‘ಮಠಾಧೀಶರು, ಮೌಲ್ವಿಗಳು, ಪಾದ್ರಿಗಳು ರಾಜಕಾರಣ ಮಾಡಬಾರದು’ - ಹಿಂಗೆ ಹೇಳಿದ್ದು ಯಾರು?
ಒಂದು ಕಾಲ ಇತ್ತು, ಧರ್ಮ ಗುರುಗಳು ರಾಜಕೀಯದ ಸಹವಾಸಕ್ಕೆ ಬರುತ್ತಿರಲಿಲ್ಲ. ಆದರೆ ಈಗ ಬೇರೆಯದ್ದೇ ಕಾಲ ಸೃಷ್ಟಿಯಾಗಿದೆ. ಹೀಗಾಗಿ ರಾಜಕೀಯವೂ ಹಾಳಾಗಿ ಹೋಗುತ್ತಿದ್ದು ಭವಿಷ್ಯಕ್ಕೆ ಇದು ಮಾರಕ ಅನ್ನೋ ಆರೋಪ ಪದೇ ಪದೆ ಕೇಳಿಬರುತ್ತದೆ. ಈಗಲೂ ಅಷ್ಟೇ 'ಕಾವಿ' ಪಾಲಿಟಿಕ್ಸ್ ಬಗ್ಗೆ ದೊಡ್ಡ ಚರ್ಚೆ ಶುರುವಾಗಿರುವ ಸಮಯದಲ್ಲಿ 'ಮಠಾಧೀಶರು, ಮೌಲ್ವಿಗಳು, ಪಾದ್ರಿಗಳು ರಾಜಕಾರಣ ಮಾಡಬಾರದು' ಅನ್ನೋ ಆಗ್ರಹ ಕೇಳಿಬಂದಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ, ಸಿಎಂ ಆಗಲಿ ಎಂದು ಇತ್ತೀಚೆಗಷ್ಟೇ ಸ್ವಾಮೀಜಿ ಒಬ್ಬರು ಹೇಳಿಕೆಯ ಕೊಟ್ಟ ಹಿನ್ನೆಲೆ ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ ರಿಯಾಕ್ಷನ್ ಕೊಟ್ಟಿದ್ದಾರೆ. ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ನಿಜಗುಣಾನಂದ ಸ್ವಾಮೀಜಿ, 'ಸ್ವಾಮೀಜಿಗಳು ರಾಜಕೀಯದಿಂದ ಹೊರತಾಗಿರಬೇಕು ಎಂದಿದ್ದಾರೆ. ಹಾಗೇ, ತಮ್ಮ ಮಾತು ಮುಂದುವರಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ ನಿಜಗುಣಾನಂದ ಸ್ವಾಮೀಜಿ ಈಗಿನ ರಾಜಕೀಯ ವ್ಯವಸ್ಥೆ ಬಗ್ಗೆ ಹೇಳಿದ್ದು ಏನು?

ನಮ್ಮದೇನಿದ್ದರೂ ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರದ ವಿಚಾರಧಾರೆ ಮಾತ್ರ ಇರಬೇಕಿದೆ. ಈಗ ಎಲ್ಲ ಸಮುದಾಯ ಸಂಕೀರ್ಣದಿಂದ ಹೊರ ಬಂದಿವೆ. ಮಠಾಧೀಶರು ರಾಜಕಾರಣದಲ್ಲಿ ಇದ್ದಾರೆ ಎಂಬ ವಿಚಾರವು ಒಂದು ಕಡೆ ಆಗಿದ್ರೆ, ಮಾಧ್ಯಮಗಳೂ ರಾಜಕಾರಣದ ವರ್ಗದಲ್ಲಿದೆ. ಅವುಗಳು ಕೂಡ ರಾಜಕಾರಣ ಹೊರತುಪಡಿಸಿ ನಿಂತಿಲ್ಲ ಎಂದು ಗರಂ ಆದ್ರು ನಿಜಗುಣಾನಂದ ಸ್ವಾಮೀಜಿ.
ಮಾಧ್ಯಮಗಳ ಬಗ್ಗೆಯೂ ಗರಂ!
ಒಂದೊಂದು ಚಾನೆಲ್ ಒಬ್ಬೊಬ್ಬ ರಾಜಕಾರಣಿಯನ್ನ ವೈಭವೀಕರಿಸಿದರೆ, ಕೆಲ ಚಾನೆಲ್‌ಗಳು ಕೆಲ ರಾಜಕಾರಣಿಗಳನ್ನು ನಿರಾಕರಿಸುತ್ತವೆ. ಈಗ ಮಾಧ್ಯಮ & ಸ್ವಾಮೀಜಿಗಳ ಇಬ್ಬರ ಪಾತ್ರವೂ ಸೋಲುತ್ತಿದೆ. ಸಮಾಜದಲ್ಲಿ ಎಲ್ಲ ಸಮತೋಲನ ತಪ್ಪಿದೆ ಎಂದು ನಿಜಗುಣಾನಂದ ಸ್ವಾಮೀಜಿ ಇಂದು ಆರೋಪ ಮಾಡಿದ್ದಾರೆ. ಈ ಮೂಲಕ ನಿಜಗುಣಾನಂದ ಸ್ವಾಮೀಜಿ ನೀಡಿದ ಹೇಳಿಕೆ ಹೊಸ ಸಂಚಲನಕ್ಕೂ ಕಾರಣವಾಗಿದೆ. ಹಾಗೇ ತಮ್ಮ ಮಾತು ಮುಂದುವರಿಸಿದ ಸ್ವಾಮಿಜಿ ಹೇಳಿದ್ದೇನು ಗೊತ್ತಾ? ಮುಂದೆ ಓದಿ.
ಧರ್ಮದ ವಿಚಾರ ಬಿಟ್ಟು..
ಮಠಾಧೀಶರು ರಾಜಕಾರಣದಲ್ಲಿ ಬರಬಾರದು ಎನ್ನುವುದು ಸತ್ಯ. ಧರ್ಮ, ರಾಜಕಾರಣದಲ್ಲಿ ಪ್ರವೇಶ ಮಾಡಬಾರದು. ಕೇವಲ ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ & ಪಾದ್ರಿ ಕೂಡ ರಾಜಕಾರಣದಲ್ಲಿ ಪ್ರವೇಶ ಆಗಬಾರದು. ಯಾವ ಧರ್ಮದ ನೇತಾರ ಕೂಡ ರಾಜಕಾರಣ ಪ್ರವೇಶ ಮಾಡಬಾರದು. ರಾಜಕಾರಣಿಗಳಿಗೆ ಸ್ವಾಮೀಜಿಗಳು ಬುದ್ಧಿಯ ಹೇಳಬಹುದು ಹಾಗೂ ಮಾರ್ಗದರ್ಶನ ಮಾಡಬಹುದು.

ಒಬ್ಬ ಸ್ವಾಮೀಜಿನ ಬಳಸಿಕೊಳ್ಳುವಾಗ, ರಾಜಕಾರಣಿಗಳು ಎಚ್ಚರಿಕೆಯಿಂದ ಇರಲಿ. ಧಾರ್ಮಿಕ ಕಾರ್ಯಕ್ಕೆ ಮಾತ್ರ ಬಳಸಿಕೊಳ್ಳಲಿ. ರಾಜಕಾರಣಿಗಳು ಸ್ವಾಮೀಜಿಗಳನ್ನ ಬೇರೆ ಯಾವ್ದೆ ಕೆಲಸಕ್ಕೆ ಬಳಸುವಾಗ ಸ್ವಾಮೀಜಿಗಳೂ ಎಚ್ಚರಿಕೆಯಿಂದ ಇರಬೇಕಿದೆ ಎಂದು ಸಲಹೆ ನೀಡಿದರು. ಹೀಗೆ ಧಾರ್ಮಿಕ ಮುಖಂಡರು ಮತ್ತು ಸ್ವಾಮೀಜಿಗಳು ರಾಜಕೀಯದಿಂದ ದೂರ ಇರಬೇಕು ಎಂಬ ಸಲಹೆಯನ್ನ ನಿಜಗುಣಾನಂದ ಸ್ವಾಮೀಜಿ ನೀಡಿದ್ದಾರೆ.
ಅನುದಾನ ಏಕೆ ಕೊಡಬೇಕಂತೆ ಗೊತ್ತಾ?
ಮಠಗಳಿಗೆ ಅನುದಾನ ಬಿಡುಗಡೆ ಮಾಡುವ ವಿಚಾರ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಪೂರ್ವದಲ್ಲಿ ಪ್ರಭು ಪರಂಪರೆ ಇತ್ತು. ಆಗ ರಾಜರು ಎಲ್ಲರನ್ನ ಸಲಹುತ್ತಿದ್ದರು. ಮಠಗಳಲ್ಲಿ ಶೈಕ್ಷಣಿಕ ಸಂಸ್ಥೆ, ಉಚಿತ ಪ್ರಸಾದ ನಿಲಯ, ಅನಾಥ ಮಕ್ಕಳು ಇರುತ್ತಾರೆ. ಮತ್ತು ಸಾವಿರಾರು ಪುಸ್ತಕ ಪ್ರಕಟಿಸಬೇಕಾಗಿ ಬರುತ್ತದೆ. ರಾಜಾಶ್ರಯ ಕಳೆದುಕೊಂಡ ಸಂಗೀತಗಾರರಿಗೆ ಮಠಗಳೇ ಆಶ್ರಯ ಆಗಿರುತ್ತವೆ. ಅನೇಕ ಜನರಿಗೆ ಮಠಗಳು ಅವಕಾಶ ಕಲ್ಪಿಸಿಕೊಡಬೇಕಿರುತ್ತೆ.
ಮಠಗಳಿಗೆ ಬರುವ ಅನುದಾನ ಪ್ರಜಾಪ್ರಭುತ್ವದ ತೆರಿಗೆ ಹಣ ಆಗಿರುತ್ತೆ. ಆದರೂ ಸಹ, ಮಠದ ಸೇವೆ ಸಂಪೂರ್ಣ ಪ್ರಜೆಗಳಿಗೆ ಸಲ್ಲುತ್ತದೆ. ಹೀಗಾಗಿ ಸರ್ಕಾರ ಅನುದಾನ ಕೊಡಬೇಕಾಗಿದೆ ಅಂತ ಇದೇ ವೇಳೆ ಪ್ರಸ್ತಾಪಿಸಿದರು. ಈ ಮೂಲಕ ರಾಜಕೀಯದಲ್ಲಿ ಸ್ವಾಮೀಜಿಗಳ ಹಸ್ತಕ್ಷೇಪವನ್ನ ಅವರು ವಿರೋಧಿಸಿದ್ದಾರೆ. ಇದಕ್ಕೆ ಬೇರೆ, ಬೇರೆ ಮಠಗಳ ಸ್ವಾಮೀಜಿಗಳು ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications