುರಿಸಿತ್ತು.
#RepublicDoubleExitPoll | "On June 4, BJP might win 24-25 seats in Karnataka": MP and National President of BJP Yuva Morcha Tejasvi Surya (@Tejasvi_Surya) on Exit Poll Predictions
— Republic (@republic) June 1, 2024
India's biggest Exit Poll coverage with Arnab is now #LIVE. Tune in here to WATCH -… pic.twitter.com/u2GfaZ8p5t
ಬಿಜೆಪಿಯಿಂದ 25 ಅಭ್ಯರ್ಥಿ ಕಣ್ಣಕ್ಕೆ, ಜೆಡಿಎಸ್ 03
ಈ ಚುನಾವಣೆಯಲ್ಲಿ ಬಿಜೆಪಿಯು 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಅದರ ಮೈತ್ರಿ ಪಕ್ಷ ಜೆಡಿಎಸ್ ಮೂರು ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿತ್ತು. ರಾಜ್ಯ ಆಡಳಿತ ಪಕ್ಷ ಕಾಂಗ್ರೆಸ್ ಎಲ್ಲ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಳಿಸಿ ಮೈತ್ರಿ ಪಕ್ಷಗಳ ಎದುರು ಪೈಪೋಟಿ ನಡೆಸಿತ್ತು.
ಪ್ರತಿ ಚುನಾವಣೆಯಂತೆ ಈ ಚುನಾವಣೆಯಲ್ಲೂ ಬಹುಸಂಖ್ಯಾತರಾದ ಲಿಂಗಾಯತ, ಒಕ್ಕಲಿಗ ಸಮುದಾಯ ಮತಗಳು ನೀರ್ಣಾಯಕವಾಗಿವೆ. ಇದರೊಂದಿಗೆ ದಲಿತರು, ಮುಸ್ಲಿಂ ಮತಗಳು ಆಯಾ ಪಕ್ಷಗಳಿಗೆ ವರದಾನ ಎನ್ನಬಹುದು.
ಕಳೆದ ಬಾರಿ ಬಿಜೆಪಿ ಪಕ್ಷವು 25 ಕ್ಷೇತ್ರಗಳನ್ನು ಗೆದ್ದಿತ್ತು. ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದರೆ, ಪಕ್ಷೇತರವಾಗಿ ಸುಮಲತಾ ಅವರು ಮಂಡ್ಯದಲ್ಲಿ ಗೆಲುವು ಸಾಧಿಸಿದ್ದರು. ಜೆಡಿಎಸ್ ಹಾಸನದಲ್ಲಿ ಮಾತ್ರವೇ ಗೆದ್ದಿತ್ತು. ಈ ಭಾರಿ ಚುನಾವಣೆ ಹೊತ್ತಿಗೆ ಒಂದಷ್ಟು ಬದಲಾವಣೆಗಳು ಆದವು. ಈ ಭಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಆದರೆ ಡಬಲ್ ಡಿಜಿಟ್ ಸೀಟು ಗಳಿಸಲ್ಲ ಎಂದು ಹೇಳಲಾಗುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications