ಅಧಿಕಾರಕ್ಕೆ ಬಂದ ಕೂಡಲೇ ಡಿಕೆ ಸಹೋದರರಿಂದ ದ್ವೇಷ ರಾಜಕಾರಣ: ಮುನಿರತ್ನ
ಬೆಂಗಳೂರು, ಜೂನ್ 17: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಡಿ.ಕೆ ಸಹೋದರರು ದ್ವೇಷ ರಾಜಕಾರಣವನ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿದ ಆರೋಪದ ಮೇಲೆ ರಾಜ ರಾಜೇಶ್ವರಿ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ಸೇರಿದಂತೆ 11 ಮಂದಿಯನ್ನು ಅಮಾನತು ಮಾಡಲಾಗಿದೆ.

ಈ ವಿಚಾರವಾಗಿ ಮಾಜಿ ಸಚಿವ ಮುನಿರತ್ನ ಮಾತನಾಡಿ, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಶೇಷವಾಗಿ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾತನಾಡಿದ್ದಾರೆ.
ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ನಾಯಕರ ಸೇಡಿನ ರಾಜಕಾರಣವಲ್ಲದೆ ಬೇರೇನೂ ಅಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಬಿಬಿಎಂಪಿ ಅಧಿಕಾರಿಗಳ ಅಮಾನತು ಹಾಗೂ ನನ್ನ ಹೆಸರನ್ನು ವಿವಾದಕ್ಕೆ ಎಳೆದು ತರುತ್ತಿರುವುದು ಆರಂಭವಷ್ಟೇ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ದ್ವೇಷದ ರಾಜಕೀಯ ನಡೆಯಲಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಆರೋಪಿಸಿದರು.
ಇನ್ನೂ ಈ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸುವ ಅಥವಾ ಬಿಜೆಪಿ ಹೈಕಮಾಂಡ್‌ಗೆ ವಿಷಯ ಪ್ರಸ್ತಾಪಿಸುವ ಕುರಿತು ಮಾತನಾಡಿದ ಅವರು, ಇನ್ನೂ ಸರ್ಕಾರದ ಮುಂದಿನ ಬೆಳವಣಿಗೆಯನ್ನು ಕಾದು ನೋಡುತ್ತೇನೆ ಎಂದು ತಿಳಿಸಿದ್ದಾರೆ.












Click it and Unblock the Notifications