ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ: ನಿಜವೇ?

|
Google Oneindia Kannada News

ಬೆಂಗಳೂರು, ಜನವರಿ 11: ಗ್ರಾಮ ಪಂಚಾಯಿತಿ ಚುನಾವಣೆ 2020 ವರ್ಷದ ವೇಳಾಪಟ್ಟಿಯನ್ನು ರಾಜ್ಯಸರ್ಕಾರ ಪ್ರಕಟಿಸಿದೆ. ಎಂಬ ಒಕ್ಕಣೆಯೊಂದಿಗೆ ರಾಜ್ಯಪತ್ರದ ಚಿತ್ರವೊಂದು ಹರಿದಾಡುತ್ತಿದೆ.

ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿದೆ. ಈ ಚುನಾವಣೆಗಳನ್ನು ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ನಡೆಸಲಿದೆ ಎಂದು ಮುದ್ರಿತವಾಗಿರುವ ರಾಜ್ಯಪತ್ರದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು. ಈ ಸುದ್ದಿ ಸುಳ್ಳಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಹಾಸನ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಪಂಚಾಯಿತಿಗಳಿಗೆ ನಡೆಸಲಾಗುತ್ತದೆ ಎಂಬ ಮಾಹಿತಿ ಇದರಲ್ಲಿದೆ, ಆದರೆ ಯಾರೋ ಕಿಡಿಗೇಡಿಗಳು ರಾಜ್ಯಪತ್ರದ ಹಳೆಯ ಪ್ರತಿಯನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ರಾಜ್ಯದ ಆರು ನಗರಸಭೆ, ಪುರಸಭೆ, ಪಂಚಾಯಿತಿ ಚುನಾವಣೆ: ಸಿದ್ಧತೆಗೆ ಸೂಚನೆರಾಜ್ಯದ ಆರು ನಗರಸಭೆ, ಪುರಸಭೆ, ಪಂಚಾಯಿತಿ ಚುನಾವಣೆ: ಸಿದ್ಧತೆಗೆ ಸೂಚನೆ

ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ

ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ

'ಒನ್‌ಇಂಡಿಯಾ ಕನ್ನಡ'ವು ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಳಿ ಮಾಹಿತಿ ಕೇಳಿದಾಗ, 'ಗ್ರಾಮ ಪಂಚಾಯಿತಿ ಚುನಾವಣೆಗೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ, ಚುನಾವಣೆ ಸಮಯ ಸಮೀಪಿಸಿರುವ ಕಾರಣ ಹೀಗೊಂದು ಸುಳ್ಳು ಸುದ್ದಿ ಹರಿದಾಡುತ್ತಿರಬಹುದು' ಎಂದು ಸ್ಪಷ್ಟನೆ ನೀಡಿದ್ದಾರೆ.

ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಸ್ಪಷ್ಟನೆ

ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಸ್ಪಷ್ಟನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರೂ ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಗೆಜೆಟ್ ನೋಟಿಫಿಕೇಶನ್ ನಕಲಿ ಆಗಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿಯೂ ಅವರು ಹೇಳಿದ್ದಾರೆ.

ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಸೂಚನೆ

ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಸೂಚನೆ

ಕೆಲವು ದಿನಗಳ ಹಿಂದಷ್ಟೆ ರಾಜ್ಯದ ಆರು ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಚುನಾವಣಾ ಆಯೋಗ ಸೂಚಿಸಿತ್ತು. ಇದನ್ನು ಹೊರತುಪಡಿಸಿದರೆ ಗ್ರಾಮ ಪಂಚಾಯಿತಿ ಚುನಾವಣೆಗೆ ಯಾವುದೇ ಅಧಿಸೂಚನೆ ಇನ್ನೂ ಹೊರಡಿಸಿಲ್ಲ.

ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ

ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ

ಹೊಸಕೋಟೆ, ಚಿಕ್ಕಬಳ್ಳಾಪುರ, ಹುಣಸೂರು, ಶಿರಗುಪ್ಪ ನಗರಸಭೆ, ಸಿಂಧಗಿ ಪುರಸಭೆ, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಸಬೇಕಿದ್ದು, ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ ಆರಂಭಿಸಿರೆಂದು ಸೂಚನೆ ರವಾನೆ ಆಗಿದೆ. ಆದರೆ ದಿನಾಂಕ ಇಂದು ಪ್ರಕಟಗೊಂಡಿಲ್ಲ.

English summary
A fake news spreading in social media that Karnataka election commission has announced Gram Panchayat elections. State election commission confirmed that news is fake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X