ನಕಲಿ ಜಾತಿ ಪ್ರಮಾಣಪತ್ರ: ಕೊತ್ತನೂರು ಮಂಜುನಾಥ್ ನಾಮಪತ್ರ ತಿರಸ್ಕೃತ
ಬೆಂಗಳೂರು, ಏಪ್ರಿಲ್ 25: ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಆಧರಿಸಿ ಕೋಲಾರದ ಮುಳುಬಾಗಿಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ನಾಮಪತ್ರ ತಿರಸ್ಕೃತವಾಗಿದೆ.
ಮುಳಬಾಗಿಲು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಶಾಸಕರಾಗಿದ್ದ ಮಂಜುನಾಥ್ ಜಾತಿ ಪ್ರಮಾಣ ಪತ್ರ ನಕಲಿ ಎಂದಿದ್ದ ನ್ಯಾಯಾಲಯ, ಅವರ ಪ್ರಮಾಣಪತ್ರವನ್ನು ರದ್ದುಗೊಳಿಸಿತ್ತು. ಜೊತೆಗೆ ಶಾಸಕತ್ವವನ್ನೂ ಅಸಿಂಧುಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರತಿ ಸಿಕ್ಕ ನಂತರ ಅವರ ನಾಮಪತ್ರದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಚುನಾವಣಾ ಆಯೋಗ ಹೇಳಿತ್ತು.
ಇದೀಗ ಇಂದು ಆದೇಶ ಪ್ರತಿ ಸಿಕ್ಕ ಹಿನ್ನೆಲೆಯಲ್ಲಿ ಚುನಾವನಾ ಆಯೋಗ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕರಿಸಿದೆ.

ಆಗಿದ್ದೇನು?
2013ರ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೆಯಲ್ಲಿ ತಾವು ಬುಡಗ ಜಂಗಮ (ಎಸ್‌ಸಿ) ಜಾತಿಗೆ ಸೇರಿದವರು ಎಂದು ಹೇಳಿ ಮಂಜುನಾಥ್ ಅವರು ಜಾತಿ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು.
ಪಕ್ಷೇತರರಾಗಿ 2013ರಲ್ಲಿ ಸ್ಪರ್ಧಿಸಿದ್ದ ಅವರು 73,146 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಎನ್. ಮುನಿಅಂಜಪ್ಪರನ್ನು ಸುಮಾರು 34 ಸಾವಿರ ಮತಗಳಿಂದ ಭರ್ಜರಿಯಾಗಿ ಸೋಲಿಸಿ ಶಾಸಕರಾಗಿದ್ದರು.
ಆದರೆ ಚುನಾವಣೆಯಲ್ಲಿ ಸೋತ ಎಂ. ಮುನಿಅಂಜಪ್ಪ ಕೋರ್ಟ್ ಮೆಟ್ಟಿಲೇರಿದರು. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಮೀಸಲು ಕ್ಷೇತ್ರದಿಂದ ಮಂಜುನಾಥ್ ಸ್ಪರ್ಧಿಸಿದ್ದಾರೆ ಎಂದು ತಕರಾರು ತೆಗೆದಿದ್ದರು. ಮತ್ತು ಇದಕ್ಕೆ ಬೇಕಾದ ದಾಖಲೆಗಳನ್ನೂ ಅವರು ಸಲ್ಲಿಸಿದ್ದರು.
ಬರೋಬ್ಬರಿ ಐದು ವರ್ಷಳ ಕಾಲ ಈ ಪ್ರಕರಣದ ವಿಚಾರಣೆ ನಡೆದು ಬುಧವಾರ ನ್ಯಾಯಾಲಯ ತೀರ್ಪು ನೀಡಿತ್ತು.

ರೂಪಾ ಶಶಿಧರ್ ನಾಮಪತ್ರ ಅಂಗೀಕಾರ
ಕೆ.ಎಚ್.ಮುನಿಯಪ್ಪ ಪುತ್ರಿ, ಕೆಜಿಎಫ್ ಕಾಂಗ್ರೆಸ್ ಅಭ್ಯರ್ಥಿ ರೂಪಾ ಶಶಿಧರ್ ನಾಮಪತ್ರದ ಬಗ್ಗೆಯೂ ತಕರಾರು ಎದ್ದಿತ್ತು. ಅವರ ಹೆಸರು ಎರಡು ಕಡೆ ಮತದಾರರ ಪಟ್ಟಿಯಲ್ಲಿದೆ ಎಂದು ತಕರಾರು ತೆಗೆಯಲಾಗಿತ್ತು.
ಆದರೆ ಅವರ ನಾಮಪತ್ರವನ್ನು ಚುನಾವಣಾ ಆಯೋಗ ಅಂಗೀಕರಿಸಿದೆ. ಹೀಗಾಗಿ ಅವರು ಚುನಾವಣೆಗೆ ಸ್ಪರ್ಧಿಸಬಹುದಾಗಿದೆ.

ಶಿವಮೊಗ್ಗ ಗ್ರಾಮೀಣ ಕಾಂಗ್ರೆಸ್ ಅಭ್ಯರ್ಥಿಯೂ ಸ್ಪರ್ಧಿಸುವಂತಿಲ್ಲ
ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದ ಡಾ. ಎಸ್. ಕೆ. ಶ್ರೀನಿವಾಸ್ ಚುನಾವಣೆ ಸ್ಪರ್ಧೆಯೊಡ್ಡುವುದಕ್ಕೆ ನ್ಯಾಯಾಲಯ ಬುಧವಾರ ತಡೆಯಾಜ್ಞೆ ನೀಡಿದೆ.
ಡಾ. ಎಸ್. ಕೆ. ಶ್ರೀನಿವಾಸ್ ಮಾಜಿ ಶಾಸಕ ಕರಿಯಣ್ಣನವರ ಪುತ್ರರಾಗಿದ್ದು ವೃತ್ತಿಯಲ್ಲಿ ಸರಕಾರಿ ವೈದ್ಯರಾಗಿದ್ದರು. ಅವರು ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ಸರಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

221 ಕಡೆ ಮಾತ್ರ ಕಾಂಗ್ರೆಸ್ ಸ್ಪರ್ಧೆ
ಒಬ್ಬರು ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿರುವುದರಿಂದ ಹಾಗೂ ಒಬ್ಬರ ಸ್ಪರ್ಧೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಕಳೆದುಕೊಂಡಿದೆ. ಜೊತೆಗೆ ಮೇಲುಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಿಲ್ಲ.
ಹೀಗಾಗಿ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೇವಲ 221 ಕ್ಷೇತ್ರಗಳಲ್ಲಿ ಮಾತ್ರ ಚುನಾವಣೆಗೆ ಸ್ಪರ್ಧಿಸುತ್ತಿದೆ.
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್











Click it and Unblock the Notifications