ಲೋಕಸಮರಕ್ಕೆ ಕಮಲ-ದಳ ದೋಸ್ತಿ: ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್‌ ನಲ್ಲಿ ರಣತಂತ್ರ- ಮಕ್ಕಳನ್ನ ಕಣಕ್ಕಿಳಿಸಲು ಮಂತ್ರಿಗಳು ಪ್ಲಾನ್‌

ಬೆಂಗಳೂರು: 2024 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಕರ್ನಾಟಕದಲ್ಲಿ ಸಂಭವನೀಯ ಅಭ್ಯರ್ಥಿಗಳನ್ನ ಒಟ್ಟುಗೂಡಿಸಲು ಕಾಂಗ್ರೆಸ್ ಹೆಣಗಾಡುತ್ತಿದೆ. ಆಕಾಂಕ್ಷಿಗಳ ಕುರಿತು ಸಚಿವರನ್ನ ವೀಕ್ಷಕರನ್ನ ನೇಮಿಸಿದ್ದು, ಇನ್ನೂ ಸಚಿವರು ಆಕಾಂಕ್ಷಿಗಳ ಪಟ್ಟಿಯನ್ನ ಅಂತಿಮಗೊಳಿಸಿಲ್ಲ.

ಕುತೂಹಲಕಾರಿ ಸಂಗತಿ ಎಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಕೆಲ ಸಚಿವರನ್ನು ಚುನಾವಣೆಗೆ ನಿಲ್ಲಿಸುವ ಬಗ್ಗೆ ಕಾಂಗ್ರೆಸ್‌ ಯೋಚನೆ ಮಾಡುತ್ತಿದೆ. ಅದರಲ್ಲೂ ಹೆಚ್ಚಿನ ವರ್ಚಸ್ಸು, ಜನಬಳಕೆ ಇರುವ ಸಚಿವರನ್ನು ಲೋಕ ಕದನ ಕಣಕ್ಕೆ ಇಳಿಸುವ ಚಿಂತನೆಯಲ್ಲಿ ಕಾಂಗ್ರೆಸ್‌ ನಾಯಕರು ಇದ್ದಾರೆ. ಆದರೆ, ಬಹುಪಾಲು ಕ್ಷೇತ್ರಗಳಲ್ಲಿ, ಮಂತ್ರಿಗಳ ಕುಟುಂಬ ಸದಸ್ಯರು ಹೆಸರುಗಳು ಮುಂಚೂಣಿಗೆ ಬಂದಿವೆ ಎಂದು ಮೂಲಗಳು ತಿಳಿಸಿವೆ.

Faced with BJP-JDS pact, Congress struggles to draw up list of probables in Karnataka

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆ ತವರು ನೆಲ ಕಲಬುರ್ಗಿಯಲ್ಲಿ ಈ ಹಿಂದೆ ಸೋಲು ಕಂಡಿರುವ ಕಾಂಗ್ರೆಸ್‌ ಈ ಭಾರೀ ಭರ್ಜರಿ ರಣತಂತ್ರ ರೂಪಿಸಿದೆ. ಮಂತ್ರಿಗಳ ಕುಟುಂಬ ಸದಸ್ಯರನ್ನು ಕಣಕ್ಕಿಳಿಸುವುದು ಇದೀಗ ಪ್ಲಾನ್‌ ಹಾಕಿಕೊಂಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ.

ಬೀದರ್ ಲೋಕಸಭಾ ಕ್ಷೇತ್ರಕ್ಕೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಅವರ ಹೆಸರು ಕೇಳಿ ಬಂದಿದೆ. ಉತ್ತರ ಕನ್ನಡದಲ್ಲಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ಪುತ್ರ ಪ್ರಶಾಂತ್ ಹೆಸರು ಚರ್ಚೆಯಲ್ಲಿದೆ. ಇನ್ನೂ ತುಮಾಕೂರಿನಲ್ಲಿ ಮಾಜಿ ಸಚಿವ ಟಿ ಬಿ ಜಯಚಂದ್ರ ಅವರ ಮಗ ಸಂಜಯ್ ಅವರ ಹೆಸರು ಕ್ಷೇತ್ರದಲ್ಲಿ ಕೇಳಿ ಬಂದಿದೆ. ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಿರಿಯ ಸಹೋದರ ವಿಜಯ್ ಅವರ ಹೆಸರು ಕೇಳಿ ಬಂದಿದೆ.

Faced with BJP-JDS pact, Congress struggles to draw up list of probables in Karnataka

ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಂಬಂಧಿ ರಜತ್ ಉಳ್ಳಾಗಡ್ಡಿಮಠ ಅವರ ಹೆಸರು ಮುಂಚೂಣಿಯಲ್ಲಿದೆ. ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ತುಮಕುರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಗೆದ್ದರೆ, ಅವರು ತಮ್ಮ ಮಗ ರವೀಂದ್ರನನ್ನು ಮಧುಗಿರಿ ಅಸೆಂಬ್ಲಿ ಕ್ಷೇತ್ರದಿಂದ ಕಣಕ್ಕಿಳಿಸುವ ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ. ಇನ್ನೂ ಮೈಸೂರು ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತಿಂದ್ರ ಅವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯ ಅವರು ಪುತ್ರನ ಗೆಲುವನ್ನ ಸವಾಲಾಗಿ ತೆಗೆದುಕೊಂಡು ತನ್ನ ಮಗನನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಸುರೇಶ್‌ ವಿರುದ್ಧ ಅಲೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಹೀಗಾಗಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಬಿಜೆಪಿಯಲ್ಲಿ ಸೂಕ್ತ ಅಭ್ಯರ್ಥಿಯ ಕೊರತೆ ಉಂಟಾಗಿದ್ದು, ಒಕ್ಕಲಿಗ ನಾಯಕರಾದ ಡಿ ಕೆ ಸುರೇಶ್‌ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+