ರಾಜ್ಯದಲ್ಲಿ 3.65 ಲಕ್ಷ ಕಾರ್ಡ್‌ಗಳ ಬಿಪಿಎಲ್‌ ಕಾರ್ಡ್‌ ರದ್ದು ನಿರ್ಧಾರ ಯಾಕೆ? ಸ್ಫೋಟಕ ಮಾಹಿತಿಯೊಂದು ಬಹಿರಂಗ

BPL Ration Card: ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳಿಗೆ ಕಡಿವಾಣ ಹಾಕುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ 3.65 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಇನ್ನೂ ತುಂಬಾ ಜನ ಅನರ್ಹರು ಬಿಪಿಎಲ್‌ ಪಡಿತರ ಚೀಟಿಗಳನ್ನು ಹೊಂದಿದ್ದು, ಅವುಗಳನ್ನು ಕೂಡ ರದ್ದುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಆಹಾರ ಇಲಾಖೆಗೆ ಸೂಚಿಸಿದ್ದಾರೆ. ಯಾಕೆ ರದ್ದುಪಡಿಸಲಾಗುತ್ತದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಚ್ಚಿಟ್ಟಿದ್ದಾರೆ.

ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಪಡಿತರ ಸಿಗಲಿ ಎನ್ನುವ ಉದ್ದೇಶದಿಂದ ಈ ಮಹತ್ವದ ಕಾರ್ಯಕ್ಕೆ ಕೈಹಾಕಿದೆ. ಈಗಾಗಲೇ ಕೆಲ ಬಿಪಿಎಲ್‌ ಕಾರ್ಡ್‌ಗಳು ಪರಿಶೀಲನೆ ಹಂತದಲ್ಲಿದ್ದರೆ, ಮತ್ತೊಂದೆಡೆ ಅರ್ಹರು ಎಂದು ಖಚಿತಪಡಿಸಿಕೊಂಡು ಇನ್ನೂ ಕೆಲವು ಕಾರ್ಡ್‌ಗಳನ್ನು ರದ್ದುಪಡಿಸಿದೆ. ಇದೀಗ ಇದಕ್ಕೂ ಕೂಡ ರಾಜಕೀಯ ಬಣ್ಣ ಹಚ್ಚುವ ಕೆಲಸ ಮುಂದುವರೆದಿದೆ.

Explosive Information Revealed on Cancellation of 3 65 Lakh BPL Ration Cards in State

ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿನವರಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಅನರ್ಹರು ಕೂಡ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಲಿತ್ತು. ಇದೀಗ ರಾಜ್ಯ ಸರ್ಕಾರ ಇಂತಹವರಿಗೆ ಕಡಿವಾಣ ಹಾಕಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಇನ್ನು ಈ ಬಗ್ಗೆ ಇದೀಗ ಬಿ.ವೈ.ವಿಜಯೇಂದ್ರ ಅವರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದೇಕೆ ಎನ್ನುವ ಸ್ಫೊಟಕ ಮಾಹಿತಿ ಹಂಚಿಕೊಂಡಿದ್ದಾರೆ.

ಬಿವೈ ವಿಜಯೇಂದ್ರ ಸ್ಫೋಟಕ ಮಾಹಿತಿ: ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ, ಆದರೆ, ಅರ್ಹರನ್ನು ಅನರ್ಹತೆಯ ಹೆಸರಿನಲ್ಲಿ ಆದಾಯದ ಅಳತೆಗೋಲನ್ನು ಹಿಡಿದುಕೊಂಡು ಬಿಪಿಎಲ್ ಕಾರ್ಡ್ ಸೌಲಭ್ಯದಿಂದ ವಂಚಿತರನ್ನಾಗಿಸುವುದು ಅತ್ಯಂತ ಖಂಡನೀಯ. ರಾಜ್ಯದ ಆರ್ಥಿಕ ಸ್ಥಿತಿ ದಿಕ್ಕು ತಪ್ಪಿದ್ದು, ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯದ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌.

ಅದರ ಮುಂದುವರಿದ ಭಾಗವಾಗಿ ಬಿಪಿಎಲ್ ಕಾರ್ಡುದಾರದ ಮೇಲೆ ಕೆಂಗಣ್ಣು ಬೀರಿ 3.65 ಲಕ್ಷಕ್ಕೂ ಹೆಚ್ಚು ಕಾರ್ಡುದಾರರ ಸೌಲಭ್ಯವನ್ನು ರದ್ದುಪಡಿಸಿದೆ. ಈ ಅನಿರೀಕ್ಷಿತ ಬೆಳವಣಿಗೆ ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಪತ್ತೆ ಹಚ್ಚುವುದಲ್ಲ, ಬದಲಾಗಿ ಬಡತನದ ರೇಖೆಗಿಂತ ಕೆಳಗಿರುವ ಕಡು ಬಡವರ ಸೌಲಭ್ಯವನ್ನು ಕಸಿದು ಅನ್ನದ ದಾರಿಗೆ ಕಲ್ಲು ಹಾಕುವ ನಿರ್ದಯ ನಿರ್ಣಯವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಅನರ್ಹರನ್ನು ತಡೆಯುವ ಹೆಸರಿನಲ್ಲಿ ಬಿಪಿಎಲ್ ಕಾರ್ಡುದಾರರನ್ನು ಇಳಿಮುಖಗೊಳಿಸಿ ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ದುರುದ್ದೇಶ ಈ ಬಿಪಿಎಲ್ ಕಾರ್ಡುದಾರರ ರದ್ದತಿಯ ಹಿಂದೆ ಅಡಗಿದೆ ಎಂಬುದು ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಅರ್ಥವಾಗುತ್ತಿದೆ ಎಂದು ಹೇಳಿದರು. ಹೀಗೆ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಸರಿದೂಗಿಸುವ ದೃಷ್ಟಿಯಿಂದ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲು ನಿರ್ಧರಿಸಿದೆ ಎಂದು ಬಿಪಿಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆರೋಪ ಮಾಡಿದ್ದಾರೆ.

ರಾಜ್ಯಸ ಸರ್ಕಾರದ ಪ್ರಕಾರ, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಗಿಂತ ಹೆಚ್ಚಿರುವವರು, ವೈಟ್‌ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರು, ಆದಾಯ ತೆರಿಗೆ ಪಾವತಿಸುವವರು, 3 ಹೆಕ್ಟೇರ್‌ಗೂ ಅಧಿಕ ಭೂಮಿ ಹೊಂದಿರುವವರು, ನಗರ ಪ್ರದೇಶಗಳಲ್ಲಿ1,000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು, ಸರ್ಕಾರಿ, ದೊಡ್ಡ ಕಂಪನಿಗಳಲ್ಲಿ ಉದ್ಯೋಗದಲ್ಲಿರುವವರು ಬಿಪಿಎಲ್‌ ಕಾರ್ಡ್‌ಗಳನ್ನು ಪಡೆಯಲು ಅನರ್ಹರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+