ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಶುರುವಾಯ್ತು ಬೃಹತ್ ಹೋರಾಟ!
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಅತಿಥಿ ಉಪನ್ಯಾಸಕರು, ಹಲವು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿಯೇ ಅತಿಥಿ ಉಪನ್ಯಾಸಕರ ಹುದ್ದೆ, ಕಾಯಂ ಮಾಡಬೇಕು ಎಂಬ ಒತ್ತಾಯ ಈ ಮೊದಲಿನಿಂದ ಕೇಳಿಬರುತ್ತಿದೆ. ಹಲವು ವರ್ಷಗಳಿಂದಲೂ, ಈ ಕುರಿತು ಆಗ್ರಹ ಕೇಳಿಬರುತ್ತಿತ್ತು. ಇದೀಗ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸೋಕೆ ಆಗ್ರಹಿಸಿ ಬೃಹತ್ ಹೋರಾಟ ಶುರುವಾಗಿದೆ.
ಹೌದು, ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಯನ್ನು ಮಾಡಿದ್ದಾರೆ. ಧಾರವಾಡ ಕಲಾ ಭವನದಿಂದ ಕೋರ್ಟ್ ವೃತ್ತದವರೆಗೆ ಪಂಜಿನ ಮೆರವಣಿಗೆ ಮಾಡಿದ ಉಪನ್ಯಾಸಕರು, ತಮ್ಮನ್ನ ಕಾಯಂ ಉಪನ್ಯಾಸಕರು ಎಂದು ಪರಿಗಣಿಸಲು, ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನು ಈ ಮೂಲಕ ಮಾಡಿದ್ದಾರೆ. ಹಾಗಾದರೆ ಇವರ ಬೇಡಿಕೆಗಳು ಏನೇನು? ಬನ್ನಿ ತಿಳಿಯೋಣ.

ತೀವ್ರಗೊಂಡ ಉಪನ್ಯಾಸಕರ ಹೋರಾಟ
ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವಂತೆ, ಅನೇಕ ವರ್ಷಗಳಿಂದ ಕೂಡ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರಗಳು ಮಾತ್ರ ಈ ಉಪನ್ಯಾಸಕರತ್ತ ತಿರುಗಿಯೂ ನೋಡಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರ ಹೋರಾಟ ಮತ್ತೆ ಶುರುವಾದ ರೀತಿ ಕಾಣುತ್ತಿದೆ. ಅತಿಥಿ ಉಪನ್ಯಾಸಕರ ಪ್ರತಿಭಟನೆ ಹಿನ್ನೆಲೆ, ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಇಷ್ಟೆಲ್ಲ ಬೆಳವಣಿಗೆ ನಡುವೆ ಹೋರಾಟ ತೀವ್ರವಾಗುತ್ತಿದೆ.
ವಿದ್ಯಾರ್ಥಿಗಳಿಗೆ ಎದುರಾಯ್ತು ಸಮಸ್ಯೆ
ಕೆಲ ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಗಳನ್ನ ನಡೆಸುವ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿವೆ. ಆದರೆ ತರಗತಿ ಸರಿಯಾಗಿ ನಡೆಯದೆ, ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು? ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದಿಂದ ಕೇಳಿ ಬರುತ್ತಿದೆ. ಹೀಗಾಗಿ, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಎಂಬ ಆಗ್ರಹ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಹೋರಾಟದ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗುತ್ತಿದೆ.

ಹೋರಾಟಗಾರರ ಬೇಡಿಕೆ ಏನು?
ಅತಿಥಿ ಉಪನ್ಯಾಸಕರ ಪ್ರಮುಖ ಬೇಡಿಕೆ ಪೈಕಿ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೆ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗಾಗಿ ನೀಡುವ ಸಂಬಳವನ್ನು ಸರ್ಕಾರಿ ನೌಕರರಿಗೆ ನೀಡುವಂತೆ ಪ್ರತಿ ತಿಂಗಳು ನೀಡಬೇಕು. ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡವುದು ಕೂಡ ಪ್ರಮುಖ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಸರ್ಕಾರ ತಕ್ಷಣವೇ ಪರಿಹಾರವನ್ನು ನೀಡಿ, ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂಬ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಹೋರಾಟಗಾರರು ಸಲ್ಲಿಸಿದರು.
ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು ಸೇರಿ ಹಲವಾರು ಬೇಡಿಕೆಗಳನ್ನ ಹೋರಾಟಗಾರರು ಸಲ್ಲಿಸಿದ್ದಾರೆ. ಸರ್ಕಾರಿ ನೌಕರರಿಗೆ ನೀಡುವ ರೀತಿಯೇ ಪ್ರತಿ ತಿಂಗಳು ಸಂಬಳ ನೀಡಬೇಕು. ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ, ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆ ಭರ್ತಿ ಮಾಡೋಕೆ ನೇಮಕಾತಿ ಪ್ರಕ್ರಿಯೆಯ ಆರಂಭಿಸಬೇಕು ಎಂದು ಈಗ ಆಗ್ರಹಿಸಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications