HD Kumaraswamy: ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್: ಹೆಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಮಂಡ್ಯ, ಡಿಸೆಂಬರ್‌ 26: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ಸರಕಾರ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋಗಳು ಇರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Fake Gandhis Are Flourishing In Belagavi At Expense Of People s Tax Money HD Kumaraswamy

ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು. ಅವರ ಕಾಂಗ್ರೆಸ್ ಈಗಿಲ್ಲ. ಈಗ ಇರುವುದು ಆಲಿಬಾಬ ಮತ್ತು 40 ಮಂದಿ ಕಳ್ಳರ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಗಾಂಧೀಜಿ ಅವರ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟರು ಅವರು. ಗಾಂಧೀಜಿ ಅವರ ರಾಮರಾಜ್ಯದ ಪರಿಕಲ್ಪನೆ ಇವತ್ತು ರಾಜ್ಯದಲ್ಲಿ ಸಾಕಾರ ಆಗಿದೆಯಾ? ಅವರ ಗ್ರಾಮ ಸ್ವರಾಜ್ಯದ ಕನಸು ಈಡೇರಿದೆಯಾ? 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಗ್ರಾಮಗಳ ಅಭಿವೃದ್ಧಿಗಾಗಿ ಪಂಚಾಯಿತಿಗಳಿಗೆ ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ₹448.29 ಕೋಟಿ ಬಳಕೆ ಮಾಡಿಲ್ಲ. ಈ ಹಣ ಬಿಡುಗಡೆಯಾಗಿ ಹಲವಾರು ತಿಂಗಳೇ ಕಳೆದಿದ್ದರೂ ಇನ್ನೂ ಪಂಚಾಯತಿಗಳಿಗೆ ಆ ಹಣ ಹೋಗಿಲ್ಲ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ದಯನೀಯವಾಗಿದೆ. ಗುಣಮಟ್ಟದ ಚಿಕಿತ್ಸೆ ದೊರೆಯದೆ ಬಾಣಂತಿಯರು, ಮಕ್ಕಳ ಸರಣಿ ಸಾವುಗಳು ಸಂಭವಿಸುತ್ತಿವೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.756 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಿದ್ದ ಮೇಲೆ ಆಡಳಿತ ಹೇಗೆ ಉತ್ತಮವಾಗಿರಲು ಸಾಧ್ಯ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರಕಾರ ಪ್ರತಿದಿನವೂ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದೆ. ಜನರಿಗೆ ಇನ್ನೂ ಎರಡು ಸಾವಿರ ರೂಪಾಯಿ ಕೊಡಲಿ, ನಮ್ಮ ಅಭ್ಯಂತವಿಲ್ಲ. ಆದರೆ, ಮಿತಿ ಮೀರಿದ ತೆರಿಗೆ ಹೇರಿಕೆ ಮಾಡುತ್ತಿದ್ದಾರೆ. ಎರಡು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ ಎರಡು ಸಾವಿರ ರೂಪಾಯಿ ಕೊಡಲಿಕ್ಕೆ ಇವರೇ ಬೇಕಾ? ಬೇಕಾಬಿಟ್ಟಿಯಾಗಿ ಆ ಸಾಲ ತೀರಿಸುವವರು ಯಾರು? ಜನ ಸಾಮಾನ್ಯರೇ ಆ ಸಾಲ ತೀರಿಸಬೇಕಲ್ವಾ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕುಮಾರಸ್ವಾಮಿ

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿ ರಾಜ್ಯದ ಮೂವರು ಯೋಧರು ಹುತಾತ್ಮರಾಗಿವುದಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಂಬಿನಿ ಮಿಡಿದಿದ್ದಾರೆ. ಅಪಘಾತದಲ್ಲಿ ಯೋಧರು ಸಾವನ್ನಪ್ಪಿದ ವಿಚಾರ ತಿಳಿದು ನನಗೆ ಬಹಳ ದುಃಖವಾಯಿತು. ಮೃತ ಯೋಧರಲ್ಲಿ ಮೂವರು ಕನ್ನಡಿಗರು ಇದ್ದಾರೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ. ಆ ಅನಾಹುತ ಕರುಣಾಜನಕ ಘಟನೆ. ಕೇಂದ್ರ ಸರಕಾರ ಆ ಕುಟುಂಬಗಳ ನೆರವಿಗೆ ನಿಲ್ಲಲಿದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+