ರಾಜ್ಯದ ಪದವಿ, ನರ್ಸಿಂಗ್, ಪಿಜಿ ವಿದ್ಯಾರ್ಥಿಗಳಿಗೂ ಟ್ವಿನ್ನಿಂಗ್ ಯೋಜನೆ ವಿಸ್ತರಣೆ
ಬೆಂಗಳೂರು, ಮಾರ್ಚ್ 16: ಸದ್ಯಕ್ಕೆ ರಾಜ್ಯದ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇರುವ ಟ್ವಿನ್ನಿಂಗ್ ಡಿಗ್ರಿ ಯೋಜನೆಯನ್ನು ಪದವಿ, ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಅಮೆರಿಕದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಬುಧವಾರ ಪ್ರಾಥಮಿಕ ಸುತ್ತಿನ ಚರ್ಚೆ ನಡೆಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಅಮೆರಿಕದ ಪೆನ್ಸಿಲ್ವೇನಿಯಾದ ರಾಯಭಾರಿ ಕನ್ನಿಕಾ ಚೌಧರಿ ಮತ್ತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ ಇದ್ದರು.
"ರಾಜ್ಯದ ಡಿಪ್ಲೋಮಾ ವಿದ್ಯಾರ್ಥಿಗಳು ಅಮೆರಿಕದ ಮಾಂಟ್ಗೊಮೆರಿ ಕೌಂಟಿ ಕಮ್ಯುನಿಟಿ ಕಾಲೇಜಿನಲ್ಲಿ ಓದುವ ಸಂಬಂಧ ಮಾಡಿಕೊಂಡಿದ್ದ ಒಪ್ಪಂದ ಈಗಾಗಲೇ ಅನುಷ್ಠಾನಕ್ಕೆ ಬಂದಿದೆ. ಇದನ್ನು ವಿಸ್ತರಿಸಬೇಕಾದ ಅಗತ್ಯವಿದ್ದು, ಇದು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ಪೂರಕವಾಗಿರಲಿದೆ," ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದರು.

"ಉದ್ದೇಶಿತ ಗುರಿಯನ್ನು ಸಾಧಿಸಬೇಕೆಂದರೆ ಅಮೆರಿಕದ ಅಥೆನ್ಸ್ ವಿಶ್ವವಿದ್ಯಾಲಯ, ಪೆನ್ಸಿಲ್ವೇನಿಯಾದ ಯಾರ್ಕ್ ಕಾಲೇಜ್, ಹ್ಯಾರಿಸ್ ಬರ್ಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಇಂಡಿಯಾನಾ ಯೂನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ, ಹ್ಯೂಸನ್ ಯೂನಿವರ್ಸಿಟಿ, ಥಿಯಲ್ ಕಾಲೇಜು ಮತ್ತು ಅಲ್ವರ್ನಿಯಾ ಹಾಗೂ ಮಿಸರಿಕಾರ್ಡಿಯಾ ವಿ.ವಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು," ಸೂಕ್ತ ಎಂದು ಕನ್ನಿಕಾ ಸಭೆಗೆ ತಿಳಿಸಿದರು.
"ಟ್ವಿನ್ನಿಂಗ್ ಕಾರ್ಯಕ್ರಮದಡಿ ನಮ್ಮ ವಿದ್ಯಾರ್ಥಿಗಳನ್ನು ಪದವಿ/ ಸ್ನಾತಕೋತ್ತರ ಪದವಿಯ ನಿರ್ದಿಷ್ಟ ವರ್ಷಗಳಲ್ಲಿ ಅಮೆರಿಕದ ವಿ.ವಿಗಳಿಗೇ ನೇರವಾಗಿ ಕಳುಹಿಸಿ ಕೊಡಲಾಗುವುದು. ವೇತನಸಹಿತ ಇಂಟರ್ನ್‌ಶಿಪ್ ವ್ಯವಸ್ಥೆ ಇದರ ಭಾಗವಾಗಿರಲಿದೆ. ಅಲ್ಲದೆ, ಇಷ್ಟವಿರುವವರು ಅಮೆರಿಕದಲ್ಲೇ ಉದ್ಯೋಗಿಗಳಾಗಿ ನೆಲೆಯೂರಲು ಅವಕಾಶವಿರಲಿದೆ," ಎಂದು ಉನ್ನತ ಸಚಿವರು ವಿವರಿಸಿದರು.
ಒಡಂಬಡಿಕೆಗಳು ಜಾರಿಗೆ ಬಂದರೆ 6 ವರ್ಷಗಳ ಟ್ವಿನ್ನಿಂಗ್ ಡಿಗ್ರಿ, 5 ವರ್ಷಗಳ ಇಂಟಿಗ್ರೇಟೆಡ್ ಸ್ನಾತಕೋತ್ತರ ಪದವಿ, 4 ವರ್ಷಗಳ ಟ್ವಿನ್ನಿಂಗ್ ಸ್ನಾತಕೋತ್ತರ ಪದವಿ, ಎಂ.ಎಸ್. ನರ್ಸಿಂಗ್ (ಇಂಟಿಗ್ರೇಟೆಡ್) ಮತ್ತು ಎಂ.ಎಸ್. ಬಯೋಕೆಮಿಸ್ಟ್ರಿ (ಇಂಟಿಗ್ರೇಟೆಡ್) ಪದವಿ ಹೊಂದಲು ಅವಕಾಶ ಸಿಗಲಿವೆ ಎಂದು ಅವರು ಮಾಹಿತಿ ನೀಡಿದರು.
ಅಲ್ಲದೆ, "ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ಮತ್ತು ಆರೋಗ್ಯ ವ್ಯವಸ್ಥಾಪನಾ ಪದವಿಗಳಿಗೆ ತುಂಬಾ ಬೇಡಿಕೆ ಇದೆ. ಇದನ್ನು ಗುಣಮಟ್ಟದೊಂದಿಗೆ ಕಲಿಸಬೇಕಾದ್ದು ಅಗತ್ಯವಿದೆ. ಇಂತಹ ಕೋರ್ಸ್‌ಗಳಿಗೆ ಆಗುವ ವೆಚ್ಚ ಮತ್ತು ಅದರ ಸ್ವರೂಪ ಹೇಗಿರಬೇಕು. ಇದನ್ನು ಹೇಗೆ ಜಾರಿಗೊಳಿಸಬೇಕು ಎನ್ನುವುದನ್ನು ಅಧಿಕಾರಿಗಳು ಕೆಲವೇ ದಿನಗಳಲ್ಲಿ ಆಖೈರುಗೊಳಿಸಬೇಕು ಎಂದು ಹೇಳಿದರು.
ಇಂತಹ ಒಡಂಬಡಿಕೆಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉನ್ನತ ಅಧ್ಯಯನಕ್ಕೆ ಅವಕಾಶ ಸಿಗಲಿದೆ. ಆಯ್ಕೆಯಾಗುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ತಗಲುವ ವೆಚ್ಚವನ್ನು ಸರಕಾರವೇ ಸಂಪೂರ್ಣವಾಗಿ ಭರಿಸಲು ಅವಕಾಶ ಇದೆ. ಅಗತ್ಯ ಬಿದ್ದರೆ ಬ್ಯಾಂಕ್ ಸಾಲಕ್ಕೆ ಕೂಡ ವ್ಯವಸ್ಥೆ ಮಾಡಲಾಗುವುದು ಎಂದರು.
ಹ್ಯಾರಿಸ್ಬರ್ಗ್ ವಿವಿ ಜತೆ ಒಡಂಬಡಿಕೆಗೆ ಬೆಂಗಳೂರು ನಗರ ವಿವಿ ಆಸಕ್ತಿ
ಇಂಗ್ಲಿಷ್ ಕಲಿಕೆ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿ ಇಂಟಿಗ್ರೇಟೆಡ್ ಪದವಿಗೆ ಅವಕಾಶ ಕಲ್ಪಿಸುವ ಮಹತ್ವಾಕಾಂಕ್ಷೆಯುಳ್ಳ ಒಡಂಬಡಿಕೆ ಮಾಡಿಕೊಳ್ಳುವ ಸಂಬಂಧ ಬೆಂಗಳೂರು ನಗರ ವಿಶ್ವವಿದ್ಯಾಲಯ ಮತ್ತು ಅಮೆರಿಕದ ಹ್ಯಾರಿಸ್ ಬರ್ಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಪರಸ್ಪರ ಪತ್ರ ಮತ್ತು ದಾಖಲಾತಿಗಳನ್ನು ಬುಧವಾರ ವಿನಿಮಯ ಮಾಡಿಕೊಂಡಿವೆ.
ಬೆಂಗಳೂರು ನಗರ ವಿವಿ ಪರವಾಗಿ ಕುಲಪತಿ ಡಾ. ಲಿಂಗರಾಜ ಗಾಂಧಿ ಮತ್ತು ಹ್ಯಾರಿಸ್ಬರ್ಗ್ ವಿ.ವಿ ಪರವಾಗಿ ಕನ್ನಿಕಾ ಚೌಧರಿ ಆವರು ಈ ದಾಖಲಾತಿಗಳನ್ನು ಪರಸ್ಪರ ಹಸ್ತಾಂತರಿಸಿಕೊಂಡರು.
ಈ ಒಪ್ಪಂದ ಅಂತಿಮರೂಪ ಪಡೆದುಕೊಂಡ ನಂತರ ಬೆಂಗಳೂರು ನಗರ ವಿ.ವಿ. ವಿದ್ಯಾರ್ಥಿಗಳು ಹ್ಯಾರಿಸ್ಬರ್ಗ್ ವಿ.ವಿಯಲ್ಲಿ ನಡೆಯುವ ಇಂಗ್ಲಿಷ್ ಕಲಿಕಾ ಕಾರ್ಯಕ್ರಮಗಳ ಲಾಭವನ್ನು ಪಡೆಯಬಹುದು. ಜತೆಗೆ, ಅಮೆರಿಕದ ಶೈಕ್ಷಣಿಕ ಕಾರ್ಯಕ್ರಮಗಳ ಭಾಗವಾಗಬಹುದು ಅಥವಾ ಅವುಗಳಿಗೆ ಹಾಜರಾಗಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೆ, ವಿದ್ಯಾರ್ಥಿ ವಿನಿಮಯ ಉಪಕ್ರಮದಡಿ ಇಲ್ಲಿನ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳಿ ಕಂಪ್ಯೂಟರ್ ವಿಜ್ಞಾನ ವಿಷಯದಲ್ಲಿ ಇಂಟಿಗ್ರೇಟೆಡ್ ಡಿಗ್ರಿ ಅಧ್ಯಯನ ಮಾಡಬಹುದು ಎಂದು ಹೇಳಲಾಗಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications