• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೇಂದ್ರ ಸರಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಎಸೆದ ಮಿಲಿಯನ್ ಡಾಲರ್ ಪ್ರಶ್ನೆ

|

ಬೆಂಗಳೂರು, ಸೆ 16: ದೇಶದ ಭಾಷಾ ಸಂಸ್ಕೃತಿಯನ್ನು ಅಧ್ಯಯನ ನಡೆಸಲು ಕೇಂದ್ರ ಸರಕಾರ ರಚಿಸಿದ ಸಮಿತಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ವಿಷಾದ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕನ್ನಡಿಗರು ಅಥವಾ ದ್ರಾವಿಡ ಭಾಷಿಗರು ಇಲ್ಲದ ಸಮಿತಿ ಅದು ಹೇಗೆ ವಸ್ತುನಿಷ್ಠ ಅಧ್ಯಯನ ನಡೆಸಲು ಸಾಧ್ಯ ಎನ್ನುವ ಪ್ರಶ್ನೆಯನ್ನು ಎತ್ತಿದ್ದಾರೆ. ಈ ಸಂಬಂಧ, ಕುಮಾರಸ್ವಾಮಿ ಮಾಡಿದ ಟ್ವೀಟ್ ಹೀಗಿದೆ:

ಹಿಂದಿ ಹೇರಿಕೆ: ಕಿಡಿಕಾರಿದ ಎಚ್ ಡಿ ಕುಮಾರಸ್ವಾಮಿ

"ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ".

"ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ?"

"ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ".

"ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ"ಎಂದು ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

English summary
Expert Committee To Holistic Study The Indian Culture: Former CM HD Kumaraswamy Strong Objection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X