ರೈತರಿಗೆ ಗುಡ್ ನ್ಯೂಸ್; ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಆಗಸ್ಟ್ 02: ಕೇಂದ್ರ ಸರ್ಕಾರದ ಹವಾಮಾನ ಆಧರಿತ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು, ರಾಜ್ಯದ ರೈತರಿಗೆ ಈ ಅಬ್ಬರದ ಮಳೆಯ ನಡುವೆ ಗುಡ್ ನ್ಯೂಸ್ ಸಿಕ್ಕಿದೆ.
ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಆನ್ಸೆನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾದ ಬಳಿಕ ಕೆಲ ಕಾರಣಕ್ಕೆ ರೈತರಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ವಿಷಯವನ್ನು ಸಂಸತ್ತಿನಲ್ಲಿ ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನಕ್ಕೆ ತಂದಿದ್ದು, ನನ್ನ ಈ ಮನವಿಗೆ ಸ್ಪಂದಿಸಿ ಅವರು ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ವಿಷಯ ತಿಳಿಸಿದ್ದು, ರಾಜ್ಯದ ರೈತರು ಈ ಯೋಜನೆಯ ಸದುಪಯೋಗ ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ.

ಇನ್ನೂ ಈ ಕುರಿತು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ರೈತಾಪಿ ವರ್ಗ ಕೇಂದ್ರ ಸರ್ಕಾರದ ಹವಾಮಾನ ಆಧಾರಿತ ಬೆಳೆ ವಿಮೆಯ ಸದುಪಯೋಗ ಪಡೆಯುತ್ತಿದ್ದು ಪ್ರಸ್ತುತ ಆನ್ಲೈನ್ ಅರ್ಜಿ ಪ್ರಾರಂಭವಾದ ಹಿನ್ನೆಲೆಯಲ್ಲಿ ಹಲವಾರು ತೊಡಕುಗಳಿಂದ ರೈತರಿಗೆ ದಾಖಲಾತಿಗಳೊಂದಿಗೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ.
ಆದ್ದರಿಂದ ಜುಲೈ ತಿಂಗಳ ಅಂತ್ಯದಲ್ಲಿ ಮುಗಿಯುವ ಬೆಳೆ ವಿಮೆ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಿ ರೈತಾಪಿ ವರ್ಗಕ್ಕೆ ಸಹಾಯ ಮಾಡಬೇಕೆಂದು ಗೌರವಾನ್ವಿತ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ಅವರಲ್ಲಿ ಸಂಸತ್ತಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದೆ. ಇನ್ನು, ಮನವಿಗೆ ಸ್ಪಂದಿಸಿದ ಸಚಿವರಿಗೆ ಧನ್ಯವಾದವನ್ನ ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.












Click it and Unblock the Notifications