ದೇವೇಗೌಡರ ಆರೋಗ್ಯದಲ್ಲಿ ಏರುಪೇರು? ಮಾಜಿ ಪ್ರಧಾನಿ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಆತಂಕ ಏಕೆ?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಈಗ ಸಂಚಲನ ಸೃಷ್ಟಿ ಮಾಡಿದೆ. ಒಂದು ಕಡೆ ಕನ್ನಡಿಗರ ಮರ್ಯಾದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಹರಾಜು ಆಗುತ್ತಿದ್ದು, ನಮ್ಮ ರಾಜ್ಯದ ಸಂಸದನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು, ತಮ್ಮ ಮಗ ರೇವಣ್ಣ & ಮೊಮ್ಮಗ ಪ್ರಜ್ವಲ್ ವಿರುದ್ಧ ಕೇಳಿಬಂದ ಗಂಭೀರ ಆರೋಪಗಳಿಂದ ಚಿಂತೆಗೆ ಜಾರಿದ್ದಾರೆ ಎನ್ನಲಾಗಿದೆ.

ಹೌದು, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಆರೋಪ ಪ್ರಕರಣ ಇದೀಗ ದೊಡ್ಡ ತಿರುವು ಪಡೆಯುತ್ತಿದೆ. ಒಂದು ಕಡೆ ಪ್ರಜ್ವಲ್ ರೇವಣ್ಣ ಭಾರತ ಬಿಟ್ಟು ಓಡಿ ಹೋಗಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಇನ್ನೊಂದು ಕಡೆ ರೇವಣ್ಣ ಅವರನ್ನು ಅರೆಸ್ಟ್ ಮಾಡಿದೆ ಎಸ್‌ಐಟಿ ತಂಡ. ಬಂಧನಕ್ಕೆ ಒಳಗಾಗಿರುವ ಎಚ್.ಡಿ. ರೇವಣ್ಣ ಇದೀಗ ಎಸ್‌ಐಟಿ ಅಧಿಕಾರಿಗಳಿಂದ, ವಿಚಾರಣೆ ಕೂಡ ಎದುರಿಸುತ್ತಿದ್ದಾರೆ. ಪರಿಸ್ಥಿತಿ ಹೀಗೆ ಕೈಮೀರಿ ಹೋಗಿರುವ ಸಮಯದಲ್ಲೇ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಹಬ್ಬಿದೆ.

Fans Are Worried About The HD Deve Gowda Health For This Reason

ದೇವೇಗೌಡರ ಆರೋಗ್ಯಕ್ಕೆ ಏನಾಯ್ತು?

ಮಾಜಿ ಪ್ರಧಾನಿ ದೇವೇಗೌಡರು ಕನ್ನಡ ನಾಡಿನ ಹೆಮ್ಮೆ, ದೇವೇಗೌಡರು ಪ್ರಧಾನಿ ಆಗಿದ್ದಾಗ ಕರ್ನಾಟಕ ಸೇರಿದಂತೆ ಇಡೀ ಭಾರತದ ನೀರಾವರಿ ವಿಭಾಗಕ್ಕೆ ಸಲ್ಲಿಸಿದ ಸೇವೆ ಯಾರು ಕೂಡ ಮರೆಯಲು ಆಗದು. ಕಾಶ್ಮೀರ ಟು ಕನ್ಯಾಕುಮಾರಿ ದೇವೇಗೌಡರ ಹೆಸರು ದೊಡ್ಡ ಮಟ್ಟದಲ್ಲಿ ಇದೆ. ಆದರೆ ಮಾಜಿ ಪ್ರಧಾನಿ ದೇವೇಗೌಡರ ಮಗ ರೇವಣ್ಣ & ಮೊಮ್ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಕೇಸ್ ಉರುಳಾಗಿ ಪರಿಣಮಿಸಿದೆ. ಪರಿಸ್ಥಿತಿ ಹೀಗಿದ್ದಾಗ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಯಾರೋ ಮಾಡಿರುವ ತಪ್ಪಿನಿಂದ ದೇವೇಗೌಡರು ನೋವು ಅನುಭವಿಸುವ ಪರಿಸ್ಥಿತಿ ಬಂದಿದೆ ಅಂತಾ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ?

ಇದು ಮಾತ್ರವಲ್ಲ ಜೆಡಿಎಸ್ ಕಾರ್ಯಕರ್ತರು ಕೂಡ ಈ ವಿಚಾರವಾಗಿ ಬೇಸರ ಹೊರಹಾಕಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದ ಅಶ್ಲೀಲ ವಿಡಿಯೋ ವೈರಲ್ ಕೇಸ್ ಈಗ ಸಂಚಲನ ಸೃಷ್ಟಿ ಮಾಡಿದ್ದು, ಕಠಿಣ ಕ್ರಮಕ್ಕೆ ಕೂಡ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷದೊಳಗಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿದೆ. ಆದ್ರೆ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂಬ ಒತ್ತಾಯ ಕೂಡ ಕೇಳಿಬಂದಿದೆ. ಇನ್ನು ನಿನ್ನೆ ಕೂಡ ನಿಖಿಲ್ ಕುಮಾರಸ್ವಾಮಿ ತಮ್ಮ ತಾತ ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬಂದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+