‘ಪೆನ್‌ಡ್ರೈವ್’ ಸುಳಿಗೆ ಸಿಲುಕಿದ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ!
ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ, ದೇಶಾದ್ಯಂತ ಇದರ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಸಂಸದ, ಹಾಗೂ ಹಾಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದ ಪ್ರಜ್ವಲ್ ರೇವಣ್ಣಗೆ ಇದೀಗ ಸಿಎಂ ಸಿದ್ದರಾಮಯ್ಯ ದೊಡ್ಡ ಆಘಾತ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಖಾಸಗಿ ವಿಚಾರಕ್ಕೆ ಸಂಬಂಧಿಸಿದಂತೆ, ವಿಡಿಯೋ ಪೆನ್‌ಡ್ರೈವ್‌ನಲ್ಲಿ ಹಾಕಿ ಹಾಸನದ ಹಾದಿ & ಬೀದಿಗಳಲ್ಲಿ ಚೆಲ್ಲಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ಆರೋಪಗಳ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ಕೂಡ ಮೊಳಗುತ್ತಿದೆ. ಈ ಸಮಯದಲ್ಲೇ ಕಾಂಗ್ರೆಸ್ ನಾಯಕರು ಈ ವಿಚಾರ ಹಿಡಿದು ಜೆಡಿಎಸ್ ನಾಯಕರ ವಿರುದ್ಧ, ತೀವ್ರ ವಾಗ್ದಾಳಿ ನಡೆಸಿದ್ದರು. ಮತ್ತೊಂದು ಕಡೆ ಸಂತ್ರಸ್ತ ಮಹಿಳೆಯರು ಈ ಕುರಿತು ದೂರು ನೀಡಿ ಕಾನೂನು ಹೋರಾಟಕ್ಕೂ ಮುಂದಾಗಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ. ಇಷ್ಟೆಲ್ಲಾ ಆಘಾತದ ನಡುವೆ ಈಗ ಸಿಎಂ ಸಿದ್ದರಾಮಯ್ಯ ಖುದ್ದು ಸಂಸದ ಪ್ರಜ್ವಲ್ ರೇವಣ್ಣಗೆ ಭೀಕರ ಆಘಾತ ನೀಡಿದ್ದಾರೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಪ್ರಜ್ವಲ್ ರೇವಣ್ಣ ಕುರಿತು ಹೇಳಿದ್ದೇನು?

'ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ...'
ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಕುರಿತು ಮಹತ್ವದ ಟ್ವೀಟ್ ಮಾಡಿದ್ದು 'ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ.' ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಪೆನ್‌ಡ್ರೈವ್ ಕಿಚ್ಚು ಕಾಡ್ಗಿಚ್ಚನ್ನೇ ಹಬ್ಬಿಸಿದೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
— Siddaramaiah (@siddaramaiah) April 27, 2024
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ…
ಜನ ಏನ್ ಹೇಳ್ತಿದ್ದಾರೆ ಅಂದ್ರೆ...
ಒಟ್ನಲ್ಲಿ ಇದೆಲ್ಲಾ ಏನೇ ಇರಲಿ ತಪ್ಪು ಯಾರೇ ಮಾಡಿದ್ದರೂ ತಪ್ಪು, ಅದರ ವಿರುದ್ಧವಾಗಿ ಈಗ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್ ಮೀಡಿಯಾದಲ್ಲು ಜನ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಈ ಕೇಸ್ ಎಲ್ಲಿಗೆ ಬಂದು ನಿಲ್ಲುತ್ತೆ? ಮುಂದೆ ಕರ್ನಾಟಕ ರಾಜಕೀಯದಲ್ಲಿ ಕೂಡ ಯಾವ ರೀತಿಯ ತಲ್ಲಣ ಸೃಷ್ಟಿ ಮಾಡಲಿದೆ? ಅನ್ನೋದನ್ನ ಕಾದು ನೋಡಬೇಕಿದೆ. ಅದಕ್ಕೂ ಮೊದಲು ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಇನ್ನೂ ಬಾಕಿ ಇರುವ ಕಾರಣ ಈ ವಿಚಾರ ದೊಡ್ಡ ಸಂಚಲನ ಸೃಷ್ಟಿ ಮಾಡುವುದು ಪಕ್ಕಾ ಅಂತಿದ್ದಾರೆ ಪ್ರಜೆಗಳು.
ಜೆಡಿಎಸ್ ಪಕ್ಷಕ್ಕೂ ಸಮಸ್ಯೆ?
ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಮೈತ್ರಿ ಆಗಿದ್ದು, ಲೋಕಸಭೆ ಚುನಾವಣೆಯ ಮೂಲಕ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಜೆಡಿಎಸ್‌ನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂದು ಆರೋಪ ಮಾಡಲಾಗುತ್ತಿರುವ ಖಾಸಗಿ ವಿಡಿಯೋಗಳು ಹರಿದಾಡುತ್ತಿರುವುದು ಸಂಚಲನ ಸೃಷ್ಟಿ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಆರೋಪದ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲು ಮುಂದಾಗಿದ್ದು, ಮತ್ತೊಮ್ಮೆ ಕರ್ನಾಟಕದ ರಾಜಕೀಯ ವಲಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಮಾಡಿದೆ. ಹಾಗೇ ಕಾಂಗ್ರೆಸ್ ನಾಯಕರಿಗೆ ಈ ಬೆಳವಣಿಗೆ ಹೊಸ ಅಸ್ತ್ರ ಕೊಟ್ಟಂತೆ ಆಗಿದ್ದು, ಜೆಡಿಎಸ್ ವರಿಷ್ಠರು ಈ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ? ಅಂತಾ ಕಾದು ನೋಡಬೇಕಿದೆ.












Click it and Unblock the Notifications