ನಕಲಿ ಜಾತಿ ಪ್ರಮಾಣ ಪತ್ರ: ಮಹಿಳೆಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಅಕ್ಟೋಬರ್ 11; ಹಿಂದುಳಿದ ವರ್ಗಗಳ ಮೊಗೇರ್ ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿ ಹೆಸರಿನಲ್ಲಿ ಪ್ರಮಾಣ ಪತ್ರ ಪಡೆದು ಮೀಸಲು ಸೌಲಭ್ಯ ಪಡೆದು ಸಹಾಯಕ ಕನ್ನಡ ಶಿಕ್ಷಕರ ಹುದ್ದೆ ಪಡೆಯಲು ಮುಂದಾಗಿದ್ದ ಶಿಕ್ಷಕಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.

ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬಂಗೆರೆಯ ಸರಸ್ವತಿ ಎಂಬುವರು ಬಂಧನದ ಭೀತಿ ಎದುರಿಸುವಂತಾಗಿದೆ. ಅವರು ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ. ಎಂ. ಖಾಜಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Fake Caste Certificate Case High Court Refused To Grant Bail For Woman

ಹೈಕೋರ್ಟ್ ಏನು ಹೇಳಿದೆ?; ದಾಖಲೆಗಳನ್ನು ಪರಿಶೀಲಿಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿದ್ದು, ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಸಲ್ಲಿಸುವ ಮೂಲಕ ತಪ್ಪೆಸಗಿರುವ ಅಂಶ ಮೇಲ್ನೋಟಕ್ಕೆ ಸಾಬೀತಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಲಾಗದು ಎಂದು ತಿಳಿಸಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, ಹಿಂದೂ ಮೊಗೇರ್ ಸಮುದಾಯ ಪರಿಶಿಷ್ಟ ಜಾತಿಗೆ ಸೇರಿದೆ. ಹೀಗಾಗಿ ಜಾತಿ ಪರಿಶೀಲನಾ ಸಮಿತಿ ನಿರ್ದೇಶನದಂತೆ ನಾಗರಿಕ ಹಕ್ಕು ನಿರ್ದೇಶನಾಲಯ ಸಲ್ಲಿಕೆ ಮಾಡಿರುವ ದೂರು ರದ್ದು ಪಡಿಸಬೇಕು ಎಂದು ಕೋರಿದ್ದರು.

ಸರ್ಕಾರದ ಪರ ವಕೀಲರು ಮೇಲ್ಮವಿ ಅರ್ಜಿದಾರರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಕರ ಹುದ್ದೆ ಪಡೆದುಕೊಳ್ಳದಿದ್ದರೂ, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸುವುದೇ ಅಪರಾಧವಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು. ಜೊತೆಗೆ, ನಿರೀಕ್ಷಣಾ ಜಾಮೀನು ನೀಡಬಾರದು ಎಂದು ನ್ಯಾಯಪೀಠಕ್ಕೆ ಕೋರಿದ್ದರು

ಪ್ರಕರಣದ ಹಿನ್ನೆಲೆ: ಅರ್ಜಿದಾರರು ಮೊಗೇರ್ (ಹಿಂದುಳಿದ ವರ್ಗಗಳು) ಜಾತಿಗೆ ಸೇರಿದ್ದರೂ ಪರಿಶಿಷ್ಟ ಜಾತಿ ಹೆಸರಿನ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಆದರೆ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ಮೇಲ್ಮನವಿದಾರರ ಮೊಗೇರಾ ಜಾತಿಗೆ ಸೇರಿದವರಾಗಿದ್ದು, ಪರಿಶಿಷ್ಟ ಜಾತಿ ಹೆಸರಿನಲ್ಲಿ ತಹಶೀಲ್ದಾರ್ ಕಛೇರಿಗೆ ಸುಳ್ಳು ಮಾಹಿತಿ ನೀಡಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ತಕ್ಷಣ ತಹಶೀಲ್ದಾರ್ ಅವರು ಅರ್ಜಿದಾರರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿದ್ದರು. ಇದಾದ ನಂತರ ಜಿಲ್ಲಾ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಕಾಯಿದೆಯಡಿ ಮಹಿಳೆ ವಿರುದ್ಧ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಮೇಲ್ಮನವಿದಾರರ ವಿರುದ್ಧ ತನಿಖೆ ನಡೆಸಿ ಆರೋಪಪಟ್ಟಿಯನ್ನು ಕಾರವಾರದ 2ನೇ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯದ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.

ಈ ಆದೇಶವನ್ನು ರದ್ದು ಪಡಿಸಬೇಕು ಹಾಗೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿರುವ ದೂರಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿಯಲ್ಲಿ ಕೋರಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+