ಅವಧಿ ಮೀರಿದ ತಿಂಡಿ ಪದಾರ್ಥಗಳು ಇದ್ದರೆ ಮೊದಲು ಹೊರಹಾಕಿ- ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು ಜೂನ್ 19: ಅಂಗಡಿಗಳಲ್ಲಿ ಅವಧಿ ಮೀರಿದ ತಿಂಡಿ ಪದಾರ್ಥಗಳು ಇದ್ದರೆ ಮೊದಲು ಹೊರಹಾಕಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಇತ್ತೀಚೆಗೆ ಅಂಡಗಿಗಳಲ್ಲಿ ಅವಧಿ ಮೀರಿದ ಪದಾರ್ಥಗಳ ಮಾರಾಟ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ. ಬಸ್ ನಿಲ್ದಾಣ, ವ್ಯಾಪಾರ ಮಳಿಗೆ ಹಾಗೂ ಆಹಾರ ಉದ್ಯಮಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಹೆಚ್ಚಾಗಿದ್ದು, ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಸಣ್ಣ ಪುಟ್ಟ ಅಂಗಡಿ, ಬೀದಿ ಬದಿ ಹಾಗೂ ವ್ಯಾಪಾರ ಮಳಿಗೆಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳು ಅವಧಿ ಮೀರಿದ ಪದಾರ್ಥಗಳು ಎನ್ನುವ ದೂರುಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿವೆ. ಇದನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಆದೇಶಿಸಿದ್ದಾರೆ.
ಹೀಗಾಗಿ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ ಎಂದು ತಿಳಿಸಿದೆ.
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.
ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ ಎಂದು ಸಾರ್ವಜನಿಕ ಕುಂದುಕೊರತೆ ವಿಭಾಗ ತಿಳಿಸಿದೆ.
ಅಲ್ಲದೆ, ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿರುತ್ತದೆ ಎಂದೂ ಇದೇ ಸಂದರ್ಭದಲ್ಲಿ ತಿಳಿಸಲಾಗಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
2000 ರೈಲು ನಿಲ್ದಾಣಗಳಲ್ಲಿ ಸ್ಥಳೀಯ ಕಲೆಯ ಸೊಬಗು: 1.32 ಲಕ್ಷ ಕುಶಲಕರ್ಮಿಗಳಿಗೆ ಮಾರುಕಟ್ಟೆ ಭಾಗ್ಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications