ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವರ್ಷದಲ್ಲಿ ಕೆಎಸ್ಆರ್‌ಟಿಸಿ ಬಸ್ ದರ ಹೆಚ್ಚಳ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 27 : ಹೊಸ ವರ್ಷಕ್ಕೆ ಸರ್ಕಾರಿ ಬಸ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಬಸ್ ದರವನ್ನು ಏರಿಕೆ ಮಾಡುವಂತೆ ಸಾರಿಗೆ ಇಲಾಖೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಗುರುವಾರ ಈ ಕುರಿತು ಮಾಹಿತಿ ನೀಡಿದರು. 'ಮೊದಲು ಶೇ 18ರಷ್ಟು ಪ್ರಯಾಣ ದರ ಏರಿಕೆಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಈಗ ಮತ್ತೆ ಪ್ರಸ್ತಾಪ ಸಲ್ಲಿಸಿ ವಿವೇಚನೆಗೆ ಅನುಸಾರವಾಗಿ ದರ ಏರಿಕೆ ಮಾಡುವಂತೆ ಮನವಿ ಮಾಡಲಾಗುತ್ತದೆ' ಎಂದರು.

ಮಣಿಪಾಲ-ಕೆಐಎಎಲ್‌ನಡುವೆ ಜ.3ರಿಂದ ಫ್ಲೈ ಬಸ್ ಸೇವೆಮಣಿಪಾಲ-ಕೆಐಎಎಲ್‌ನಡುವೆ ಜ.3ರಿಂದ ಫ್ಲೈ ಬಸ್ ಸೇವೆ

ಬುಧವಾರ ಸಾರಿಗೆ ನಿಗಮಗಳ ಎಂಡಿಗಳ ಜೊತೆ ಸಚಿವರು ಸಭೆ ನಡೆಸಿದ್ದರು. ಸಭೆಯಲ್ಲಿ ದರ ಏರಿಕೆ ಮಾಡುವಂತೆ ಸಚಿವರನ್ನು ಒತ್ತಾಯಿಸಲಾಗಿತ್ತು. ಶುಕ್ರವಾರ ಸಾರಿಗೆ ಇಲಾಖೆ ಈ ಕುರಿತು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಿದೆ.

ಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರ

KSRTC

'ಡೀಸೆಲ್ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಈಗಾಗಲೇ ಎಲ್ಲಾ ಸಾರಿಗೆ ನಿಗಮಗಳು ಸುಮಾರು 677 ಕೋಟಿ ನಷ್ಟ ಅನುಭವಿಸಿವೆ. ಹೀಗಾಗಿ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ' ಎಂದು ಸಚಿವರು ಹೇಳಿದರು.

ಮೈಸೂರು ಭಾಗದ ಕೆಎಸ್ಆರ್‌ಟಿಸಿ ಬಸ್ ಮೆಜೆಸ್ಟಿಕ್‌ಗೆ ಸ್ಥಳಾಂತರಮೈಸೂರು ಭಾಗದ ಕೆಎಸ್ಆರ್‌ಟಿಸಿ ಬಸ್ ಮೆಜೆಸ್ಟಿಕ್‌ಗೆ ಸ್ಥಳಾಂತರ

ಡಿಸೇಲ್ ಬೆಲೆ 53 ರೂ. ಇದ್ದಾಗ ಬಸ್ ದರ ಏರಿಕೆ ಮಾಡಲಾಗಿತ್ತು. ಅಲ್ಲಿಂದ ಇಲ್ಲಿಯ ತನಕ ಬಸ್ ದರ ಏರಿಕೆ ಮಾಡಿಲ್ಲ. ಹೀಗಾಗಿ ಬಸ್ ದರ ಏರಿಕೆ ಮಾಡಬೇಕು ಎಂಬುದು ಅಧಿಕಾರಿಗಳ ವಾದ. ಈ ಹಿನ್ನಲೆಯಲ್ಲಿ ವಾಸ್ತವ ಚಿತ್ರಣವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ ದರ, ಏರಿಕೆಗೆ ಮನವಿ ಮಾಡಲಾಗುತ್ತದೆ.

English summary
Karnataka transport department all set to summit proposal to Chief Minister H.D.Kumarasamy seeking hike in KSRTC and BMTC bus fares. Government may take final decision in 2019 January.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X