• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಗಡಿಯಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ: ಬೊಮ್ಮಾಯಿಗೆ ಕರೆ ಮಾಡಿ ಫಡ್ನವೀಸ್‌ ಅಸಮಾಧಾನ

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 6: ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ತಾರಕಕ್ಕೇ ಏರಿದೆ. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್‌ ಪ್ಲೇಟ್‌ ಹೊಂದಿಗೆ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಕನ್ನಡ ಪರ ಹೋರಾಟಗಾರರು ವಾಹನಗಳ ಗಾಜುಗಳನ್ನು ಒಡೆದಿದ್ದಾರೆ.

ಈ ಘಟನೆಗೆ ಸಂಬಂಧಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಾತನಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು ಕರ್ನಾಟಕ ಸಿಎಂ ಜೊತೆ ಮಾತನಾಡಿ, ಬೆಳಗಾವಿ ಸಮೀಪದ ಹಿರೇಬಾಗವಾಡಿಯಲ್ಲಿ ನಡೆದ ಘಟನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರದಿಂದ ಬರುವ ವಾಹನಗಳಿಗೆ ರಕ್ಷಣೆ ನೀಡಲಾಗುವುದು ಎಂದು ಫಡ್ನವೀಸ್ ಅವರಿಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದರು' ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಬೆಳಗಾವಿ, ಚಿಕ್ಕೊಡಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ

ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಬೆಳಗಾವಿ ಹಾಗೂ ಚಿಕ್ಕೊಡಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್‌ ಪಾಟೀಲ್‌ ಹಾಗೂ ಶಂಭುರಾಜ್ ದೇಸಾಯಿ ಅವರು ತಮ್ಮ ಬೆಳಗಾವಿ ಭೇಟಿಯನ್ನು ಮುಂದೂಡಿದ್ದಾರೆ.

Fadnavis spoke with Bommai over incidents at Hirebagwadi near Belagavi

'ಗಡಿ ವಿವಾದ ನ್ಯಾಯಾಲಯದಲ್ಲಿದೆ. ಮಹಾರಾಷ್ಟ್ರ ಸರ್ಕಾರ ನ್ಯಾಯಯುತವಾಗಿಯೇ ಗಡಿ ವಿವಾದವನ್ನು ಇತ್ಯರ್ಥಗೊಳಿಸಲಿ. ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವುದು ಬೇಡ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Maharashtra Dy CM Fadnavis spoke with Karnataka CM & expressed strong displeasure over incidents at Hirebagwadi near Belagavi. CM Bommai said that strict action will be taken against culprits,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X